ಮೀನುಗಾರರ ಬಲೆಗೆ ಬಿದ್ದ ಭಾರೀ ಗಾತ್ರದ ಗಿಟಾರ್ ಶಾರ್ಕ್ ಮೀನು

Monday, October 4th, 2021
Shark Fish

ಮಲ್ಪೆ :  ಅಪರೂಪದ ಹಾಗೂ ಭಾರೀ ಗಾತ್ರದ ಗಿಟಾರ್ ಶಾರ್ಕ್ ಮೀನು ಮಲ್ಪೆ ಬಂದರಿನಿಂದ ಸುಮಾರು 20 ನಾಟೇಕಲ್ ದೂರದಲ್ಲಿ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟಿಗೆ ಬಿದ್ದಿದೆ. ಅಕ್ಕಪಕ್ಕ ಬೆನ್ನ ಮೇಲೆ ಅಗಲ ರೆಕ್ಕೆಯಿರುವ ಈ ಮೀನು ಲುಕ್ಮನ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟಿನಲ್ಲಿನ ಮೀನುಗಾರರು ಬೀಸಿದ ಬಲೆಗೆ ಬಿದ್ದಿದೆ. ಅಂಜಲ್, ಬಂಗುಡೆ ಮೀನಿನ ಜೊತೆಗೆ ಈ ಮೀನು ಬಿದ್ದಿದೆ. ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಹಾಗೂ ಹೆಲಿಕಾಪ್ಟರ್ ಫಿಶ್ ಎಂಬುದಾಗಿ ಕರೆಯುತ್ತಾರೆ. ಈ ಮೀನು ಸುಮಾರು 84 ಕೆ.ಜಿ. ತೂಗುತ್ತಿತ್ತು. ಕೇರಳಿಗರು […]

ಉಳ್ಳಾಲದ ಸಮುದ್ರ ಕಿನಾರೆಯಲ್ಲಿ ಪತ್ತೆಯಾದ ಬೃಹತ್ ಕಡಲು ಹಂದಿಯ ಕಳೇಬರ

Thursday, February 4th, 2021
Ullal Timingila

ಮಂಗಳೂರು : ಉಳ್ಳಾಲದ ಮೊಗವೀರ ಪಟ್ಣದ ಸಮುದ್ರ ಕಿನಾರೆಯಲ್ಲಿ ಕಡು ನೀಲಿ ಬಣ್ಣದ ತಿಮಿಂಗಿಲ ಮಾದರಿಯ ಬೃಹತ್ ಕಡಲು ಹಂದಿಯ ಕಳೇಬರ ಪತ್ತೆಯಾಗಿದೆ. ಸಮುದ್ರದಲ್ಲಿರುವ ಕಡಲು ಹಂದಿಗಳು ಸಾಧಾರಣವಾಗಿ ತಿಮಿಂಗಿಲಗಳನ್ನೇ ಹೋಲುತ್ತವೆ. ತಿಮಿಂಗಿಲದ್ದೇ ಒಂದು ಪ್ರಭೇದವಾಗಿದ್ದು ಸ್ಥಳೀಯರು ಆಡುಭಾಷೆಯಲ್ಲಿ ಕಡಲು ಹಂದಿ ಎನ್ನುತ್ತಾರೆ. ಸ್ಥಳೀಯ ಮೀನುಗಾರರ ಪ್ರಕಾರ, ಇದು ತಿಮಿಂಗಿಲ ಅಲ್ಲ. ಕಡಲು ಹಂದಿಯಂತೆ. ಸುಮಾರು ಹತ್ತು ಫೀಟ್ ಉದ್ದವಿದೆ. ಸ್ಥಳೀಯರು ತಿಮಿಂಗಿಲದ ಕಳೇಬರವನ್ನು ಕಡಲಿಗೆ ದೂಡಿರುವುದಾಗಿ ತಿಳಿದು ಬಂದಿದೆ. ಆದರೆ ಇದು ಹೆಚ್ಚು ಕೊಳೆತಿರಲಿಲ್ಲ. ಸಾಮಾನ್ಯವಾಗಿ […]