ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರ ಬೆಂಗಳೂರಿನಲ್ಲಿ, ಅಂತ್ಯಸಂಸ್ಕಾರಕ್ಕೆ ಆಗಮಿಸಲಿರುವ ಸೋನಿಯಾ ಗಾಂಧಿ

Tuesday, September 14th, 2021
Oscar Fernandes

ಮಂಗಳೂರು : ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಎರಡು ದಿನಗಳ ಬಳಿಕ ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ಹೇಳಿದೆ. ಪತ್ನಿ ಬ್ಲೋಸಂ ಫರ್ನಾಂಡಿಸ್ ಅವರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವಂತೆ ಸೋನಿಯಾರಿಗೆ ಬ್ಲೋಸಂ ವಿನಂತಿಸಿದ್ದಾರೆ. ಆಸ್ಕರ್ ನಿಧನ ದೇಶಕ್ಕಾಗಿರುವ ನಷ್ಟ […]

ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Monday, September 13th, 2021
ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು  : ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ. ನಮ್ಮ ಹಿರಿಯ ನಾಯಕರಾದ, ಹಾಲಿ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಕೆಪಿಸಿಸಿ  ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಉಡುಪಿ ಪಾಲಿಕೆ ಸದಸ್ಯರಾಗಿ ರಾಜಕಾರಣ ಪ್ರಾರಂಭಿಸಿ ಸತತ ನಾಲ್ಕು ಬಾರಿ ಸಂಸತ್ ಸದಸ್ಯರಾಗಿ, ಕೇಂದ್ರದ ಮಂತ್ರಿಯಾಗಿ, ನಂತರ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರು ಸಸ್ಯಹಾರಿಗಳು. ನಿತ್ಯ ಕನಿಷ್ಠ ಒಂದೂವರೆ ಗಂಟೆ ಯೋಗ ಮಾಡುತ್ತಿದ್ದರು. ಆರೋಗ್ಯದ ಮೇಲೆ ಅಷ್ಟು ಕಾಳಜಿ […]

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

Monday, September 13th, 2021
Oscar fernandise

ಮಂಗಳೂರು : ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.13 ರಂದು ನಿಧನರಾಗಿದ್ದಾರೆ. ಮನೆಯಲ್ಲಿ ಯೋಗ ಮಾಡುತ್ತಿರುವಾಗ ಕುಸಿದು ಬಿದ್ದು  ತಲೆಯ ಒಳಗೆ ರಕ್ತಸ್ರಾವವಾಗಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆಯಲು ವೈದ್ಯರು ಸರ್ಜರಿ ಮಾಡಿದ್ದರು. ಆ ಬಳಿಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಾ.27, 1941 ರಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್, ಐಎನ್ ಸಿಯಲ್ಲಿ ಉನ್ನತ ಹುದ್ದೆಗಳನ್ನು ನಿಭಾಯಿಸಿ ಅನುಭವವುಳ್ಳ ನಾಯಕರಾಗಿದ್ದರು. ಮಾಜಿ ಪ್ರಧಾನಿ ರಾಜೀವ್ […]

ಆಸ್ಕರ್‌ ಫರ್ನಾಂಡಿಸ್‌ ಅವರ ಮಿದುಳಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ಹೊರ ತೆಗೆದ ವೈದ್ಯರ ತಂಡ

Tuesday, July 27th, 2021
Oscar Fernandese

ಮಂಗಳೂರು : ತೀವ್ರ ನಿಗಾ ಘಟಕದಲ್ಲಿ  ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸಿಗ ಆಸ್ಕರ್‌ ಫರ್ನಾಂಡಿಸ್‌ ಅವರ ಚಿಕಿತ್ಸೆ ಮುಂದುವರೆದಿದ್ದು ಮಂಗಳವಾರ ಮುಂಜಾನೆ ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಲಾಗಿದೆ. ನಗರದ ಖ್ಯಾತ ನ್ಯೂರೊ ಸರ್ಜನ್‌ ಡಾ.ಸುನಿಲ್‌ ಶೆಟ್ಟಿ ಹಾಗೂ ಅವರ ತಂಡ ಆಸ್ಕರ್‌  ಅವರ ಮಿದುಳಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ತೆಗೆಯುವಲ್ಲಿ ಯಶಸ್ವಿಯಾಗಿದೆ. ಸೋಮವಾರ ಮಧ್ಯರಾತ್ರಿ 12.30 ರಿಂದಲೇ ಶಸ್ತ್ರಕ್ರಿಯೆ ಪ್ರಾರಂಭಿಸಿದ್ದು ಮಂಗಳವಾರ ಮುಂಜಾನೆ 4.40 ರ ವರೆಗೂ ನಡೆದಿದೆ. ಕಾಂಗ್ರೆಸ್‌ ಮುಖಂಡರಾದ ಮಾಜಿ ಸಚಿವ ಬಿ.ರಮಾನಾಥ ರೈ, ಪ್ರತಾಪಚಂದ್ರ ಶೆಟ್ಟಿ, ವಿನಯ ಕುಮಾರ್‌ […]

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ತೀವ್ರ ನಿಗಾ ಘಟಕದಲ್ಲಿ

Wednesday, July 21st, 2021
oscar faradise

ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಫ್ಲ್ಯಾಟ್ ನಲ್ಲಿ  ಜಾರಿ ಬಿದ್ದು  ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಮಂಗಳೂರು ಅತ್ತಾವರದಲ್ಲಿರುವ ಫ್ಲ್ಯಾಟ್ ನಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡಿಸ್ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಇನ್ನು ಭಾನುವಾರ ಜಾರಿ ಬಿದ್ದ ಸಮಯ ಯಾವ ಗಾಯವಾಗಿಲ್ಲ ಎಂಬ ನಿರ್ಲಕ್ಷ್ಯದಿಂದಿದ್ದ ಫರ್ನಾಂಡಿಸ್ ಅವರು ಅದೇ ದಿನ ಸಂಜೆ ಡಯಾಲಿಸಿಸಿ ಗೆ ತೆರಳಿದ್ದಾಗ […]

ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಪುತ್ರನ ವಿವಾಹ

Thursday, January 17th, 2013
Wedding of Oscar's Son

ಮಂಗಳೂರು : ಬುಧವಾರ ನಗರದ ಮಿಲಾಗ್ರೀಸ್ ಚರ್ಚ್ ನಲ್ಲಿ ರಾಜ್ಯಸಭೆ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಪುತ್ರ ಓಶಾನ್ ಅವರ ವಿವಾಹವು ಜರುಗಿತು. ವಿವಾಹ ನೆರವೇರಿದ ಬಳಿಕ ನಗರದ ಲೈಟ್‌ಹಿಲ್ ಹೌಸ್ ರಸ್ತೆಯ ಲೇಡೀಸ್ ಕ್ಲಬ್‌ನಲ್ಲಿ ನಡೆದ ರಿಸೆಪ್ಶನ್‌ ನನ್ನು ಏರ್ಪಡಿಸಲಾಗಿತ್ತು. ವಿವಾಹ ಸಮಾರಂಭಕ್ಕೆ ಮುಖ್ಯಮಂತ್ರಿಗಳು, ಹಲವು ಕೇಂದ್ರ ಸಚಿವರು, ನೂರಾರು ಕಾಂಗ್ರೆಸ್ ನಾಯಕರು ಆಗಮಿಸಿದ್ದರು. ಆಸ್ಕರ್ ಫರ್ನಾಂಡಿಸ್-ಬ್ಲಾಸಂ ಫರ್ನಾಂಡಿಸ್ ದಂಪತಿ ಪುತ್ರ ಓಶಾನ್ ಸ್ಯಾಮ್ ಪಿತ್ರೋಡಾ ಅವರ ಕಂಪನಿಯ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಉದ್ಯೋಗದಲ್ಲಿದ್ದು, ಉಡುಪಿ ಉದ್ಯಾವರದ […]