ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ “ಪವರ್” ತುಂಬಿದ ಸಚಿವ ಸುನಿಲ್ ಕುಮಾರ್
Friday, September 17th, 2021ಬೆಂಗಳೂರು : ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡುತ್ತೇನೆ ಎಂದು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ದಿನ ಆಶ್ವಾಸನೆ ನೀಡಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಆ ನಿಟ್ಟಿನಲ್ಲಿ ಚಾರಿತ್ರಿಕ ಆದೇಶ ಹೊರಡಿಸು ಮೂಲಕ ದೃಢ ಅಡಿ ಇಟ್ಟಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಬಲಪಡಿಸಿ, ಅದರ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಧಿಕಾರ ವಿಕೇಂದ್ರೀಕರಣ […]