ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ನಿವಾಸದ ಮೇಲೆ ಇಡಿ ದಾಳಿ

Saturday, March 7th, 2020
ran-kapoor

ಮುಂಬೈ : ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಸಂಸ್ಥಾಪಕ ಹಾಗೂ ಮಾಜಿ ಸಿಇಒ ರಾಣಾ ಕಪೂರ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ. ನಷ್ಟದಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಷನ್(ಡಿಎಚ್ಎಫ್ಎಲ್) ಜೊತೆ ಯೆಸ್ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಇಡಿ ತಿಳಿಸಿದೆ. ಅಕ್ರಮ ಹಣ ವಹಿವಾಟು ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಕಪೂರ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ರಾಣಾ […]

ಡಿ.ಕೆ.ಶಿವಕುಮಾರ್ ಗೆ ಇಂದು ಸುಪ್ರೀಂ ಕೋರ್ಟ್​ನಲ್ಲಿ ಇಡಿ ಮೇಲ್ಮನವಿ ಅರ್ಜಿ ವಿಚಾರಣೆ

Friday, November 15th, 2019
DKShi

ನವದೆಹಲಿ : ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದರು. ಈ ಕುರಿತು ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡುವಂತೆ ಡಿ.ಕೆ. […]

ವಿದೇಶದಲ್ಲಿ ಭಾರೀ ಪ್ರಮಾಣ ಹೂಡಿಕೆ : ಮಾಜಿ ಸಚಿವ ಕೆಜೆ ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ

Tuesday, November 12th, 2019
KJ

ಬೆಂಗಳೂರು : ವಿದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ಆರಂಭಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೇಮಾ) ಅಡಿ ಇಡಿ ಪ್ರಕರಣ ದಾಖಲಿಸಿದ್ದು, ಈಗ ಜಾರ್ಜ್ ಹೊಂದಿರುವ ಆಸ್ತಿಯ ಅಧಿಕೃತ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಜಾರ್ಜ್ ಅವರು 1985 ರಿಂದ 2019ರವರೆಗೆ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ. ಹೀಗಾಗಿ ವಿಧಾನಸಭೆಗೆ ಆಯ್ಕೆಯಾದ ವರ್ಷದಿಂದ ಇಲ್ಲಿಯವರೆಗೆ ಲೋಕಾಯುಕ್ತದಲ್ಲಿ ಜಾರ್ಜ್ ಘೋಷಿಸಿಕೊಂಡಿರುವ ಆಸ್ತಿಯ ವಿವರವನ್ನು […]

ಶಾಸಕ ಕೆ.ಎಸ್ ರಾಜಣ್ಣ ಅವರನ್ನು ಇಂದು ಇಡಿ ಅಧಿಕಾರಿಗಳು ವಿಚಾರಣೆ

Wednesday, October 9th, 2019
KS-Rajanna

ನವದೆಹಲಿ: ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದ ಮೇಲೆ ಮಾಜಿ ಸಚಿವ ಡಿಕೆ ಶಿವಕುಮಾರ್ ಈಗಾಗಲೇ ತಿಹಾರ್ ಜೈಲು ಸೇರಿದ್ದಾರೆ. ಈ ಬೆನ್ನಲ್ಲೇ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೂಡ ವಿಚಾರಣೆ ನಡೆಸಲಾಯಿತು. ಇದೀಗ ಕಾಂಗ್ರೆಸ್ಸಿನ ಮತ್ತೊಬ್ಬ ನಾಯಕನ ವಿಚಾರಣೆಗೆ ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ದೆಹಲಿಯ ಲೋಕನಾಯಕ್ ಭವನದ ಇಡಿ ಕಚೇರಿಯಲ್ಲಿ ಮಾಜಿ ಶಾಸಕ ಕೆ.ಎಸ್ ರಾಜಣ್ಣ ಅವರನ್ನು ಇಂದು ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಣ್ಣ ಅವರು ಈಗಾಗಲೇ ದೆಹಲಿ ತಲುಪಿದ್ದಾರೆ. ರಾಜಣ್ಣ […]

ಡಿ ಕೆ ಶಿವಕುಮಾರ್ ಗೆ ಅಕ್ಟೋಬರ್ 15 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Tuesday, October 1st, 2019
DKShi

ನವದೆಹಲಿ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 15 ವರೆಗೆ ವಿಸ್ತರಿಸಲಾಗಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಇಡಿ ಅಧಿಕಾರಿಗಳು ಇಂದು ಡಿಕೆ ಶಿವಕುಮಾರ್ ಅವರನ್ನು ಹಾಜರುಪಡಿಸಿದರು. ಕೋರ್ಟ್ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಅಕ್ಟೋಬರ್ 4 ಮತ್ತು 5ರಂದು ಇಡಿ ಅಧಿಕಾರಿಗಳು ಡಿಕೆಶಿ ಅವರನ್ನು ವಿಚಾರಣೆ ನಡೆಸಲು ಕೋರ್ಟ್ ಅವಕಾಶ ನೀಡಿದೆ.