ಧರ್ಮಸ್ಥಳ ಲಕ್ಷದೀಪೋತ್ಸವ : ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ
Sunday, December 1st, 2024ಉಜಿರೆ: ಭಾರತ ಜನನನಿಯ ತನುಜಾತೆಯಾದ ಕರ್ನಾಟಕದಲ್ಲಿ ಶ್ರಮಸಂಸ್ಕೃತಿಯ ಲೋಪದಿಂದಾಗಿ ಕನ್ನಡ ಸೊರಗುತ್ತಿದೆ. ಯಾವುದೇ ಭಾಷೆಗೆ ವಿಚಾರಗಳನ್ನು ಭಾವನೆಗಳನ್ನು ಮತ್ತು ವ್ಯವಹಾರವನ್ನು ಸ್ಪಷ್ಟವಾಗಿ ಅಭಿವ್ಯಕ್ತಿಗೊಳಿಸುವ ಶಕ್ತಿ, ಸಾಮರ್ಥ್ಯ ಮತ್ತು ಪ್ರಭುತ್ವ ಇರಬೇಕು. ಈ ದಿಸೆಯಲ್ಲಿ ಪ್ರಾದೇಶಿಕ ವೈವಿಧ್ಯತೆಯ ಸೊಗಡು ಇದ್ದರೂ ಕನ್ನಡ ಸಮೃದ್ಧ ಭಾಷೆಯಾಗಿದೆ. ಪದಸಂಪತ್ತಿಗೆ ಕೊರತೆ ಇಲ್ಲ. ಯಾವುದೇ ಏರಿಳಿತ, ಅಡೆ-ತಡೆ ಎದುರಿಸುವ ಸಾಮರ್ಥ್ಯ ಕನ್ನಡಕ್ಕಿದೆ ಎಂದು ಶತಾವಧಾನಿ ಆರ್. ಗಣೇಶ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 92ನೆ ಅಧಿವೇಶನ […]