ಹೈಕೋರ್ಟ್ ಸಂಚಾರಿ ಪೀಠಕ್ಕೆ ಆಗ್ರಹ: ತೀವ್ರಗೊಂಡ ಬೇಡಿಕೆ
Friday, November 4th, 2016ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ತೆರೆಯಬೇಕೆಂಬ ಬೇಡಿಕೆ ಬಲಗೊಳ್ಳುತ್ತಿದೆ. ಸಂಚಾರಿ ಪೀಠಕ್ಕೆ ನ್ಯಾಯವಾದಿಗಳು ಆಗ್ರಹಿಸುತ್ತಿರುವಾಗಲೇ ಅವರ ಬೇಡಿಕೆಗೆ ವಿವಿಧ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ. ಕಲಬುರಗಿ ಮತ್ತು ಧಾರವಾಡದಲ್ಲಿ ಆರಂಭಿಸಿದಂತೆ ಮಂಗಳೂರಿನಲ್ಲಿಯೂ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಬೇಕೆಂದು ನಮ್ಮ ಮನೆ ನಮ್ಮ ಊರು ವೇದಿಕೆ ಹಾಗೂ ಸರ್ಕಾರೇತರ ಸಂಘಟನೆಗಳ ಒಕ್ಕೂಟ ಸರ್ಕಾರವನ್ನು ಆಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ವೇದಿಕೆಯ ಪ್ರಧಾನ ಸಂಯೋಜಕ ಬಿ.ಎಸ್.ಚಂದ್ರು, ಬೇಡಿಕೆ ಈಡೇರಿಕೆಗಾಗಿ ಒಂದು ತಿಂಗಳೊಳಗೆ ಹೋರಾಟ ಆರಂಭಿಸುವುದಾಗಿ ತಿಳಿಸಿದರು. ಕರಾವಳಿ ಜಿಲ್ಲೆಗಳಾದ […]