ಹೂಹಾಕುವ ಕಲ್ಲು ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಆಹಾರ ಕಿಟ್ ಮತ್ತು ಸಹಾಯಧನ ವಿತರಣೆ

Sunday, May 30th, 2021
RSS-Balepuni

ಮಂಗಳೂರು  : ರಾಷ್ಟ್ರೀಯ ಸ್ವಯಂಸೇವಕ ಸಂಘ ಹೂಹಾಕುವ ಕಲ್ಲು ಶಾಖೆ ಬಾಳೆಪುಣಿ, ಬಂಟ್ವಾಳ ತಾಲೂಕು ಇದರ ವತಿಯಿಂದ ಬಾಳೆಪುಣಿ ಪಂಚಾಯತ್ ವ್ಯಾಪ್ತಿಗೊಳಪಟ್ಟ 12 ಮಂದಿ ಆಶಾ ಕಾರ್ಯಕರ್ತೆಯರು ಮತ್ತು ಕಿರಿಯ ಆರೋಗ್ಯ ಸಹಾಯಕಿಯರಿಗೆ ಆಹಾರ ಕಿಟ್ ಮತ್ತು ಸಹಾಯಧನದ ವಿತರಣಾ ಕಾರ್ಯಕ್ರಮ ನಡೆಯಿತು. ಮಹಾಮಾರಿ ಕೋರೊನದ ವಿರುದ್ಧ ನಿಯೋಜಿಸಲ್ಪಟ್ಟ ಪ್ರಜೆಗಳ ಮನೆ ಬಾಗಿಲಿಗೆ ಸಂದರ್ಶಿಸಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಸಮಾಜದ ಭಾಗ್ಯತಾರೆಗಳಾದ ಆಶಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಊರಿನ ಸಹೃದಯ ದಾನಿಗಳ ನೆರವಿನಿಂದ ಗೌರವಿಸಲಾಯಿತು ಇಂದು ಬಾಳೆಪುಣಿ ಗ್ರಾಮದ […]

ವೃದ್ಧೆ ತಾಯಿಯನ್ನೇ ರಸ್ತೆಯಲ್ಲಿ ಬಿಟ್ಟ ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆ ಹಾಗೂ ಮನೆಯವರು

Tuesday, February 2nd, 2021
elderly Woman

ಬೆಳ್ತಂಗಡಿ  : ಐದು ಜನ ಮಕ್ಕಳು  ವೃದ್ಧೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ಹೇಳಲಾಗಿದೆ. ಒಬ್ಬ ಪುತ್ರ ಮಂಗಳೂರಿನಲ್ಲಿ  ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಖಾಸಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ. ಬೀದಿಯಲ್ಲಿದ್ದ ವೃದ್ದೆಯನ್ನು ಗಮನಿಸಿದ ಸಾರ್ವಜನಿಕರು ದ.ಕ. ಜಿಲ್ಲಾ ಸಹಾಯವಾಣಿಗೆ ಕರೆ […]

ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯ ಮೇಲೆ ದೊಣ್ಣೆಯಿಂದ ಹಲ್ಲೆ, ದೂರು ದಾಖಲು

Thursday, July 9th, 2020
poonjalkatte-police

ಪುಂಜಾಲಕಟ್ಟೆ: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಚೆನ್ನೈ ತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಆಶಾ ಕಾರ್ಯಕರ್ತೆ ಕರ್ತವ್ಯ ನಿರ್ವಹಿಸುವಾಗ ಗುರುವಾರ ಘಟನೆ ಸಂಭವಿಸಿದೆ. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಅವರಿಗೆ ಇಲ್ಲಿಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಮಮತಾ ಅವರು ಕರ್ತವ್ಯದಲ್ಲಿರುವಾಗ ದೊಣ್ಣೆಯಿಂದ […]

ಆಶಾ ಕಾರ್ಯಕರ್ತೆ ನಾಪತ್ತೆ

Monday, June 22nd, 2020
sowmya

ಮಂಗಳೂರು  : ಯುವತಿ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐತೂರು ಗ್ರಾಮ ವ್ಯಾಪ್ತಿಯ ಆಶಾ ಕಾರ್ಯಕರ್ತೆ, ಕೊರೋನಾ ವಾರಿಯರ್ ಆಗಿ ಕೆಲಸ ಮಾಡಿಕೊಂಡಿರುತ್ತಿದ್ದ ಸೌಮ್ಯ (34) ಎಂಬವರು ಜೂನ್ 8ರಂದು ಗರ್ಭಿಣಿ ಹೆಂಗಸನ್ನು ಡೆಲಿವರಿಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಿ ಬರುವುದಾಗಿ ತಿಳಿಸಿ ವಾಪಾಸ್ಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಕಾಣೆಯಾದ ಮಹಿಳೆಯ ಚಹರೆ ಇಂತಿವೆ:- ಹೆಸರು-ಸೌಮ್ಯ, ಎತ್ತರ 5.2, ಶರೀರ-ಸಾಧಾರಣ ಶರೀರ, ಗೋಧಿ ಮೈ ಬಣ್ಣ, ಧರಿಸಿರುವ ಬಟ್ಟೆ-ಹಳದಿ ಮತ್ತು ಕೇಸರಿ ಬಣ್ಣ ಮಿಶ್ರಿತ ಚೂಡಿದಾರ. ಮಾತನಾಡುವ […]

ಕೆ.ಎಮ್.ಎಫ್ ವತಿಯಿಂದ ಆಶಾ ಕಾರ್ಯಕರ್ತೆರಿಗೆ ಕಿಟ್ ವಿತರಣೆ

Monday, June 8th, 2020
kmf-kit-distribution

ಮಂಗಳೂರು : ಮೂರು ತಿಂಗಳಿದ ಸತತವಾಗಿ ದ.ಕ. ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್ ವಿರುದ್ಧ ವ್ಯಾಪಕ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಉತ್ಪನ್ನಗಳ ಕಿಟ್‍ಗಳನ್ನು ವಿತರಿಸಲಾಯಿತು. ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕಿಟ್ ವಿತರಣೆ ಮಾಡಲಾಯಿತು. ಜಿಲ್ಲೆಯ 1,378 ಆಶಾ ಕಾರ್ಯಕರ್ತೆಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಿಟ್ ವಿತರಣೆ ಮಾಡಿದರು. ಜಿಲ್ಲೆಯಲ್ಲಿ […]

ಆಶಾ ಕಾರ್ಯಕರ್ತೆಯರಿಗೆ 2000 ಟೊಪಿ ಹಸ್ತಾಂತರ 

Saturday, May 2nd, 2020
toppi-vitharane

ಮಂಗಳೂರು :  ಆಶಾ ಕಾರ್ಯಕರ್ತೆಯರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ ವತಿಯಿಂದ ಉಚಿತವಾಗಿ 2,000 ಟೊಪ್ಪಿಗಳನ್ನು (ಕ್ಯಾಪ್ ) ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ ಮತ್ತು ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೆಷನ್ ಅಧ್ಯಕ್ಷ ಶ್ರೀಧರ್ ಕಾಮತ್, ಕಾರ್ಯದರ್ಶಿ ಗಣೇಶ್ ಕಾಮತ್, ಸಂತೋಷ ಕಾಮತ್, ಸಂಜಯ್ ಕಾಮತ್ ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದಕ್ಕೆ ಇಬ್ಬರ ಬಂಧನ

Saturday, April 11th, 2020
asraf

ಮಂಗಳೂರು: ನಗರದ ಹೊರವಲಯ ಮಲ್ಲೂರಿನಲ್ಲಿ ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದ ವಸಂತಿ ಎಂಬ ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಈ ಹಿನ್ನೆಲೆ ಇಲ್ಲನ ಬದ್ರಿಯಾ ನಗರದ ಇಸ್ಮಾಯಿಲ್(45), ಅಶ್ರಫ್ (32) ಎಂಬುವರನ್ನು ಮಂಗಳೂರು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಆಶಾ ಕಾರ್ಯಕರ್ತೆ ವಸಂತಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ತನ್ನ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅಲ್ಲಿಗೆ ಬಂದ ಆರೋಪಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸುವುದನ್ನು ತಡೆದಿದ್ದಾರೆ. ಅಲ್ಲದೆ ಕರ್ತವ್ಯಕ್ಕೆ ಅಡ್ಡಿಗೊಳಿಸಿ […]

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ : ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವ ಶ್ರೀರಾಮುಲು ಭರವಸೆ

Friday, January 3rd, 2020
sri-ramulu

ಬೆಂಗಳೂರು : ಬಹಳ ವರ್ಷಗಳಿಂದ ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ರಸ್ತೆಗಿಳಿದಿರುವ ರಾಜ್ಯದ ನಾನಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ನತ್ತ ಹೊರಟ ಬೃಹತ್ ರ್ಯಾಲಿಯಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ‘ಗುಲಾಬಿ ತಂಡ’ದ 10 ಬೇಡಿಕೆಗಳಲ್ಲಿ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಈಗಾಗಲೇ ಸರ್ಕಾರ ಭರವಸೆ ನೀಡಿದ್ದು, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಜಯ ಸಿಕ್ಕಂತಾಗಿದೆ. ಹಾವೇರಿ, ರಾಯಚೂರು, ಹುಬ್ಬಳ್ಳಿ, ಹಿರೇಕೆರೂರು ಸೇರಿ […]