ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪ್ರಮೋದ್ ಬೆಂಬಲಿಗರು ಮೌನ ಪ್ರತಿಭಟನೆ
Monday, November 30th, 2020
ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಕಾಂಗ್ರೆಸ್ ಭವನದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೈರು ಹಾಜರಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪ್ರಮೋದ್ ಬೆಂಬಲಿಗರು ಮೌನ ಪ್ರತಿಭಟನೆ ನಡೆಸಿದ್ದರು. ಸಮಾವೇಶ ವನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ನಾವು ಮೊದಲು ಪಕ್ಷವನ್ನು ಸರಿಪಡಿಸಬೇಕಾಗಿದೆ. ಭಿನ್ನಾಭಿಪ್ರಾಯ ಎಂಬುದು ಎಲ್ಲ ಕಡೆಗಳಲ್ಲಿ ಇರುತ್ತದೆ. ಯಾವುದೇ ಸಮಸ್ಯೆ ಇದ್ದರೆ ನಮ್ಮಲ್ಲಿ ಹೇಳಿಕೊಂಡರೆ ಅದನ್ನು […]