Blog Archive

ಕೊರೋನ ಸೋಂಕು ಪ್ರಕರಣಗಳು : ದ.ಕ. ಜಿಲ್ಲೆ -1,513 ಮೂರು ಸಾವು, ಉಡುಪಿಯಲ್ಲಿ- 1047 ಹತ್ತು ಸಾವು

Saturday, May 8th, 2021
Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ 1,513 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. ಅಲ್ಲದೆ 752 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 11,719 ಸಕ್ರಿಯ ಪ್ರಕರಣಗಳಿವೆ. ಶನಿವಾರ ಜಿಲ್ಲೆಯಲ್ಲಿ 3 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 783ಕ್ಕೇರಿದೆ. ಮೃತಪಟ್ಟವರಲ್ಲಿ ಮಂಗಳೂರು ಮತ್ತು ಬಂಟ್ವಾಳದ ಮಹಿಳೆಯರು ಸೇರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 7,75,602 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 7,20,920 ಮಂದಿಯ ವರದಿ ನೆಗೆಟಿವ್ ಮತ್ತು […]

ಕೋವಿಡ್ ಸೋಂಕಿನ 2ನೇ ಅಲೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ – ಡಾ. ರಾಜೇಂದ್ರ ಕೆ.ವಿ

Saturday, January 16th, 2021
Rajendra KV

ಮಂಗಳೂರು : ಕೋವಿಡ್ ಸೋಂಕಿನ ಎರಡನೇ ಅಲೆ ಉಂಟಾಗದಂತೆ ತಡೆಯಲು ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ವಿದೇಶಗಳಲ್ಲಿ ಈಗಾಗಲೇ ಕೊರೋನಾದ ಎರಡನೇ ಅಲೆ ಬಾಧಿಸಿ ಹೆಚ್ಚು ಜನರು ಸೋಂಕಿತರಾಗಿದ್ದಾರೆ. ಈ ವರೆಗೆ ನಮ್ಮ ದೇಶದಲ್ಲಿ ಎರಡನೇ ಅಲೆ ಕಂಡುಬಂದಿರುವುದಿಲ್ಲ ಆದರೂ ಸಹ ನಿರ್ಲಕ್ಷ್ಯ ವಹಿಸದೇ ಕೊರೊನಾ ಎರಡನೇ ಅಲೆಯನ್ನು […]

ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿ ಮೃತ್ಯು

Sunday, January 10th, 2021
Ruthik

ಕಾಸರಗೋಡು : ಮನೆಯಲ್ಲಿ ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿದ ಪರಿಣಾಮ ಮೃತಪಟ್ಟ ದಾರುಣ ಘಟನೆ ಉದುಮದಲ್ಲಿ ನಡೆದಿದೆ. ಉದುಮ ಏರೋಲ್‌ನ ದಾಸ್ ಮತ್ತು ರೇಣುಕಾ ದಂಪತಿ ಪುತ್ರ ಋತಿಕ್ ಮೃತಪಟ್ಟ ಮಗು. ಬಾಟಲಿಯಲ್ಲಿದ್ದ ಸೀಮೆಎಣ್ಣೆಯನ್ನು ಸೇವಿಸಿದ್ದು , ಮಗು ಅಸ್ವಸ್ಥವಾಗಿ ಬಿದ್ದಿದ್ದು ಸಮೀಪ ಸೀಮೆ ಎಣ್ಣೆ ತುಂಬಿದ್ದ ಬಾಟಲಿ ಪತ್ತೆಯಾಗಿತ್ತು. ತಕ್ಷಣ ಮಗುವನ್ನು ಉದುಮದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ದಾರಿಯಲ್ಲಿ ಹೋಗಬೇಕಾದ ಪೊಲೀಸ್ ಜೀಪು ಅಂಗಡಿ ನುಗ್ಗಿ ಚೆಲ್ಲಾಪಿಲ್ಲಿ

Thursday, January 7th, 2021
Police Jeep

ಬೆಳ್ತಂಗಡಿ:  ಮಡಿಕೇರಿಯತ್ತ ತೆರಳ ಬೇಕಾದ  ಪೊಲೀಸ್ ಜೀಪ್ವೊಂದು ಗುರುವಾರ  ಬೆಳಗ್ಗೆ ಅಂಗಡಿಗೆ ನುಗ್ಗಿದ ಘಟನೆ ನಾರಾವಿ ಸಮೀಪದ ಈದು ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಮಡಿಕೇರಿಯತ್ತ ಇನ್ಸ್ ಪೆಕ್ಷನ್ ಗಾಗಿ ತೆರಳುತ್ತಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಜೀಪ್ನಲ್ಲಿದ್ದ ಪೊಲೀಸರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಗಡಿ ಶೋಕೇಸ್ ಸೇರಿ ಇನ್ನಿತರ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ತಲೆಗೆ ಸ್ವಲ್ಪ ಗಾಯವಾಗಿದ್ದು, ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿ.ವಿ.ಸದಾನಂದ ಗೌಡ ಅಶ್ವಸ್ಥ, ಆಸ್ಪತ್ರೆಗೆ ದಾಖಲು

Sunday, January 3rd, 2021
sadananda Gowda

ಚಿತ್ರದುರ್ಗ : ಕೇಂದ್ರ ಸಚಿವ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಲೋ ಶುಗರ್ ಉಂಟಾಗಿ ಚಿತ್ರದುರ್ಗದ ಬಸವೇಶ್ವರ  ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸಹಜಸ್ಥಿತಿಗೆ ಬಂದಿದ್ದು ಕುಟುಂಬದವರ ಜೊತೆ ಮಾತಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ

15 ಅಡಿ ಆಳದಲ್ಲಿರುವ ಮನೆ ಮೇಲೆ ಬಿದ್ದ ಪಿಕ್ ಅಪ್ ವಾಹನ, ಆರು ಮಂದಿಗೆ ಗಾಯ

Monday, December 28th, 2020
pickup

ಮಂಗಳೂರು :  ಪಿಕ್ ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದಲ್ಲಿರುವ ಮನೆ ಮೇಲೆ ಬಿದ್ದು ಮನೆಯಲ್ಲಿದ್ದ ಮೂವರು ಗಾಯಗೊಂಡಿರುವ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ. ವಾಹನದಲ್ಲಿದ್ದ ಮೂವರು ಕಾರ್ಮಿಕರಿಗೂ ಗಾಯಗಳಾಗಿವೆ. ಚಂದ್ರಯ್ಯ ಆಚಾರ್ಯ ಎಂಬುವರ ಮನೆಯ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯವವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಪಿಕ್ ಅಪ್ ವಾಹನ ಹಾಗೂ ಮನೆಗೆ ಹಾನಿಯಾಗಿದೆ. ಮರೋಳಿಯಲ್ಲಿರುವ ಭಾರತ್ ಪ್ರಿಂಟರ್ ಬಳಿಯ ಚಂದ್ರಯ್ಯ ಆಚಾರ್ಯರ ಮನೆ […]

ಮಾಜಿ ಪ್ರಿಯಕರ ನೀಡುತ್ತಿದ್ದ ಕಿರುಕುಳಕ್ಕೆ ನೊಂದು ಯುವತಿ ಆತ್ಮಹತ್ಯೆ

Thursday, October 29th, 2020
Madhusree

ಪುತ್ತೂರು : ಮಾಜಿ ಪ್ರಿಯಕರ ನೀಡುತ್ತಿದ್ದ ಕಿರುಕುಳ ತಾಳಲಾರದೆ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿರುವ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಗತಕಾರಿಣಿಯಾಗಿದ್ದ ಮಧುಶ್ರೀ(26) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅವಿವಾಹಿತ ಯುವತಿ. ನಿನ್ನೆ ಮಧ್ಯಾಹ್ನ ತನ್ನ ಅಜ್ಜಿ ಮನೆಯ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾಜಿ ಪ್ರಿಯಕರ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆ ಡೈರಿಯಲ್ಲಿ ಬರೆದುಕೊಂಡಿರುವ ಅಧಾರದಲ್ಲಿ ಹಾಗೂ […]

ಕೊರೋನ ಯೋಧರು ಎಂದು ಆಸ್ಪತ್ರೆ ಗಳಲ್ಲಿ ದುಡಿಸಿಕೊಳ್ಳಲಾಗುತ್ತಿದೆಯೇ ಹೊರತು, ನಮಗೆ ಸೌಲಭ್ಯ ನೀಡುತ್ತಿಲ್ಲ

Monday, October 5th, 2020
contract doctors

ಮಂಗಳೂರು : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಹೊರಗುತ್ತಿಗೆ ನೌಕರರ ಪ್ರತಿಭಟನೆ 12 ದಿನಕ್ಕೆ ಕಾಲಿಟ್ಟಿದ್ದು ನಗರದ ಮನಪಾ ಗಾಂಧಿ ಪ್ರತಿಮೆಯ ಬಳಿ ಸೋಮವಾರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು. ಸರಕಾರದ ಆಸ್ಪತ್ರೆಯಲ್ಲಿ 15ರಿಂದ 18 ವರ್ಷಗಳಿಂದ ದುಡಿಯುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಇನ್ನೂ ಜಾರಿಯಾಗಿಲ್ಲ. ತಾನು ಕೂಡಾ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ನಮಗೆ ಕಾರ್ಮಿಕ […]

ಹೊಡೆದಾಟದ ವೇಳೆ ಇರಿತಕ್ಕೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

Thursday, August 27th, 2020
Kripakar

ಮಂಜೇಶ್ವರ  : ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿಇರಿತಕ್ಕೊಳಗಾಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮೀಯಪದವಿನಲ್ಲಿ ಆಗಸ್ಟ್ 26ರ ಬುಧವಾರ ರಾತ್ರಿ  ನಡೆದಿದೆ. ಮೃತರನ್ನು ಬೇರಿಕೆ ನಿವಾಸಿ ಕೃಪಾಕರ್‌ (28) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ  ನಡೆದ ಹೊಡೆದಾಟದ ಸಂದರ್ಭ ಇರಿತಕ್ಕೊಳಗಾದ ಕೃಪಾಕರ್‌ ಅವರನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಯಿತ್ತಾದರೂ, ಅವರು ಮೃತಪಟ್ಟಿದ್ದಾರೆ. ಇದಲ್ಲದೇ, ಘಟನೆಯಲ್ಲಿ ಗಾಯಗೊಂಡಿದ್ದ ಜಿತೇಶ್‌ ಹಾಗೂ ವಿಜೇಶ್‌‌ ಎನ್ನುವವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರಿಗೆ ದೊರೆತ ಮಾಹಿತಿಯ ಪ್ರಕಾರ, ಕ್ಷುಲ್ಲಕ ಕಾರಣಕ್ಕೆ  ಹೊಡೆದಾಟದ […]

ತಂದೆ – ಮಗನ ನಡುವೆ ಕಾಳಗ, ಆಸ್ಪತ್ರೆ ದಾರಿಯಲ್ಲಿ ತಂದೆ ಮೃತ್ಯು

Monday, August 17th, 2020
quarrel

ಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಗಂಭೀರ ಗಾಯಗೊಂಡ ತಂದೆ ಆಸ್ಪತ್ರೆ ದಾರಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಕೆದಂಬಾಡಿ ಗ್ರಾಮದ ತಿಂಗಳಾಡಿ ಬಾಲಯ ಬಳಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಸೋಮವಾರ ರಾತ್ರಿ ಗಂಗಾಧರ್ ನಾಯ್ಕ್ ಹಾಗೂ ಅವರ ಪುತ್ರ ಶಶಿಧರ್ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಘರ್ಷಣೆ ಸಂಭವಿಸಿದೆ. ಈ ಸಂದರ್ಭದಲ್ಲಿ ಗಂಗಾಧರ್ ನಾಯ್ಕ್ ಗಂಭೀರವಾಗಿ ಗಾಯಗೊಂಡರು. ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟರು […]