ಮಂಗಳೂರು : ಖಾಸಗಿ ಬಸ್ ಕಂಡಕ್ಟರ್ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ದುಷ್ಕರ್ಮಿಗಳಿಗೆ ಶೋಧ

Tuesday, October 15th, 2024
Rajesh-conductor

ಮಂಗಳೂರು : ಖಾಸಗಿ ಬಸ್ ಕಂಡಕ್ಟರ್ ಒಬ್ಬರನ್ನು ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಸ್ಟೇಟ್‌ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ನಡೆದಿದೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಮೃತಪಟ್ಟವರು. ಸ್ಟೇಟ್‌ಬ್ಯಾಂಕ್, ಲೇಡಿಗೊಶನ್ ಗಾಂಜಾ, ದರೋಡೆ, ಪಿಕ್ ಪಾಕೆಟ್ ಗೆ ಹೆಸರುವಾಸಿಯಾಗಿದ್ದು ಲೂಟಿ ಮಾಡುವ ಸಂದರ್ಭ ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಜೇಶ್ ಸಂಬಂಧಿಕರು ಯಾರೆಂದು ಸಹೋದ್ಯೋಗಿಗಳಿಗೆ ತಿಳಿದಿಲ್ಲ. ಪ್ರತಿ […]

ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೂರು ಹೊತ್ತು ಉಚಿತ ಊಟ, ಉಪಹಾರ – ಮೇಯರ್

Friday, May 21st, 2021
Indira Canteen

ಮಂಗಳೂರು : ಪಾಲಿಕೆ ವ್ಯಾಪ್ತಿಯ 5 ಪ್ರದೇಶಗಳಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೂಲಿ ಕಾರ್ಮಿಕರು, ವಲಸಿಗರು, ದುರ್ಬಲ ವರ್ಗದವರು ಹಾಗೂ ಸಂಕಷ್ಟಗೊಳಗಾದ ಸ್ಥಳೀಯರಿಗೆ ಅನುಕೂಲವಾಗುವಂತೆ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ನಗರದಲ್ಲಿ ಕಂಡುಬರುವ ನಿರ್ಗತಿಕರಿಗೆ ಪಾಲಿಕೆಯ ಡೇ ನಲ್ಮ್ ಯೋಜನೆಯಡಿ ಬಂದರಿನಲ್ಲಿ (ಪುರುಷರು), ಉರ್ವಾದಲ್ಲಿ (ಮಹಿಳೆಯರು) ಆರಂಭಿಸಿರುವ ರಾತ್ರಿ ವಸತಿರಹಿತ ಆಶ್ರಯ ಕೇಂದ್ರಗಳಿಗೆ ತಲುಪಿಸಿ ಆರೈಕೆ ಮಾಡಲಾಗುತ್ತಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. ಪಾಲಿಕೆಯ ಕಚೇರಿಯಲ್ಲಿ ಮಾತನಾಡಿದ ಅವರು ನಗರದ 10 ಆರೋಗ್ಯ […]

ಬಿ.ಬಿ.ಎಂ.ಪಿ. ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಆಹಾರ ಪೊಟ್ಟಣಗಳ ವಿತರಣೆ

Tuesday, May 11th, 2021
Indira Canteen

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲಿ ದಿನಾಂಕ:12-05-2021 ರಿಂದ ಬಡವರ್ಗದ ಜನರು, ವಲಸಿಗರು, ಕೂಲಿ ಕಾರ್ಮಿಕರಿಗೆ ದಿನದ ಮೂರೊತ್ತು (ಬೆಳಗಿನ ಉಪಹಾರ, ಮಧ್ಯಾಹ್ನದ ಹಾಗೂ ರಾತ್ರಿ ಊಟ) ಆಹಾರ ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಉಚಿತ ಆಹಾರ ಪೊಟ್ಟಣಗಳನ್ನು ಲಾಕ್ಡೌನ್ ಅವಧಿ ಮುಗಿಯುವವರೆಗೂ ಅಂದರೆ ದಿನಾಂಕ: 12-05-2021 ರಿಂದ 24-05-2021ರ ವರೆಗೆ ವಿತರಿಸಲಾಗುವುದು. ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಗುರುತಿನ ಚೀಟ (ಮತದಾರರ ಉರುತಿನ ಚೀಟಿ, […]

ಹುಬ್ಬಳ್ಳಿ : ಇಂದಿರಾ ಕ್ಯಾಂಟೀನ್ ಇನ್ನೂ ಉದ್ಘಾಟನೆ ಆಗಿಲ್ಲ

Tuesday, August 7th, 2018
Hubli indira canteen

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟಿನ್. ಹು-ಧಾ ಅವಳಿ ನಗರದಲ್ಲಿಯೂ ಕೂಡ ಇಂದಿರಾ ಕ್ಯಾಂಟಿನ್ ತಲೆ ಎತ್ತಿದ್ದವು. ಉದ್ಘಾಟನೆಯಾಗಬೇಕು ಎನ್ನುವಷ್ಟರಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಯಿತು.‌ ಈಗಸಮ್ಮಿಶ್ರ ಸರ್ಕಾರವಿದ್ದು, ಸರ್ಕಾರ ರಚನೆಯಾಗಿ 2 ತಿಂಗಳು ಮುಗಿದರೂ ಇಂದಿರಾ ಕ್ಯಾಂಟಿನ್ ಗೆ ಇನ್ನೂ ಉದ್ಘಾಟನೆ ಭಾಗ್ಯ ಬಂದಿಲ್ಲ. ಬಡವರು, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡಬೇಕಿದ್ದ ಕ್ಯಾಂಟಿನನ್ನು ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಿಸಬೇಕು ಎಂಬ ಮಾತು ಕೇಳಿ […]

ಪಂಪವೆಲ್ಲ್ ನಲ್ಲಿ ಐದನೇ ಇಂದಿರಾ ಕ್ಯಾಂಟೀನ್ ಉದ್ಘಾಟನೆ..!

Tuesday, July 17th, 2018
indira-canteen

ಮಂಗಳೂರು : ಬಡವರು, ಕಾರ್ಮಿಕರು ಸೇರಿದಂತೆ ಜನಸಾಮಾನ್ಯರಿಗೆ ವರದಾನವಾಗಿರುವ ರಾಜ್ಯ ಸರಕಾರದ ಜನಪ್ರಿಯ ಯೋಜನೆ ‘ಇಂದಿರಾ ಕ್ಯಾಂಟೀನ್‌’ ನಗ ರದ ನಾಲ್ಕು ಕಡೆ ಈಗಾಗಲೇ ಕಾರ್ಯಾಚರಿಸುತ್ತಿದ್ದು, ಐದನೇ ಕ್ಯಾಂಟೀನ್‌ ಮಂಗಳೂರಿನ ಪಂಪ್‌ವೆಲ್‌ನಲ್ಲಿ ಉದ್ಘಾಟಿಸಲಾಯಿತು. ಬೆಳಗ್ಗೆ 11 ಗಂಟೆಗೆ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್‌ ಅವರು ಉದ್ಘಾಟಿಸಿದರು, ಮೇಯರ್‌ ಭಾಸ್ಕರ್‌ ಕೆ. ಅಧ್ಯಕ್ಷತೆ ವಹಿಸಿದರು. ಪಂಪ್‌ವೆಲ್‌ನಲ್ಲಿ ಮೂರು ತಿಂಗಳ ಹಿಂದೆಯೇ ಸಿದ್ಧಗೊಂಡಿದ್ದ ನೂತನ ಇಂದಿರಾ ಕ್ಯಾಂಟೀನ್‌ ಉದ್ಘಾಟನೆಗೆ ಇತ್ತೀಚೆಗೆ ನಡೆದ ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಚುನಾವಣೆ […]

ಇಂದಿರಾ ಕ್ಯಾಂಟೀನ್​ ಅವ್ಯವಹಾರ ಬಗ್ಗೆ ರಾಮದಾಸ್​ ಆರೋಪ: ಯು.ಟಿ.ಖಾದರ್ ಆಕ್ರೋಶ

Monday, July 16th, 2018
u-t-kadher

ಮಂಗಳೂರು: ಇಂದಿರಾ ಕ್ಯಾಂಟೀನ್ನಲ್ಲಿ 50 ಕೋಟಿ ರೂ. ಅವ್ಯವಹಾರವಾಗಿದೆ ಎಂದು ಶಾಸಕ ರಾಮದಾಸ್ ಆರೋಪಕ್ಕೆ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾ ಕ್ಯಾಂಟೀನ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿಲ್ಲದೆ ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಸರ್ಕಾರ ಯಾರು ಕೂಡ ಹಸಿದಿರಬಾರದು ಎಂದು ಮಾಡಿರುವ ಈ ಯೋಜನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಪಡೆದಿದೆ. ರಾಮದಾಸ್ ಅವರು ಯಾವುದೇ ಮಾಹಿತಿ ತಿಳಿದುಕೊಳ್ಳದೆ ಆರೋಪ ಮಾಡುತ್ತಿದ್ದಾರೆ. ಜನರಲ್ಲಿ ಗೊಂದಲ ಸೃಷ್ಟಿಸಿ ಹಿಟ್ ಆಂಡ್ ರನ್ ಮಾಡುವ […]

ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ಸಹಿತ ಎಲ್ಲ ಭಾಗ್ಯ ಯೋಜನೆಗಳು ಮುಂದುವರಿಯಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

Saturday, June 9th, 2018
siddaramaih

ಬಾದಾಮಿ: ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ಸೇರಿದಂತೆ ಹಿಂದಿನ ಸರ್ಕಾರ ಜಾರಿಗೆ ತಂದಿರುವ ಯಾವುದೇ ಯೋಜನೆ ಸ್ಥಗಿತಗೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕ್ಷೇತ್ರ ಪ್ರವಾಸ ಸಂದರ್ಭದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಜಾರಿಗೆ ತಂದಿರುವ ಯಾವುದೇ ಜನಪರ ಕಾರ್ಯಕ್ರಮ ನಿಲ್ಲಲು ಬಿಡುವುದಿಲ್ಲ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದರೂ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಇಂದಿರಾ ಕ್ಯಾಂಟೀನ್ ಸೇರಿದಂತೆ ಎಲ್ಲ ಭಾಗ್ಯ ಯೋಜನೆಗಳು ಯಥಾವತ್ತಾಗಿ ಮುಂದುವರಿಯಲಿದೆ ಎಂದರು. ಚುನಾವಣೆಯಲ್ಲಿ ನಮಗೆ […]

ಬಿಜೆಪಿಗೆ ಹೋಗುವ ಗೇಟ್‌ ಬಂದ್‌ ಆಗಿದ್ರೆ ಹೋಗುವುದು ಹೇಗೆ?

Thursday, March 22nd, 2018
Udupi-Pramod

ಉಡುಪಿ: ‘ನಾನು ಉಡುಪಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ. ಪಕ್ಷದ ಟಿಕೇಟ್‌ಗಾಗಿ ಅರ್ಜಿಯನ್ನು ಸಲ್ಲಿಸಿದ್ದು 1 ಲಕ್ಷ ರೂಪಾಯಿ ಠೇವಣಿ ಇಟ್ಟಿದ್ದೇನೆ’ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಗುರುವಾರ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ನಡೆಸಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರ ನೀಡಿದರು. ಬಿಜೆಪಿ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ‘ಬಿಜೆಪಿಗೆ ಹೋಗುವ ಗೇಟ್‌ ಬಂದ್‌ ಆಗಿದ್ರೆ ಹೋಗುವುದು ಹೇಗೆ? ಬಿಜೆಪಿಗೆ ಹೋಗಲು ನನಗೆ ಇಬ್ಬರುನಾಯಕರು ತಡೆ ಹಾಕಿದ್ದಾರೆ. ಒಬ್ಬರು […]

ರಾಹುಲ್‌ ಭೇಟಿಯಿಂದ ಪಕ್ಷಕ್ಕೆ ಬಲ… ದ.ಕ. 8 ಸ್ಥಾನಗಳಲ್ಲೂ ಗೆಲ್ಲುತ್ತೇವೆ: ಖಾದರ್‌‌‌‌‌‌

Thursday, March 22nd, 2018
u-t-kader

ಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ದಕ್ಷಿಣ ಕನ್ನಡ ಜಿಲ್ಲೆಗೆ ಬೇಟಿ ನೀಡಿದ್ದರಿಂದ ಪಕ್ಷಕ್ಕೆ ಬಲ ಬಂದಿದೆ. ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಜಯಿಸಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಭೇಟಿಯಿಂದ ಕಾರ್ಯಕರ್ತರಲ್ಲಿ ಹುರುಪು ಬಂದಿದೆ. ಮಂಗಳವಾರ ನಡೆದ ಕಾರ್ಯಕ್ರಮ ಯಶಸ್ವಿಯಾಗಿದ್ದು, ಈಗ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ 7ರಲ್ಲಿ ಕಾಂಗ್ರೆಸ್ ಶಾಸಕರಿದ್ದು, ಈ ಸಲದ ಚುನಾವಣೆಯಲ್ಲಿ ಎಂಟೂ ಸ್ಥಾನಗಳಲ್ಲೂ ಕಾಂಗ್ರೆಸ್ […]

ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಅಲೆ: ಯು.ಟಿ.ಖಾದರ್

Friday, March 16th, 2018
rahul-gandhi

ಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾ.20ರಂದು ನಗರಕ್ಕೆ ಆಗಮಿಸಲಿದ್ದು, ಈಗಾಗಲೇ ಜಿಲ್ಲೆಯಲ್ಲಿ ಅವರ ಪರವಾದ ಅಲೆ ಜೋರಾಗಿದೆ. ಈ ಅಲೆಯಲ್ಲಿ ಯಾರ್ಯಾರು ಕೊಚ್ಚಿ ಹೋಗಲಿದ್ದಾರೆ ಎಂಬುವುದನ್ನು ಹೇಳಲಾಗದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.20ರಂದು ನಗರದ ನೆಹರೂ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಕ್ಷೇತ್ರದಿಂದ ಸುಮಾರು 15000 ಮಂದಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲೆಯಿಂದ ಸುಮಾರು 75000 ಮಂದಿ ಸೇರುವ ನಿರೀಕ್ಷೆ ಇದೆ. ಅದಕ್ಕಾಗಿಯೇ ವಿಶಾಲವಾದ ನೆಹರೂ […]