ಆ್ಯಪ್​ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನು ಪ್ರಸಾರ, ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್​ ಕುಂದ್ರಾ ಅರೆಸ್ಟ್

Tuesday, July 20th, 2021
Shilpa Shetty

ನವದೆಹಲಿ: ಆ್ಯಪ್ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನು ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿಯೂ ಆಗಿರು ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಸಿನಿಮಾಗಳನ್ನು ತಯಾರಿಯ  ರೂವಾರಿ ಅವರು ಎಂಬ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಲಭಿಸಿದ ಆಧಾರದ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಅಶ್ಲೀಲ ಸಿನಿಮಾಗಳನ್ನು ಕೆಲವು ಆ್ಯಪ್ಗಳ ಮೂಲಕ ಪ್ರಸಾರ ಮಾಡುತ್ತಿರುವ ಕುರಿತು 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್ನಲ್ಲಿ […]

ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿ ಕಿಡಿಗೇಡಿಗಳು, ದೂರು

Wednesday, April 28th, 2021
Prabhakara Bhat

ಬಂಟ್ವಾಳ:  ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಭಜರಂಗದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ ಎಂದು ದೂರು ನೀಡಲಾಗಿದೆ.

ಮಂಗಳೂರು: ಅಧಿಕೃತ ಜಾನುವಾರು ಸಾಗಾಟಕ್ಕೆ ಆ್ಯಪ್

Friday, August 9th, 2019
police phone in

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲಾಧಿಕಾರಿಯವರು ಅಧಿಕೃತ ಜಾನುವಾರು ಸಾಗಾಟ ವ್ಯವಸ್ಥೆಗಾಗಿ ಆ್ಯಪೊಂದನ್ನು ಅಭಿವೃದ್ಧಿ ಮಾಡಿದ್ದಾರೆ. ಜಾನುವಾರು ಸಾಗಾಟ ಮಾಡುವವರು ಈ ಆ್ಯಪ್ ಮುಖಾಂತರ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಈ ಮೂಲಕ ನಾವು ಸಾಗಾಟಕ್ಕೆ ಸೂಕ್ತ ಭದ್ರತಾ ವ್ಯವಸ್ಥೆ ಒದಗಿಸುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಉಪ ಆಯುಕ್ತ ಹನುಮಂತರಾಯ ಹೇಳಿದರು. ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್ ಇನ್ ಕಾರ್ಯಕ್ರಮದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಧಿಕೃತ ಜಾನುವಾರು ಸಾಗಾಟಕ್ಕೆ ಕಡಿವಾಣ […]

ರಸ್ತೆಸಾರಿಗೆ ಸಮಸ್ಯೆ ದಾಖಲಿಸಲು ನೂತನ ಆ್ಯಪ್​ ಅಭಿವೃದ್ಧಿ: ಸಸಿಕಾಂತ್ ಸೆಂಥಿಲ್

Thursday, December 20th, 2018
sesikanth-senthil

ಮಂಗಳೂರು: ರಸ್ತೆ ಸಾರಿಗೆ ಸಮಸ್ಯೆಗಳನ್ನು ದಾಖಲಿಸಲು ಸಾರ್ವಜನಿಕರ ಬಳಕೆಗಾಗಿ ದ.ಕ. ಜಿಲ್ಲಾಡಳಿತದ ವತಿಯಿಂದ ನೂತನ ಆ್ಯಪ್ನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ದ‌.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ, ಸಾರಿಗೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ರಸ್ತೆ ಸಾರಿಗೆ ಇಲಾಖೆಯ ದೂರುಗಳನ್ನು ದಾಖಲಿಸಲು ಮತ್ತು ಮಾಹಿತಿ ವಿನಿಮಯಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಚಿಂತನೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರು ಬಳಸಬಹುದಾದ ಆ್ಯಪ್ಅನ್ನು ಮುಂದಿನ ನಾಲ್ಕು ತಿಂಗಳ ಒಳಗಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು. ದ.ಕ. […]