ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡುವವರಿಗೆ ಕಠಿಣ ಕ್ರಮವಾಗಬೇಕು : ಸಂಸದ ಪ್ರತಾಪ್ ಸಿಂಹ

Thursday, January 9th, 2020
pratap-simha

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಚಾರಿತ್ರಿಕ ಕ್ರಮ ಕೈಗೊಂಡಿದೆ. ಪೌರತ್ವ ಕಾಯ್ದೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ತೊಂದರೆ ಮಾಡುವವರ ವಿರುದ್ಧ ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಕಠಿಣ ಕಾನೂನು ಜಾರಿಯಾಗಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ 370 ನೇ ವಿಧಿ ಹಾಗೂ ತ್ರಿವಳಿ ತಲಾಕ್ ರದ್ದು ಪಡಿಸಿದೆ. ಅಯೋಧ್ಯೆ ತೀರ್ಪು ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದೆ. ಉತ್ತರ ಭಾರತದ ಗಡಿ ದೇಶಗಳಲ್ಲಿ […]

ಯಾವುದೇ ಕಾರಣಕ್ಕೂ ಗೂಂಡಾ ರಾಜ್ಯವಾಗಲು ಬಿಡಲ್ಲ : ಸಚಿವ ಕೆಎಸ್ ಈಶ್ವರಪ್ಪ

Friday, December 27th, 2019
ks-ishwarappa

ಮಂಗಳೂರು : ಗೂಂಡಾಗಳು ಕರ್ನಾಟಕವನ್ನು ತಮ್ಮ ರಾಜ್ಯ ಎಂದು ಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಗೂಂಡಾ ರಾಜ್ಯವಾಗಲು ಬಿಡಲ್ಲ. ರಾಜ್ಯ ಸರ್ಕಾರ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಯುಟಿ ಖಾದರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದರೆ […]