ಉಗ್ರರಿಗೆ ಹಣ ಕಳುಹಿಸುತ್ತಿದ್ದ ಮಂಗಳೂರಿನ ದಂಪತಿಗಳಿಗೆ ಹತ್ತು ವರ್ಷ ಕಠಿಣ ಶಿಕ್ಷೆ

Thursday, November 25th, 2021
Ayesha Banu

ಮಂಗಳೂರು  : ಭಯೋತ್ಪಾದಕ ಸಂಘಟನೆಯ ಜತೆ ಸಂಪರ್ಕ ಹೊಂದಿ ಹಲವಾರು ಉಗ್ರರಿಗೆ ನೆರವು ನೀಡುತ್ತಿದ್ದ ಮಂಗಳೂರಿನ ದಂಪತಿಗೆ ಇದೀಗ 10 ವರ್ಷಗಳ ಶಿಕ್ಷೆಯಾಗಿದೆ. ಜುಬೇರ್ ಹುಸೇನ್ (42), ಆತನ ಪತ್ನಿ ಆಯೇಷಾ ಬಾನು (39) ಶಿಕ್ಷೆಗೊಳಗಾದವರು. ಇವರು ನಿಷೇಧಿತ ಸಿಮಿ, ಇಂಡಿಯನ್ ಮುಜಾಹಿದೀನ್ ಸಂಘಟನೆಗಳಿಗೆ ಹಣ ಭಾರತದಿಂದ ಹಣ ಸಂಗ್ರಹಿಸಿ ಕಳುಹಿಸಿಕೊಡುತ್ತಿದ್ದರು. ಮಂಗಳೂರು ಮೂಲದ ಈ ದಂಪತಿ ಛತ್ತೀಸ್‌ಗಢ ರಾಯಪುರದಲ್ಲಿ ಸದ್ಯ ವಾಸವಾಗಿದ್ದರು. ಆರಂಭದಲ್ಲಿ ಮಂಗಳೂರಿನಿಂದಲೇ ತಮ್ಮ ಕುಕೃತ್ಯ ನಡೆಸುತ್ತಿದ್ದ ಇವರು ನಂತರ ರಾಯಪುರದಲ್ಲಿ ಸಿಕ್ಕಿಬಿದ್ದಿದ್ದರು. ಇವರ ಜತೆ […]

ತಾಲಿಬಾನಿಗಳ ಕೈಗೆ ಆಫ್ಘನ್​ ಅಧಿಕಾರ, ಉಗ್ರರ ಹೊಸ ಸರ್ಕಾರಕ್ಕೆ ಸಿದ್ಧತೆ

Sunday, August 22nd, 2021
Afgahni

ಕಾಬೂಲ್ : ಅಫ್ಘಾನ್ ನಾಗರಿಕರನ್ನು ಲೂಟಿ ಮಾಡಿ ಅವರನ್ನು ವಿರೋಧಿಸಿದವರನ್ನು ಕೊಂದು ಈಗ ಅಫ್ಘಾನ್ ಸಂಪತ್ತನ್ನು ವಶ ಪಡಿಸಿಕೊಂಡಿರುವ ಉಗ್ರರಿಗೆ ಮತ್ತಷ್ಟು ಬಲ ಬಂದಿದೆ. ತಮ್ಮ ನಿಲುವನ್ನು ವಿಶ್ವಕ್ಕೆ ತೋರಿಸಲು ತಮ್ಮವರದ್ದೇ ಸರಕಾರ ಮಾಡಲು ಸಿದ್ಧತೆ ಮಾಡಿದ್ದಾರೆ.  ಕಳೆದ 20 ವರ್ಷಗಳಿಂದ ಅಧಿಕಾರದ ದಾಹದಲ್ಲಿ ಹಪಹಪಿಸುತ್ತಿದ್ದ ತಾಲಿಬಾನಿಗಳು ಕೊನೆಗೂ ಆಫ್ಘನ್ನಲ್ಲಿ ತಮ್ಮ ಅಧಿಕಾರದ ಚುಕ್ಕಾಣಿ ಯನ್ನು ಹಿಡಿದಿದ್ದಾರೆ. ಅಲ್ಲದೆ, ತಾಲಿಬಾನಿ ನಾಯಕರು ಶೀಘ್ರದಲ್ಲೇ ಹೊಸ ಸರ್ಕಾರವನ್ನೂ ಘೋಷಿಸುವ ಸಿದ್ಧತೆ ನಡೆಸುತ್ತಿದ್ದಾರೆ. ಈ ನಡುವೆ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರು […]

ಬಂಟ್ವಾಳ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ, ಉಗ್ರರೊಂದಿಗೆ ಸಂಪರ್ಕ ಶಂಕೆ

Tuesday, January 19th, 2021
satalite phone

ಮಂಗಳೂರು : ನಿಷೇಧಿತ ಸ್ಯಾಟಲೈಟ್ ಫೋನ್ ಕರಾವಳಿಯ ಜಿಲ್ಲೆಗಳಲ್ಲಿ ಕಾರ್ಯಪ್ರವೃತ್ತವಾಗಿರುವುದು ಬೆಳಕಿಗೆ  ಬಂದಿದೆ.  ಇದರಿಂದಾಗಿ ಉಗ್ರರ ಚಟುವಟಿಕೆ ಆರಂಭವಾಗಿದೆ ಎನ್ನಲಾಗುತ್ತಿದ್ದು. ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಮತ್ತೆ ಸ್ಯಾಟ್ ಲೈಟ್ ಫೋನ್ ಆಕ್ಟಿವ್ ಆಗಿದೆ. ಕಳೆದ 10 ದಿನಗಳಲ್ಲಿ 3 ಬಾರಿ ಸ್ಯಾಟಲೈಟ್ ಫೋನ್ ಆಕ್ಟಿವ್ ಆದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ, ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಲೊಕೇಷನ್ ಟ್ರೇಸ್ ಮಾಡಲಾಗಿದೆ. ದ.ಕ ಜಿಲ್ಲೆಯ ಬಂಟ್ವಾಳ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ […]

ನಗರದಲ್ಲಿ ತಾಲಿಬಾನ್ ಪರ ಗೋಡೆಬರಹ, ಮತ್ತೋರ್ವ ಆರೋಪಿ ಸೆರೆ

Wednesday, December 9th, 2020
Terorist

ಮಂಗಳೂರು : ನಗರದಲ್ಲಿ ತಾಲಿಬಾನ್ ಉಗ್ರರ ಪರ ಗೋಡೆಬರಹ ಬರೆದು ಆತಂಕ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ಸಂಬಂಧಿ, ತೀರ್ಥಹಳ್ಳಿಯ ಸಾದತ್ ಎಂಬಾತ ಪೊಲೀಸ್ ವಶದಲ್ಲಿರುವ ಆರೋಪಿ ಎಂದು ತಿಳಿದುಬಂದಿದೆ. ವಶದಲ್ಲಿರುವ ಆರೋಪಿಯು ಪ್ರಕರಣದ ಮೊದಲ ಆರೋಪಿ ಮುಹಮ್ಮದ್ ಶಾರೀಕ್‌ನ ಸಂಬಂಧಿ ಎನ್ನಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ತೀರ್ಥಹಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೊಬೈಲ್ ದಾಖಲೆ ಆಧಾರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಶಂಕಿತ ಆರೋಪಿ ವಶಕ್ಕೆ

Thursday, December 3rd, 2020
Terorist

ಮಂಗಳೂರು : ಮೊಬೈಲ್ ದಾಖಲೆ ಆಧಾರದಲ್ಲಿ ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮುಹಮ್ಮದ್ (26)ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ. ಮೊಬೈಲ್ ದಾಖಲೆ ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ನ.27ರಂದು ಕದ್ರಿ‌ […]

ಗೋಡೆ ಬರಹ ಬರೆದ ದೇಶ ದ್ರೋಹಿಗಳನ್ನು ಪತ್ತೆ ಹಚ್ಚಿ ಬೇರೆ ದೇಶಕ್ಕೆ ಬಿಟ್ಟು ಬರಬೇಕು : ಯು.ಟಿ. ಖಾದರ್

Sunday, November 29th, 2020
UT Khader

ಮಂಗಳೂರು: ಉಗ್ರರಿಗೆ ಬೆಂಬಲವಾಗಿ ಗೋಡೆ ಮೇಲೆ ಬರೆದ ಆರೋಪಿಗಳು  ಯಾರೆ ಇರಲಿ ಅಂತಹ ದೇಶ ದ್ರೋಹಿಗಳನ್ನು 15 ದಿನದೊಳಗೆ ಬಂಧಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮಾಜಿ‌ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಉಗ್ರರ ಪರ ಗೋಡೆ ಬರಹ ಬರೆಯುವವರ ಹಿಂದೆ ಯಾರಿದ್ದಾರೆ ಎಂದು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕಾದದ್ದು ಬಿಜೆಪಿ ಸರ್ಕಾರ ಮತ್ತು ಪೊಲೀಸರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಈ ರೀತಿ ಬರೆದವರು ಯಾರೆ ಇರಲಿ ಅಂತಹ ದೇಶ ದ್ರೋಹಿಗಳನ್ನು ಪತ್ತೆ ಹಚ್ಚಿ ಅವರನ್ನು […]

ಮುಂಬೈಯಲ್ಲಿ ಉಗ್ರರು ಹಲವಾರು ಮಂದಿಯನ್ನು ಬಲಿ ಪಡೆದ ದಿನವೇ ಮಂಗಳೂರಿನಲ್ಲಿ ಗೋಡೆ ಬರಹ : ಎಬಿವಿಪಿ ಖಂಡನೆ

Saturday, November 28th, 2020
Abvp Protest

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಅಪಾರ್ಟ್‌ಮೆಂಟ್‌ನ ಆವರಣ ಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು. 2008 ನ.26ರಂದು ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನ. ಅದೇ ದಿನ ದೇಶದ್ರೋಹಿಗಳು ಉಗ್ರರ […]

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಸ್ಥಳೀಯ ಬಿಜೆಪಿ ನಾಯಕ ಮತ್ತು ಕುಟುಂಬ ಸದಸ್ಯರ ಹತ್ಯೆ

Thursday, July 9th, 2020
vashim ahamed

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮೆರೆದಿದ್ದಾರೆ. ಬಂಡಿಪೊರ ಪ್ರದೇಶದಲ್ಲಿ ಉಗ್ರಗಾಮಿಗಳು ಬಿಜೆಪಿಯ ಸ್ಥಳೀಯ ನಾಯಕ ವಾಸೀಂ ಅಹ್ಮದ್ ಬಾರಿ ಮತ್ತು ಅವರ ಕುಟುಂಬ ಸದಸ್ಯರನ್ನು ಬುಧವಾರ ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಲ್ಲಿ ವಾಸೀಂ ಜತೆಗೆ ಅವರ ಸೋದರ ಉಮರ್ ಬಾರಿ ಮತ್ತು ತಂದೆ ಬಶೀರ್ ಅಹ್ಮದ್ ಕೂಡ ಹತ್ಯೆಗೀಡಾಗಿದ್ದಾರೆ. ವಾಸೀಂ ಅಹ್ಮದ್ ಅವರು ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಬಂಡಿಪೊರದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಈ ಮೂವರೂ ತಮ್ಮ ಅಂಗಡಿಯಲ್ಲಿ ಇದ್ದ ವೇಳೆಗೆ […]

ಉಗ್ರರ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

Saturday, April 18th, 2020
Baramulla

ಶ್ರೀನಗರ: ಉಗ್ರರು ಕೊರೋನಾ ಸಂಕಷ್ಟದ ಸಮಯದಲ್ಲೂ ಭಾರತದಲ್ಲಿ ವಿದ್ವಂಸಕ ಕೃತ್ಯ ಎಸಗಿದ್ದಾರೆ. ಸಿಆರ್ಪಿಎಫ್ ಯೋಧರಿದ್ದ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಉಗ್ರರ ತಂಡವೊಂದು ಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಬಳಿ ಸಿಆರ್ಪಿಎಫ್ ವಾಹನದ ಮೇಲೆ ಹಠಾತ್ತನೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಉಗ್ರರ ದಾಳಿ ನಡೆದ ಕೂಡಲೇ ಸ್ಥಳಕ್ಕೆ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ರವಾನಿಸಲಾಗಿದೆ. ಇಬ್ಬರು ಅಥವಾ ಮೂವರು ಉಗ್ರರ ತಂಡ ಈ […]

ಇಬ್ಬರು ಉಗ್ರರ ಜೊತೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಡಿಎಸ್ಪಿ ದೇವಿಂದರ್ ಸಿಂಗ್

Friday, January 17th, 2020
devindar

ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಉಗ್ರರ ಜೊತೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಡೆಪ್ಯುಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ) ದೇವಿಂದರ್ ಸಿಂಗ್ ರಾಷ್ಟ್ರೀಯ ತನಿಖಾ ತಂಡ ಅಧಿಕಾರಿಗಳ ವಿಚಾರಣೆ ವೇಳೆ ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ. ಕಣಿವೆ ರಾಜ್ಯದಲ್ಲಿ ಶಾಂತಿ ಕದಡಲು ನಿಂತಿರುವ ಉಗ್ರರಿಗೆ ನೆರವು ನೀಡುವ ಪೊಲೀಸರಿಗೆ ಲಕ್ಷ ಲಕ್ಷ ರೂಪಾಯಿ ಹಣ ನೀಡಲಾಗುತ್ತದೆ ಎಂದು ವಿಚಾರಣೆ ವೇಳೆ ಡಿಎಸ್ಪಿ ದೇವಿಂದರ್ ಸಿಂಗ್ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ಇಬ್ಬರು ಉಗ್ರರರನ್ನು […]