ಏಪ್ರಿಲ್ 29ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ
Friday, March 6th, 2020ಉಜಿರೆ : ಧರ್ಮಸ್ಥಳದಲ್ಲಿ ಇದೇ ಏಪ್ರಿಲ್ 29ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 49ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ವಧುವಿಗೆ ಸೀರೆ, ರವಿಕೆಕಣ ಮತ್ತು ಮಂಗಲ ಸೂತ್ರ ಹಾಗೂ ವರನಿಗೆ ಧೋತಿ, ಶಾಲು ನೀಡಲಾಗುವುದು. ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಏಪ್ರಿಲ್ 25 ರೊಳಗೆ ಸೂಕ್ತ ದಾಖಲೆ ಪತ್ರಗಳೊಂದಿಗೆ ಹೆಸರು ನೋಂದಾಯಿಸಲುಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 08256 – 2666 44