ಸಾರ್ವಜನಿಕರಿಗೂ ಮೀಡಿಯಾ ಹೆಲ್ತ್ ಕ್ಲಿನಿಕ್ ನಲ್ಲಿ ಉಚಿತ ಅರೋಗ್ಯ ತಪಾಸಣೆ ಉದ್ಘಾಟನೆ
Tuesday, November 19th, 2019ಮಂಗಳೂರು : ‘ ಆರೋಗ್ಯವೇ ಭಾಗ್ಯ’ ನಾಣ್ನುಡಿಯಂತೆ ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಆರೋಗ್ಯ ಸುದೃಢವಾಗಿದ್ದಾಗ ಸುಸ್ಥಿರ ಕುಟುಂಬ, ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎ.ಜೆ. ಆಸ್ಪತ್ರೆ ಸಾಮಾಜಿಕ ಕಳಕಳಿಯೊಂದಿಗೆ ವಿಶೇಷ ಸೇವೆ ನೀಡುತ್ತಾ ಬರುತ್ತಿದೆ ಎಂದು ಲಕ್ಷ್ಮೀ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹೇಳಿದರು. ನಗರದ ಪ್ರೆಸ್ಕ್ಲಬ್ನಲ್ಲಿ ಸಾರ್ವಜನಿಕರಿಗೂ ಮೀಡಿಯಾ ಹೆಲ್ತ್ ಕ್ಲಿನಿಕ್ನಲ್ಲಿ ಉಚಿತ ಆರೋಗ್ಯ ತಪಾಸಣೆ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರು ಸೇರಿದಂತೆ ಎಲ್ಲರೂ ತಮ್ಮ ಒತ್ತಡ ಕೆಲಸದಿಂದ […]