ಡಾ. ಅಯ್ಯಪ್ಪ ದೊರೆ ಕೊಲೆ ಪ್ರಕರಣ : ಸುಧೀರ್ ಅಂಗೂರ್ ಬಂಧನ

Thursday, October 17th, 2019
sudeer-angoor

ಬೆಂಗಳೂರು : ಡಾ. ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧೀರ್ ಅಂಗೂರ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳವಾರ ರಾತ್ರಿ ವಾಕಿಂಗ್ ಹೋಗಿದ್ದ ವೇಳೆ ಅಯ್ಯಪ್ಪ ದೊರೆಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಡಾ. ಅಯ್ಯಪ್ಪ ದೊರೆ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಆರ್. ಟಿ. ನಗರ ಪೊಲೀಸರು ಸುಧೀರ್ ಅಂಗೂರ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಲಯನ್ಸ್ ವಿಶ್ವವಿದ್ಯಾಲಯದ ವಿವಾದದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸುಪಾರಿ ನೀಡಿ ಅಯ್ಯಪ್ಪ ದೊರೆ ಹತ್ಯೆ ಮಾಡಿಸಲಾಗಿದೆ […]

ಐಟಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ ಆರೋಪಿ ಬಂಧನ

Saturday, October 13th, 2018
income-tax

ಬೆಂಗಳೂರು: ಫೇಸ್ಬುಕ್‌ನಲ್ಲಿ ಐಟಿ ಅಧಿಕಾರಿ ಎಂದು ಪರಿಚಯಿಸಿಕೊಂಡು ಐಟಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ 5.8 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ನಿವಾಸಿ ನವೀನ್‌ಕುಮಾರ್ ಬಂಧಿತ ಆರೋಪಿ. ಪಿಯುಸಿ ವ್ಯಾಸಂಗ ಮಾಡಿದ್ದ ನವೀನ್, ಆರ್.ಟಿ.ನಗರದ ಹೆಲ್ತ್ ಕ್ಲಬ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡಿದ್ದ.‌ ಆಕೆಯ ಸ್ನೇಹ ಸಂಪಾದಿಸಿಕೊಂಡಿದ್ದ. ತಾನು ಐಟಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಿಮಗೂ ಐಟಿ ಇಲಾಖೆಯಲ್ಲಿ ಅಧಿಕಾರಿ ಕೆಲಸ […]