Blog Archive

ಆರ್ ಅಶೋಕ ಅವರಿಂದ ಸಾವಿರಕ್ಕೂ ಅಧಿಕ ಜನರಿಗೆ ದಿನಸಿ ಕಿಟ್ ವಿತರಣೆ

Friday, July 16th, 2021
R Ashoka

ಬೆಂಗಳೂರು :  ಪದ್ಮನಾಭನಗರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಕಂದಾಯ ಸಚಿವ ಆರ್ ಅಶೋಕ ಅವರು ಹಾಲು ವಿತರಕರು, ಕೇಬಲ್ ಕಾರ್ಮಿಕರು ಮತ್ತು ಮನೆಕೆಲಸ ಮಾಡುವ ಸಾವಿರಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್‍ಗಳನ್ನು ವಿತರಿಸಿದರು. ಆ ನಂತರದಲ್ಲಿ ಸಚಿವರು ಶಿವಮೊಗ್ಗ ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳೊಂದಿಗೆ ರಾಷ್ಟ್ರೀಯ ಭದ್ರತೆ ಕುರಿತ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ರಾಷ್ಟ್ರೀಯ ಭದ್ರತೆ ಎಂಬುದು ಮತದಾನದ ವಿಷಯವಲ್ಲ. ಆದು ನಮಗೆ ಪ್ರಮುಖ ವಿಷಯವಾಗಿದೆ. ರಾಷ್ಟ್ರೀಯ ಭದ್ರತೆ ಎಂಬ ವಿಚಾರ […]

ಕರ್ನಾಟಕ ಆಡಳಿತ ಸುಧಾರಣೆಗಳ ಕುರಿತು ಕ್ಯಾಬಿನೆಟ್ ಉಪಸಮಿತಿ ಸಭೆ

Thursday, July 15th, 2021
R Ashoka

ಬೆಂಗಳೂರು  : ಕಂದಾಯ ಸಚಿವ ಶ್ರೀ ಆರ್ ಅಶೋಕ ಅವರು ಗುರುವಾರ ವಿಧಾನ ಸೌಧದಲ್ಲಿ ನಡೆದ ಕ್ಯಾಬಿನೆಟ್ ಉಪಸಮಿತಿ ಸಭೆಯಲ್ಲಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳ ಕುರಿತು ಚರ್ಚಿಸಿದರು. ನಾಲ್ಕು ಪ್ರಾದೇಶಿಕ ಆಯುಕ್ತರ ಹುದ್ದೆಗಳನ್ನು ರದ್ದುಗೊಳಿಸಿ, ಬೆಂಗಳೂರಿನಲ್ಲಿ ಪ್ರಾದೇಶಿಕ ಆಯುಕ್ತರನ್ನು ಸ್ಥಾಪಿಸುವ ಸಾಧ್ಯತೆಯ ಬಗ್ಗೆ ಚರ್ಚಿಸಿದರು. ನೆರೆಹೊರೆಯ ಯೋಜನಾ ಅಧಿಕಾರಿಗಳನ್ನು ಬಿಎಂಆರ್‍ಡಿಎಯೊಂದಿಗೆ ವಿಲೀನಗೊಳಿಸುವುದು, ಕಂದಾಯ ಇಲಾಖೆಯ ಪಿಂಚಣಿ ಯೋಜನೆಯಡಿ ವಿವಿಧ ಇಲಾಖೆಗಳ ಪಿಂಚಣಿ ಯೋಜನೆಗಳನ್ನು ತರುವುದು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ […]

ಕೋವಿಡ್ ನಿಂದ ಮಕ್ಕಳ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ: ಸಚಿವ ಆರ್ ಅಶೋಕ

Tuesday, July 13th, 2021
R Ashok

ಬೆಂಗಳೂರು  : ಸಂಭವನೀಯ ಮೂರನೇ ಅಲೆಯನ್ನು ನಿಭಾಯಿಸಲು ಕರ್ನಾಟಕ ಸರ್ಕಾರ ಸಜ್ಜಾಗಿದ್ದು, ಮಕ್ಕಳನ್ನ ಇದರಿಂದ ರಕ್ಷಿಸುವುದೇ ನಮ್ಮ ಪ್ರಥಮ ಆದ್ಯತೆಯಾಗಿದೆ” ಎಂದು ಕಂದಾಯ ಸಚಿವ ಶ್ರೀ ಆರ್ ಅಶೋಕ ಹೇಳಿದರು. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, “ತಜ್ಞರ ಶಿಫಾರಸುಗಳ ಆಧಾರದ ಮೇಲೆ, ನಾವು ಈಗಾಗಲೇ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದ್ದೇವೆ. ಔಷಧಿಗಳನ್ನು ಸಂಗ್ರಹಿಸುವುದರ ಜೊತೆಗೆ ಮಕ್ಕಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ವೈದ್ಯರಿಗೆ ತರಬೇತಿ ನೀಡುತ್ತಿದ್ದು, ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಕೋವಿಡ್ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. […]

ಮೂರನೇ ಅಲೆ ಎದುರಿಸಲು ಪದ್ಮನಾಭನಗರ ಕ್ಷೇತ್ರದಲ್ಲಿ ಎರಡು ಮಕ್ಕಳ ಆಸ್ಪತ್ರೆ: ಸಚಿವ ಅಶೋಕ

Tuesday, July 13th, 2021
R ashoka Hospital

ಬೆಂಗಳೂರು  : “ನಾವು ಕಳೆದ ಎರಡು ತಿಂಗಳಿಂದ ಆಹಾರ ಕಿಟ್‍ಗಳನ್ನು ಒದಗಿಸುತ್ತಿದ್ದೇವೆ ಮತ್ತು ಇನ್ನೂ ಹದಿನೈದು ದಿನಗಳವರೆಗೆ ಅದನ್ನು ಮುಂದುವರಿಸುತ್ತೇವೆ. ಎಲ್ಲಾ ಸಮುದಾಯಗಳು ಮತ್ತು ಕ್ಷೇತ್ರಗಳ ಜನರಿಗೆ ನಾವು ಕಿಟ್‍ಗಳನ್ನು ಒದಗಿಸಿದ್ದೇವೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು “ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ನಾವು ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಪ್ರಮುಖ ಪಾಠವೆಂದರೆ ನಾವೆಲ್ಲರೂ ಒಂದೇ ಕುಟುಂಬದ ಭಾಗವಾಗಿದ್ದೇವೆ ಮತ್ತು ಬಿಕ್ಕಟ್ಟಿನ […]

ನಿಯೋಜಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸ್ವಾಗತಿಸಿದ ಕಂದಾಯ ಸಚಿವ ಆರ್ ಅಶೋಕ

Sunday, July 11th, 2021
R Ashoka

ಬೆಂಗಳೂರು  : ಕರ್ನಾಟಕ ಸರ್ಕಾರದ ಪರವಾಗಿ ಕಂದಾಯ ಸಚಿವ ಶ್ರೀ ಆರ್ ಅಶೋಕ ಅವರು ಶನಿವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಯೋಜಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸ್ವಾಗತಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಶ್ರೀ ಗೆಹ್ಲೋಟ್ ಒಬ್ಬ ಅನುಭವಿ ರಾಜಕಾರಣಿ ಮತ್ತು ಈ ಹಿಂದೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಬಡ ಜನರ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದು, ರಾಜ್ಯದ ಕುರಿತಂತೆ ಮಾಹಿತಿ ಉಳ್ಳವರಾಗಿದ್ದಾರೆ. ಆದ್ದರಿಂದ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ಮಾಡುವುದು […]

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ ಸಮಸ್ಯೆಗಳು ಶೀಘ್ರ ಪರಿಹಾರ: ಆರ್ ಅಶೋಕ

Friday, July 9th, 2021
R Ashoka

ಬೆಂಗಳೂರು  : ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ಶೀಘ್ರವಾಗಿ ಸರಿಪಡಿಸಬೇಕು, ಸರ್ವರ್ ಮತ್ತು ಒಟಿಪಿ ಸಮಸ್ಯೆಯನ್ನು ತಕ್ಷಣವೇ ಸರಿಪಡಿಸಬೇಕು ಎಂದು ಕಂದಾಯ ಸಚಿವ ಆರ್ ಅಶೋಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯ ಸಮಯದಲ್ಲಿ ಸರ್ವರ್ ಮತ್ತು ಒಟಿಪಿಯಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿನ ಸಮಸ್ಯೆಗಳ ಬಗೆಗೆ ವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಶಿವರಾಮ್ ಕಾರಂತ್ ಬಡಾವಣೆಯಲ್ಲಿನ ಸರ್ಕಾರಿ ಜಮೀನನ್ನು ಬಿಡಿಎಗೆ […]

ಕುಶಾಲನಗರ ನೂತನ ತಾಲ್ಲೂಕು ಅಸ್ತಿತ್ವಕ್ಕೆ ಆರ್ ಅಶೋಕ ಚಾಲನೆ

Wednesday, July 7th, 2021
Kushal Nagara

ಕುಶಾಲನಗರ  : ಕಂದಾಯ ಸಚಿವರಾದ ಆರ್ ಅಶೋಕ ಅವರು ನೂತನವಾಗಿ ರಚನೆಗೊಂಡಿರುವ ಕೊಡಗು ಜಿಲ್ಲೆಯ ಐದನೇ ತಾಲ್ಲೂಕು ಕುಶಾಲನಗರದ ಅಧಿಕೃತ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಆರ್. ಅಶೋಕ ಅವರು “ಕುಶಾಲನಗರ ತಾಲ್ಲೂಕು ಕೇಂದ್ರವಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು 20-30 ಬಾರಿ ಕಚೇರಿಗೆ ಬಂದು ವಿನಂತಿಸಿದ್ದಾರೆ. ಅಪ್ಪಚ್ಚುರಂಜನ್ ಅವರ ಪ್ರಯತ್ನದಿಂದ ಕುಶಾಲನಗರ ತಾಲ್ಲೂಕು ಕೇಂದ್ರವಾಗಿದೆ. ಇಲ್ಲಿನ ಶಾಸಕರ ಹೋರಾಟದ ಫಲವಾಗಿ ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ” ಎಂದು ಕಂದಾಯ ಸಚಿವರು ಹೇಳಿದರು. “ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ […]

ಮುಂದಿನ ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ: ಆರ್ ಅಶೋಕ

Saturday, July 3rd, 2021
R Ashoka

ಬೆಂಗಳೂರು  : ಕೋವಿಡ್ ವಿರುದ್ಧ ಜಯ ಸಾಧಿಸಲು ಮೊದಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಇನ್ನು ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಒದಗಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ನಾವು ಪದ್ಮನಾಭನಗರ ಕ್ಷೇತ್ರದಲ್ಲಿ ವಾರ್ಡ್ ಮಟ್ಟದ ವ್ಯಾಕ್ಸಿನೇಷನ್ ಶಿಬಿರಗಳನ್ನು ಸ್ಥಾಪಿಸುತ್ತೇವೆ. ಕರೋನಾದಂತಹ ಬಿಕ್ಕಟ್ಟಿನ ಈ ಸಮಯದಲ್ಲಿ ಅಗತ್ಯವಿರುವವರಿಗೆ ಕೈಲಾದಷ್ಟು ಸಹಾಯವನ್ನು ಮಾಡಬೇಕೆಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಶನಿವಾರ ಪದ್ಮನಾಭನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, “ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದೆ ಇರುವುದಕ್ಕೇ ಇದೇ ಕಾರಣ. ಹೂವಿನ […]

“ಕಾಂಗ್ರೆಸ್ ನಾಲ್ಕು ಗುಂಪುಗಳನ್ನು ಹೊಂದಿರುವ ಒಂದೇ ಪಕ್ಷ” ಕಂದಾಯ ಸಚಿವ ಆರ್ ಅಶೋಕ್

Monday, June 28th, 2021
Kempe gowda

ಬೆಂಗಳೂರು  :  ನಮ್ಮಲ್ಲಿ ಒಂದೇ ಬಾಗಿಲು ಒಬ್ಬರೇ ನಾಯಕರು, ಕಾಂಗ್ರೆಸ್‍ನಲ್ಲಿ ಒಂದೇ ಮನೆ ನಾಲ್ಕು ಬಾಗಿಲು” ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ, ನಮ್ಮಲ್ಲಿ ಬಿದ್ದಿರುವ ನೊಣದ ಬಗ್ಗೆ ಕಾಂಗ್ರೆಸ್‍ನವರು ಮಾತನಾಡುತ್ತಾರೆ. ಮೊದಲು ನಿಮ್ಮ ತಟ್ಟೆಯನ್ನು ಗಂಜಲ ಹಾಕಿ ಶುದ್ದಿ ಮಾಡಿ. ಆಮೇಲೆ ಬೇರೆಯವರನ್ನು ಟೀಕೆ ಮಾಡಬಹುದು” ಎಂದರು. ದಲಿತರು ಸಿಎಂ ಆಗಬೇಕು ಅಂತ ಒಂದು ಬಾಗಿಲು, ಒಕ್ಕಲಿಗರು ಆಗಬೇಕು ಅಂತ ಒಂದು […]

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ ನಿರ್ಮಾಣ : ಆರ್ ಅಶೋಕ

Friday, June 25th, 2021
sub-registrar's-office

ಬೆಂಗಳೂರು  : ರಾಜ್ಯದ ಎಲ್ಲಾ ಜಿಲ್ಲೆಗಳು ಕೋವಿಡ್ 3 ನೇ ಅಲೆಯನ್ನು ಎದುರಿಸಲು ಸನ್ನದ್ಧರಾಗಬೇಕು. ತಕ್ಷಣವೇ ಮಕ್ಕಳ ಆಸ್ಪತ್ರೆಗಳನ್ನು ಸಿದ್ಧಪಡಿಸಬೇಕೆಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದೇನೆ. ಮುಖ್ಯವಾಗಿ ಮಕ್ಕಳಿಗೆ ಚಿಕಿತ್ಸೆ ನೀಡುವ ವೇಳೆ ಪಾಲಕರು ಜೊತೆಗಿರಬೇಕಾಗುತ್ತದೆ. ಹೀಗಾಗಿ ಅವರಿಗೂ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದ್ದೇನೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಇಂದು ಕೊರಟಗೆರೆಯಲ್ಲಿ ನೂತನ ಉಪನೋಂದಣಾಧಿಕಾರಿಗಳ ಕಚೇರಿ ಉದ್ಘಾಟಿಸಿ ಮಾತನಾಡಿದ ಸಚಿವರು, “ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವೈದ್ಯರಿಗೂ ಮಕ್ಕಳಿಗೆ ಚಿಕಿತ್ಸೆ ನೀಡಲು 10 […]