Blog Archive

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ

Tuesday, March 6th, 2018
ingrauted

ಮಂಗಳೂರು: ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಸಚಿವ ಯು.ಟಿ.ಖಾದರ್ ಮಂಗಳವಾರ ಚಾಲನೆ ನೀಡಿದರು. ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿನಂಪ್ರತಿ 500 ಮಂದಿಗೆ ಊಟ, ತಿಂಡಿ ವಿತರಣೆ ನಡೆಯಲಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿಯ ತಿಂಡಿ-ಊಟ ಬೇಕಾದವರು ಕೂಪನ್ ಪಡೆಯಬೇಕು. ಕೇಸರಿ ಬಾತ್, ಖಾರಾ ಬಾತ್, ಇಡ್ಲಿ ಉಪಹಾರದಲ್ಲಿ ಸೇರಿವೆ. ಉಪಹಾರಕ್ಕೆ 5 ರೂ, ಊಟ ತಲಾ 10 ರೂ. ನೆಹರೂ ಮೈದಾನ, ಉರ್ವ, ಕಾವೂರು, ಪಂಪ್ ವೆಲ್ ಮತ್ತು ಸುರತ್ಕಲ್ ಸೇರಿ ಮಂಗಳೂರಿನ 5 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ದೊರೆಯಲಿದೆ. ಈ ಸಂದರ್ಭ ದ.ಕ. […]

ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದ ಕಿಡಿಗೇಡಿಗಳು…!

Saturday, February 3rd, 2018
indira-canteen

ಮಂಗಳೂರು: ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದು ವಿರೂಪಗೊಳಿಸಿದ ಘಟನೆ ನಗರದ ಸುರತ್ಕಲ್‌ನಲ್ಲಿ ನಡೆದಿದೆ. ಇಂದಿರಾ ಕ್ಯಾಂಟೀನ್‌‌ ರಾಜ್ಯವ್ಯಾಪಿ ಸ್ಥಾಪಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲೂ ಕ್ಯಾಂಟೀನ್ ನಿರ್ಮಿಸಲು ಯೋಜಿಸಲಾಗಿದೆ. ಇದರಂತೆ ಸುರತ್ಕಲ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್‌ಗೆ ಹಾಗೂ ಅಲ್ಲಿದ್ದ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದು ವಿರೂಪಗೊಳಿಸಿದ್ದಾರೆ. ಘಟನೆ ತಡರಾತ್ರಿ ನಡೆದಿರಬಹುದೆಂದು ಅಂದಾಜಿಸಲಾಗಿದ್ದು, ಸುರತ್ಕಲ್ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಾಧನೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ […]

ದ.ಕ. ಜಿಲ್ಲೆಯಲ್ಲಿ 10 ಇಂದಿರಾ ಕ್ಯಾಂಟೀನ್‌: ರೈ

Saturday, January 27th, 2018
indira-canteen

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ 10 ಇಂದಿರಾ ಕ್ಯಾಂಟೀನ್‌ಗಳು ಮಂಜೂರಾಗಿದ್ದು ಶೀಘ್ರ ಕಾರ್ಯಾರಂಭಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ನೆಹರೂ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣಗೈದು ಅವರು ಗಣ ರಾಜ್ಯೋತ್ಸವ ಸಂದೇಶ ನೀಡಿದರು. ಜಿಲ್ಲೆಯಲ್ಲಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ, ಮೈತ್ರಿ ಹಾಗೂ ವಿದ್ಯಾಸಿರಿ ಯೋಜನೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿವೆ ಎಂದರು. ದ.ಕ. ಜಿಲ್ಲೆಯ ಇತಿಹಾಸದಲ್ಲೇ ಅತ್ಯಧಿಕ ಸಂಖ್ಯೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದ್ದು […]

ಜನವರಿ 1ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭ

Tuesday, October 17th, 2017
indira canteen

ಮಂಗಳೂರು: ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಳ್ಳಲಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ. ಖಾದರ್, ಮುಂದಿನ ವರ್ಷದ ಜನವರಿ 1ರಿಂದ ಜಿಲ್ಲೆಯ ಹತ್ತು ಕಡೆ ಇಂದಿರಾ ಕ್ಯಾಂಟೀನ್ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5, ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ 1, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿಯಲ್ಲಿ ತಲಾ 1 ಕ್ಯಾಂಟೀನ್ ತೆರೆಯಲಾಗುವುದು ಎಂದು ಮಾಹಿತಿ ನೀಡಿದರು. 45 ಸಾವಿರದಿಂದ […]

ಮಂಗಳೂರಿಗೆ ಬಂದ ಅಣಕು ಇಂದಿರಾ ಕ್ಯಾಂಟೀನ್, ರೂ. 5 ಕ್ಕೆ ಚಾ, ತಿಂಡಿ

Wednesday, August 16th, 2017
Indira Canteen

ಮಂಗಳೂರು  : ರಾಜ್ಯ ಸರಕಾರ ಇಂದಿರಾ ಕ್ಯಾಂಟೀನ್‌ಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದ್ದಂತೆಯೇ. ದ.ಕ.ಜಿಲ್ಲೆಯಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಒತ್ತಾಯಿಸಿ ಡಿವೈಎಫ್ ಐ ನೇತೃತ್ವದಲ್ಲಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಧರಣಿ ನಡೆಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗ ಅಣುಕು ಇಂದಿರಾ ಕ್ಯಾಂಟೀನ್ ಪ್ರದರ್ಶನ ನಡೆಯಿತು. ಸಾರ್ವಜನಿಕರು ರೂ. 5 ಕ್ಕೆ ಚಾ, ತಿಂಡಿ ತಿಂದು ಹಸಿವು ನೀಗಿಸಿ ಕೊಂಡರು. ಖಾಸಗಿ ಹೋಟೆಲ್, ಉಪಹಾರ ಗೃಹಗಳಲ್ಲಿ ಬೆಲೆ ಏರಿಕೆ ನಿಯಂತ್ರಿಸಲು, ಮಂಗಳೂರಿಗೆ ಇಂದಿರಾ ಕ್ಯಾಂಟೀನ್ ಬರಬೇಕೆಂದು ಒತ್ತಾಯಿಸಲಾಯಿತು. ಒಂದೇ ಶ್ರೇಣಿಯ ಹೋಟೆಲ್ ಗಳಲ್ಲಿ ಒಂದೇ ರೀತಿಯ ದರವಿರಬೇಕು, […]