ಇಲ್ಲಿನ ಬಡವರಿಗೆ ಅಧಿಕಾರ ಕೊಟ್ಟಿದ್ದು ಕಾಂಗ್ರೆಸ್ ಪಾರ್ಟಿ : ಮಲ್ಲಿಕಾರ್ಜುನ್ ಖರ್ಗೆ

Saturday, February 17th, 2024
Kharge

ಮಂಗಳೂರು: ಮಂಗಳೂರಿನ ಜನ ಮುಂಜಾನೆ ಎದ್ದ ಕೂಡಲೇ ಕಾಂಗ್ರೆಸ್‌ಗೆ ಬೈತಾರೆ. ಧರ್ಮದ ಹೆಸರಲ್ಲಿ ಶ್ರೀಮಂತರು ಬಡವರನ್ನು ತುಳಿಯುತ್ತಿದ್ದಾರೆ. ಮಂಗಳೂರು ಉಡುಪಿಯಲ್ಲಿ ಸೇತುವೆ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಕಾಲದಲ್ಲಿ. ಬಂದರು ನಿರ್ಮಾಣ, ವಿಮಾನ ನಿಲ್ದಾಣ ಆಗಿದ್ದು ಕಾಂಗ್ರೆಸ್ ಕಾಲದಲ್ಲಿ. ಎಲ್ಲಾ ಬೃಹತ್ ಯೋಜನೆಗಳೂ ಕಾಂಗ್ರೆಸ್ ಕಾಲದಲ್ಲಿಯೇ ಆಗಿದ್ದು. ಮಣಿಪಾಲ ಶೈಕ್ಷಣಿಕ ಅಭಿವೃದ್ಧಿ, ಬ್ಯಾಂಕ್‌ಗಳನ್ನು ಕೊಟ್ಟಿರೋದೂ ಕಾಂಗ್ರೆಸ್ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು. ಮಂಗಳೂರಿನ ಅಡ್ಯಾರ್​ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಮಾತನಾಡಿದ […]

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ, 2022 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

Wednesday, February 14th, 2024
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ, 2022 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ ನಡೆದು 90 ದಿನಗಳು ಪೂರ್ಣಗೊಂಡು ಚಾರ್ಜ್ ಶೀಟ್ ನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಉಡುಪಿಯ ನೇಜಾರು ಸಮೀಪದ ತೃಪ್ತಿ ಲೇ ಔಟ್ ನಲ್ಲಿ ತಾಯಿ ಮತ್ತು ಮಕ್ಕಳ ಭೀಕರ ಹತ್ಯೆ ಮಾಡಲಾಗಿತ್ತು. ಇದೀಗ ಪೊಲೀಸ್ ತನಿಖೆ ಪೂರ್ಣಗೊಂಡಿದ್ದು‌ 244 ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಎಫ್ ಎಸ್ ಎಲ್ ವರದಿಯೂ ಕೈ ಸೇರಿದೆ. ಮಾರ್ಗ ‌ಮಧ್ಯೆ ಬಿಸಾಕಿರುವ ಬಟ್ಟೆ ಆರೋಪಿಯದ್ದೆ ಎನ್ನುವುದು ಎಫ್ ಎಸ್ ಎಲ್ ವರದಿಯಿಂದ […]

ಉಡುಪಿ ನೇಜಾರಿನಲ್ಲಿ ನಾಲ್ವರ ಬರ್ಬರ ಹತ್ಯೆ, ಶಂಕಿತ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು

Wednesday, November 15th, 2023
praveen-arun-chowwgule

ಉಡುಪಿ : ಸಿಸಿಟಿವಿ ದೃಶ್ಯಾವಳಿ ಹಾಗೂ ಫೋನ್ ಕರೆಗಳ ದಾಖಲೆಗಳ ಆಧಾರದ ಮೇಲೆ ಉಡುಪಿ ಯಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಓರ್ವ ವ್ಯಕ್ತಿ ಬೆಳಗಾವಿಯಲ್ಲಿ ವಶಕ್ಕೆ ಪಡೆದು ಉಡುಪಿಗೆ ಕರೆ ತರಲಾಗುತ್ತಿದೆ. ವಶಕ್ಕೆ ಪಡೆದ ಶಂಕಿತನನ್ನು ಪ್ರವೀಣ್ ಅರುಣ್ ಚೌಗಲೆ ಎಂದು ಗುರುತಿಸಲಾಗಿದೆ. ಆತನ ಚಹರೆ, ಎತ್ತರ ಮತ್ತು ಫೋನ್ ಲೊಕೇಶನ್ ಹೊಂದಿಕೆಯಾಗಿದೆ. ಇದರಿಂದ ಆತನನ್ನು ಪೊಲೀಸರು ವಶಕ್ಕೆ ಪಡೆದು ಉಡುಪಿಗೆ ಕರೆ ತರುತ್ತಿದ್ದಾರೆ. ಮೃತಪಟ್ಟ […]

ಉಡುಪಿ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಸುಮೋಟೊ ಕೇಸ್‌

Tuesday, October 10th, 2023
ಉಡುಪಿ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಸುಮೋಟೊ ಕೇಸ್‌

ಉಡುಪಿ : ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಹಿನ್ನಲೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಗೆ ಉಡುಪಿಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಎಂಜಿಎಂ ಕ್ರೀಡಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಲಿರುವ ಬೃಹತ್ ಹಿಂದೂ ಸಮಾಜೋತ್ಸವ ಮಂಗಳೂರಿನಿಂದ ಉಡುಪಿಗೆ ಶೌರ್ಯ ರಥಯಾತ್ರೆ ಪ್ರವೇಶಿಸಿದೆ. ಆದರೆ ಪ್ರಚೋದನಾಕಾರಿ ಭಾಷಣ ಹಿನ್ನೆಲೆ ಸುಮೋಟೊ ಕೇಸ್‌ ಆಗಿರುವುದರಿಂದ ಸದ್ಯ ಷರತ್ತುಬದ್ದ ಜಾಮೀನಿನಲ್ಲಿರೋ ಶರಣ್ ಪಂಪ್ ವೆಲ್ ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಉಡುಪಿಗೆ ಪ್ರವೇಶಿದಂತೆ ನಿರ್ಬಂಧ ಹೇರಿದ್ದಾರೆ. ಈ […]

ಅನ್ಯಧರ್ಮದ ಯುವಕ ಮತ್ತು ಯುವತಿ ಮೇಲೆ ಬಸ್‌ನಲ್ಲಿ ಹಲ್ಲೆ, ನಾಲ್ವರ ಬಂಧನ

Saturday, December 11th, 2021
Bus Love

ಮಂಗಳೂರು : ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಅವಾಚ್ಯವಾಗಿ ಬೈದು ಕೈಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಅನ್ಯಧರ್ಮದ ಯುವಕ ಮತ್ತು ಯುವತಿ ಬಸ್‌ನಲ್ಲಿ ಕುಳಿತುಕೊಂಡಿದ್ದ ಸಂದರ್ಭದಲ್ಲಿ 5-6 ಮಂದಿ ಐಡಿ ಪ್ರೂಫ್ ಕೇಳಿ ಅವರ ಮನೆಯವರ ಬಗ್ಗೆ ವಿಚಾರಿಸಿ ಅವಾಚ್ಯ ಶಬ್ಧಗಳಿಂದ ಬೈದು ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಯುವತಿಯ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ವರ್ತಿಸಿದ್ದ […]

ಕೊರೋನ ಸೋಂಕು ಜೂನ್ 5 : ದಕ್ಷಿಣ ಕನ್ನಡ 609 – 5 ಸಾವು, ಉಡುಪಿ 494 – 2 ಸಾವು

Sunday, June 6th, 2021
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 609 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಈವರೆಗೆ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 80,080ಕ್ಕೇರಿದೆ. 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 950ಕ್ಕೇರಿದೆ. ಭಾನುವಾರ 862 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖ ರಾದವರ ಸಂಖ್ಯೆ 71,580ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,550 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರಗೆ 8,71,018 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ […]

ಉಡುಪಿ ಜಿಲ್ಲೆಯಲ್ಲಿ ಜೂ.7ರ ವರೆಗೆ ಮದುವೆಗೆ ಅನುಮತಿ ಇಲ್ಲ

Monday, May 24th, 2021
Udupi-DC

ಉಡುಪಿ :   ಮೇ 25ರಿಂದ ಜೂ.7ರ ವರೆಗೆ  ಉಡುಪಿ ಜಿಲ್ಲೆಯಲ್ಲಿ ಮದುವೆಗೆ ಅನುಮತಿ ನೀಡುವುದಿಲ್ಲ. ಈವರೆಗೆ ಅನುಮತಿ ನೀಡಿದ ಮದುವೆಗಳು ಮಾತ್ರ ನಡೆಯಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರೊಂದಿಗೆ ನಡೆಸಿದ ವೀಡಿಯೊ ಕಾನ್ಫರೆನ್ಸ್ ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮದುವೆಯಿಂದ ಕೊರೋನ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ.  ಮದುವೆ ಆಗಲು ನಿರ್ಧಾರ ಮಾಡಿದವರು ಅದನ್ನು ಮುಂದೂಡಬೇಕು. ಸಾರ್ವಜನಿಕರು ಸಹಕಾರ ನೀಡಬೇಕು. ಈ […]

ಕೊರೋನ ಸೋಂಕು ಪ್ರಕರಣಗಳು ಶನಿವಾರ : ದಕ್ಷಿಣ ಕನ್ನಡ ಜಿಲ್ಲೆ 1787- ಮೂರು ಸಾವು, ಉಡುಪಿ 1146 – ಏಳು ಸಾವು

Sunday, May 16th, 2021
corona

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಶನಿವಾರ  1787 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,490 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಶನಿವಾರ 3 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 808ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 8,01,768 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,38,411 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 63,357 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 49,355 ಮಂದಿ ಗುಣಮುಖರಾಗಿದ್ದಾರೆ. […]

ದಂಡ ಕಟ್ಟಲು ಸೂಚಿಸಿದ ಟ್ರಾಫಿಕ್‌‌ ಎಸ್‌ಐಗೆ ಅವಾಜ್‌ ಹಾಕಿದ ಮಹಿಳೆ

Saturday, May 1st, 2021
woman

ಉಡುಪಿ : ಮಹಿಳೆಯೊಬ್ಬರು ಕಾರು ಚಲಾಯಿಸುವಾಗ ಮೊಬೈಲ್‌ನಲ್ಲಿ ಮಾತನಾಡಿದ್ದಕ್ಕೆ ದಂಡ ಕಟ್ಟಲು ಸೂಚಿಸಿದ ಟ್ರಾಫಿಕ್‌‌ ಎಸ್‌ಐಗೆ ಅವಾಜ್‌ ಹಾಕಿರುವ ಘಟನೆ ಉಡುಪಿಯ ಕ್ಲಾಕ್‌ ಟವರ್‌ ಬಳಿ ನಡೆದಿದೆ. ಮೊಬೈಲ್‌ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ಮಹಿಳೆಯನ್ನು ತಡೆದ ಟ್ರಾಫಿಕ್‌ ಎಸ್‌ಐ, ಕಾರನ್ನು ಬದಿಗೆ ನಿಲ್ಲಿಸಿ ಮಾತನಾಡಲು ಸೂಚಿಸಿದ್ದಾರೆ. ಅಲ್ಲದೇ ಮಾಡಿದ ತಪ್ಪಿಗೆ ದಂಡ ಕಟ್ಟಲು ಹೇಳಿದ್ದು, ಈ ವೇಳೆ ಮಹಿಳೆ, “ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ” ಎಂದು ಹೇಳಿದ್ದಾಳೆ. ಕೊರೊನಾ ಎಮರ್ಜೆನ್ಸ್‌ ಲಾಕ್‌ಡೌನ್‌ ಸಂದರ್ಭ ಅನಗತ್ಯವಾಗಿ ತಿರುಗಾಡುತ್ತಾ, ರಸ್ತೆ ನಿಯಮವನ್ನು ಉಲ್ಲಂಘಿಸಿದರೆ ಸುಮ್ಮನಿರುವುದಿಲ್ಲ” […]

ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿ

Thursday, January 7th, 2021
Hotel

ಉಡುಪಿ : ಅನಿರೀಕ್ಷಿತವಾಗಿ ಸುರಿದ ಗುಡುಗು ಸಹಿತ‌ ಭಾರೀ ಮಳೆಯ ಹಿನ್ನಲೆಯಲ್ಲಿ ಸಿಡಿಲು ಬಡಿದು ಹೋಟೆಲೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಸಮೀಪವಿರುವ ಸಪ್ತಮಿ ಹೋಟೆಲಿಗೆ ಸಿಡಿಲು ಬಡಿದ ಪರಿಣಾಮ ಹೋಟೆಲು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿ ‌ಶಾಮಕ ದಳ  ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ.