ನಾಡು-ನುಡಿ ಸಂಸ್ಕೃತಿಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ದಿನಗಣನೆ ಆರಂಭ

Tuesday, November 15th, 2016
alwas nudisiri

ಮಂಗಳೂರು: ಆಳ್ವಾಸ್ ಶಿಕ್ಷಣ ಸಂಸ್ಥೆ ಹಮ್ಮಿಕೊಳ್ಳುವ ನಾಡು-ನುಡಿಯ ಸಂಸ್ಕೃತಿಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ದಿನಗಣನೆ ಆರಂಭವಾಗಿದೆ. ಮೂಡಬಿದ್ರೆಯ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ಇದೇ ತಿಂಗಳ 18, 19 ಮತ್ತು 20ರಂದು ನಡೆಯುವ ಸಮ್ಮೇಳನ ಕರ್ನಾಟಕ: ನಾಳೆಗಳ ನಿರ್ಮಾಣ ಎಂಬ ಪರಿಕಲ್ಪನೆಯಡಿಯಲ್ಲಿ ಆಯೋಜನೆಗೊಂಡಿದೆ. ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ಬಿ.ಎನ್. ಸುಮಿತ್ರಾ ಬಾಯಿ ವಹಿಸಲಿದ್ದಾರೆ. ಉದ್ಘಾಟನೆಯನ್ನು ಕವಿ, ಸಾಹಿತಿ ಡಾ. ಜಯಂತ್ ಕಾಯ್ಕಿಣಿ ನೆರವೇರಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನದ ರೂವಾರಿ ಡಾ. ಎಂ. ಮೋಹನ್ ಆಳ್ವ, ಮೂರು […]

ಸಂಸ್ಕೃತಿ ಅಗಾಧವಾಗಿ ಬೆಳೆದಾಗ ಧ್ವೇಷ ದೂರವಾಗುತ್ತದೆ: ಚಾರುಕೀರ್ತಿ ಪಂಡಿತಾಚರ್ಯವರ್ಯ ಸ್ವಾಮೀಜಿ

Friday, November 11th, 2016
alvas-chitrasiri

ಮಂಗಳೂರು: ಒಬ್ಬ ಚಿತ್ರ ಕಲಾವಿದ ಬಣ್ಣ ಮತ್ತು ರೇಖೆಗಳ ಮೂಲಕ ಜೀವನದ ವಿವಿಧ ಮಜಲುಗಳನ್ನು ಬಿಂಬಿಸುವ ಶಕ್ತಿಯನ್ನು ಹೊಂದಿದ್ದಾನೆ. ಕಲೆಯ ಬೆಳಕು ನಮ್ಮ ಮನಸ್ಸನ್ನು ಅರಳಿಸುವಂತಾಗಬೇಕು. ಧರ್ಮ, ನಂಬಿಕೆಗಳಿರುವ ಕಲಾವಿದ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಾನೆ. ಏಕತೆಯನ್ನು ಮೂಡಿಸುವಂತಹ ಕೆಲಸವಾದಾಗ ರಾಷ್ಟ್ರ ಸಮೃದ್ಧವಾಗಿ ಬೆಳೆಯುತ್ತದೆ. ಸಂಸ್ಕೃತಿ ಅಗಾಧವಾಗಿ ಬೆಳೆದಾಗ ಧ್ವೇಷ ದೂರವಾಗುತ್ತದೆ ಎಂದು ಮೂಡುಬಿದಿರೆ ಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚರ್ಯವರ್ಯ ಸ್ವಾಮೀಜಿ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆಪದವು ಆಳ್ವಾಸ್ ಪ್ರೌಢಶಾಲಾ ಆವರಣದಲ್ಲಿ ಮೂರು ದಿನಗಳು ನಡೆಯಲಿರುವ […]