ಸ್ವಸಹಾಯ ಸಂಘಗಳಲ್ಲಿ ತೊಡಗಿಸಿಕೊಂಡರೆ ಆರ್ಥಿಕ ಅಭಿವೃದ್ಧಿ ಸಾಧ್ಯ:ನರೇಂದ್ರ ಮೋದಿ

Monday, October 30th, 2017
rupay card

ಮಂಗಳೂರು: ಮೀನುಗಾರಿಕೆಗೆ ರಜಾ ಇರುವ 45 ದಿನಗಳ ಅವಧಿಯಲ್ಲಿ ಬೆಳೆಯಬಹುದಾದ ಔಷಧಿ ಮಹತ್ವದ ಜಲ ಸಸ್ಯ ಕೃಷಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳು ತೊಡಗಿಸಿಕೊಂಡರೆ ಮೀನುಗಾರರೂ ಸೇರಿದಂತೆ ತಳ ಸಮುದಾಯದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉಜಿರೆಯ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಬೃಹತ್ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರುಪೇ ಕಾರ್ಡ್ ವಿತರಣೆ, ತಂತ್ರಾಂಶ ಆಧಾರಿತ […]

ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ವಹಿಸುತ್ತಿರುವ ಕಾರ್ಯದ ಬಗ್ಗೆ ಅಮೆರಿಕಾ ಅಧ್ಯಯನ ತಂಡ ಶ್ಲಾಘನೆ

Wednesday, January 4th, 2017
SCDCC

ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ವಿಶೇಷವಾಗಿ ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಕಾರ್ಯನಿರ್ವಹಣೆಯನ್ನು ಅಮೆರಿಕಾದ ಪ್ರತಿಷ್ಠಿತ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ಪ್ರಾಧ್ಯಾಪಕರು ಮತ್ತು ಅಧ್ಯಯನ ತಂಡ ಶ್ಲಾಘಿಸಿದೆ. ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಗೆ ಭೇಟಿ ನೀಡಿದ ಈ ಅಧ್ಯಯನ ತಂಡ, ಮೈಕ್ರೋ ಫೈನಾನ್ಸ್ ಮತ್ತು ಸ್ವಸಹಾಯ ಗುಂಪು ಯೋಜನೆಯ ಅನುಷ್ಠಾನದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ವಹಿಸುತ್ತಿರುವ ಕಾರ್ಯದ ಬಗ್ಗೆ ಅಧ್ಯಯನ ನಡೆಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಸಿಡಿಸಿಸಿ […]