ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Saturday, January 27th, 2024
ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲ್ಲೇಶ್ವರಂ ಕೆ .ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದರು. 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರಗಳ ಅಳವಡಿಕೆಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2000 ರೂ.ಗಳಿಗಿಂತ ಹೆಚ್ಚಿದೆ.ಬಡವರಿಗೆ ಇಷ್ಟು […]

ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಹಾವು ಕಡಿತ

Friday, November 17th, 2023
Sanjeeva-Matandooru

ಪುತ್ತೂರು : ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತಕ್ಕೊಳಗಾದ ಆಸ್ಪತ್ರೆಗೆ ದಾಖಲಾದ ಘಟನೆ ಘಟನೆ ನ.16 ರಂದು ರಾತ್ರಿ ನಡೆದಿದೆ. ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅವರಿಗೆ ಕಡಂಬಳ (ಕಟ್ಟಮಳಕ್ಕರಿ) ಕಡಿದಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವಿನ ಕಡಿತ ತರಚಿದಂತ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅವರು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ವಾಕಿಂಗ್ ಸಂದರ್ಭ ಅವರ ಜೊತೆಗಿದ್ದ ಹಿರೇಬಂಡಾಡಿ .ಪಂ. ಅಧ್ಯಕ್ಷ ಹಮ್ಮಬ್ಬ […]

ನಟಿ ಪೂನಂ ಪಾಂಡೆ ಮೇಲೆ ಪತಿಯಿಂದ ಗಂಭೀರ ಹಲ್ಲೆ, ಆಸ್ಪತ್ರೆಗೆ ದಾಖಲು

Tuesday, November 9th, 2021
poonam-Pande

ಮುಂಬಯಿ  : ನಟಿ ಪೂನಂ ಪಾಂಡೆ ಮೇಲೆ ಪತಿ ಸ್ಯಾಮ್ ಬಾಂಬೆ ಹಲ್ಲೆ ಮಾಡಿದ್ದಾರೆಂದು ಪೂನಂ ನೀಡಿದ ದೂರಿನ ಆಧಾರದ ಮೇಲೆ ಸ್ಯಾಮ್‌ರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೆ ಒಳಗಾದ ನಟಿ ಪೂನಂ ಪಾಂಡೆ ಈಗ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಟಿ ಪೂನಂ ಪಾಂಡೆ ಅವರು, ಸೋಮವಾರ (ನ.8) ರಾತ್ರಿ ಪತಿ ಸ್ಯಾಮ್‌ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಪೂನಂ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದ್ದು, ಅವರ ಕಣ್ಣು, ತಲೆ, ಮುಖದ […]

ದಿಢೀರನೇ ಆಸ್ಪತ್ರೆಗೆ ದಾಖಲಾದ ನಟಿ ಸಂಜನಾ ಗಲ್ರಾನಿ

Thursday, August 26th, 2021
Sanjana

ಬೆಂಗಳೂರು : ‘ಗಂಡ ಹೆಂಡತಿ’ ಖ್ಯಾತಿಯ ನಟಿ ಡ್ರಗ್ಸ್ ಸೇವಿಸಿದ್ದು ನಿಜ ಎಂಬುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಮೂಲಕ ಸಾಬೀತಾಗಿದೆ. ಸದ್ಯ ಬಂಧನ ಭೀತಿಯಲ್ಲಿರುವ ನಟಿ ಸಂಜನಾ ಅನಾರೋಗ್ಯ ಎಂಬ ಕಾರಣ ಹೇಳಿ ದಿಢೀರನೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ನಟಿ ಸಂಜನಾ ಗಲ್ರಾಣಿ ತಾಯಿ ರೇಷ್ಮಾ ಗಲ್ರಾಣಿ, ನಮ್ಮ ಹಣೆ ಬರಹ ಸರಿಯಾಗಿಲ್ಲ. ಏನ್ ಮಾಡೋದಕ್ಕೆ ಆಗೋದಿಲ್ಲ. ಸಂಜನಾ ಗಲ್ರಾಣಿಗೆ ಹುಷಾರಿಲ್ಲ. ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅವರಿಗೆ ಊಟ ತೆಗೆದುಕೊಂಡು ಬಂದಿದ್ದೇನೆ […]

ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದವರ ಸಂಖ್ಯೆ 20ಕ್ಕೇರಿಕೆ

Thursday, July 1st, 2021
black fungus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದ ಸಂಖ್ಯೆ 20ಕ್ಕೇರಿದೆ. ಇದರಲ್ಲಿ ದ.ಕ.ಜಿಲ್ಲೆಯ 5 ಮತ್ತು ಹೊರಜಿಲ್ಲೆಯ 15 ಮಂದಿ ಸೇರಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ ಗೆ ಓರ್ವ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 26 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 7 ದ.ಕ. ಜಿಲ್ಲೆಗೆ ಮತ್ತು 19 ಮಂದಿ ಹೊರಜಿಲ್ಲೆಗೆ ಸೇರಿದವರಾಗಿದ್ದಾರೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 36ಕ್ಕೇರಿದೆ.

ಆಸ್ಪತ್ರೆಯಿಂದ ರೆಮಿಡಿಸಿವರ್ ಕದ್ದು ಮಾರಾಟ : ಪ್ರೇಮಿ ಬಂಧನ

Thursday, June 3rd, 2021
Siddana Gowda

ಹುಬ್ಬಳ್ಳಿ: ಮಾರಕ‌ ಕೊರೊನಾ ವೈರಸ್ ನಿತ್ಯವೂ ನೂರಾರು ಜನರ ಪ್ರಾಣ ಬಲಿ ಪಡೆಯುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಐನಾತಿಗಳು ಮಾತ್ರ ಹಣ ಮಾಡಲು ಹೋಗಿ ಜೈಲು ಸೇರುತ್ತಿದ್ದಾರೆ. ಹೌದು. ಹುಬ್ಬಳ್ಳಿಯಲ್ಲೂ ಕೂಡ ಕೊರೊನಾ ರೋಗಿಗಳ ಪಾಲಿನ ಸಂಜೀವಿನಿಯಾದ ರೆಮಡಸಿವರ್ ಇಂಜಕ್ಷನ್ ಕದ್ದು ಮಾರಾಟ ಮಾಡುತ್ತಿದ್ದ ಪ್ರೇಮಿಗಳು ಪೊಲೀಸರ ಅತಿಥಿಯಾಗಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲೋನಿಯ ಸಿದ್ದನಗೌಡ ಪಾಟೀಲ್ ಹಾಗೂ ವಿನಾಯಕನಗರದ ರಿಯಾ ವಡ್ಡರ ಎಂಬುವವರೇ ಬಂಧಿತ ಆರೋಪಿಗಳು. ಬೇರೆ ಬೇರೆ ಆಸ್ಪತ್ರೆಯಲ್ಲಿ ಕೆಲಸ‌ ಮಾಡುತ್ತಿದ್ದ ಪ್ರೇಮಿಗಳಿಬ್ಬರು ಹಣ […]

ಒಂದೇ ತಿಂಗಳಲ್ಲಿ ಸಕಲ ಸೌಲಭ್ಯಗಳ ಮೇಕ್ ಶಿಫ್ಟ್ ಆಸ್ಪತ್ರೆ ಸಿದ್ಧ

Monday, May 31st, 2021
makeshift

ಬೆಂಗಳೂರು : ಕೋವಿಡ್ ನ ಮೂರನೇ ಅಲೆ ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಈ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದು, ಕೇವಲ ಒಂದೇ ತಿಂಗಳ ಅವಧಿಯಲ್ಲಿ ಸುಸಜ್ಜಿತ ಆಸ್ಪತ್ರೆ ಸೋಂಕಿತರ ಚಿಕಿತ್ಸೆಗೆ ಸಿದ್ಧಗೊಳ್ಳಲಿದೆ ಎಂದು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್ ಅಶೋಕ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಭಾರತ ಸರ್ಕಾರ, ಅಮೆರಿಕನ್ ಇಂಡಿಯನ್ ಫೌಂಡೇಷನ್ ಮತ್ತು ವಿಶ್ವಸಂಸ್ಥೆಯ ಯು ಎನ್ ಡಿ ಪಿ ಅಡಿಯಲ್ಲಿ ಸುಮಾರು […]

ಆಸ್ಪತ್ರೆಗಳ ಅಗತ್ಯತೆ ಪೂರೈಕೆಗೆ ಜಿಲ್ಲಾ ಮಟ್ಟದ ಸಮಿತಿ

Wednesday, May 26th, 2021
Esi Hospital

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇರುವ ಇಎಸ್‌ಐ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಆದ್ಯತೆ ಮೇಲೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಗಳ ಅಗತ್ಯತೆಗಳ ಪೂರೈಕೆಗೆ ಅನುವಾಗುವಂತೆ ಜಿಲ್ಲಾ ಮಟ್ಟದ ಸಮಿತಿಗಳನ್ನು ನೇಮಿಸುವಂತೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ನಗರದ ಇಂದಿರಾನಗರದಲ್ಲಿ ಇರುವ 300 ಹಾಸಿಗೆಗಳ ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್-19 ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಪರಿಶೀಲನೆ ನಡೆಸಿದ ಅವರು, ವಿವಿಧ ಜಿಲ್ಲೆಗಳಲ್ಲಿ ಇರುವ ಇಎಸ್‌ಐ ಆಸ್ಪತ್ರೆಗಳಲ್ಲಿ ಪ್ರಸ್ತುತ ಲಭ್ಯ ಇರುವ ಸೌಕರ್ಯಗಳನ್ನು […]

ಕೊರೋನ ಸೋಂಕು ಮೇ 23 : ದ.ಕ. 860 – ಸಾವು 6, ಉಡುಪಿ 909 – ಸಾವು 4, ಕಾಸರಗೋಡು 555

Sunday, May 23rd, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಭಾನುವಾರ 860 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 873 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಭಾನುವಾರ 6 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 861ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 8,27,671 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,57,332 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 70,339 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 59,084 ಮಂದಿ ಗುಣಮುಖರಾಗಿದ್ದಾರೆ. ಸದ್ಯ 10,395 […]

ಕೊರೋನ ಸೋಂಕು ಮೇ 16 : ದಕ್ಷಿಣ ಕನ್ನಡ 957, ಏಳು ಸಾವು, ಉಡುಪಿ 745, 5 ಸಾವು

Monday, May 17th, 2021
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 957 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,638 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರವಿವಾರ ಜಿಲ್ಲೆಯಲ್ಲಿ 7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 815ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 8,05,019 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,40,705 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 64,314 ಮಂದಿ ಕೊರೋನ ಪಾಸಿಟಿವ್‌ಗೊಳಗಾಗಿದ್ದಾರೆ. ಈ ಪೈಕಿ 50,993 ಮಂದಿ ಗುಣಮುಖರಾಗಿದ್ದಾರೆ. ಸದ್ಯ […]