ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಭೇಟಿ ಮಾಡಿ ಮಾತುಕತೆ ನಡೆಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ
Saturday, August 7th, 2021ಬಂಟ್ವಾಳ : ನೂತನ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಕಾಲಿಗೆ ಬಿದ್ದು ಆರ್ಶೀವಾದ ಪಡೆದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿ ಡಾ|ಪ್ರಭಾಕರ ಭಟ್ ಅವರನ್ನು ಭೇಟಿ ಮಾಡಿ ಕಾಲು ಮುಟ್ಟಿ ನಮಸ್ಕಾರ ಮಾಡಿದರು. ಪ್ರಭಾಕರ್ ಭಟ್ ಅವರಿಗೆ ಶಾಲು ಹೊದಿಸಿ ಸಿಹಿತಿಂಡಿ ಬಾಯಿಗೆ ತಿನ್ನಿಸಿದರು. ಬಳಿಕ ಕೆಲ ಹೊತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.