Blog Archive

ಕೊರೋನಾ ಸೋಂಕು ಶುಕ್ರವಾರ : ದಕ್ಷಿಣ ಕನ್ನಡ ಜಿಲ್ಲೆ 311, ಉಡುಪಿ ಜಿಲ್ಲೆ84, ಕಾಸರಗೋಡು ಜಿಲ್ಲೆ 32

Saturday, July 18th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 311 ಮಂದಿಯಲ್ಲಿ ಕೊರೋನಾ  ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3074ಕ್ಕೆ ಏರಿಕೆಯಾಗಿದೆ. 1725 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ 15 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು 1278 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 23168 ಮಂದಿಯ ವರದಿ ಜಿಲ್ಲೆಯಲ್ಲಿ ಇಲ್ಲಿಯ ತನಕ ನೆಗೆಟಿವ್ ಬಂದಿದೆ. ಶುಕ್ರವಾರದಂದು ಜಿಲ್ಲೆಯಲ್ಲಿ ಕೊರೊನಾ ಸೋಂಕೊನಿಂದಾಗಿ 8 ಮಂದಿ ಮೃತಪಟ್ಟಿ ದ್ದಾರೆ.  ಮಂಗಳೂರಿನ 72 ವರ್ಷದ […]

ದ.ಕ. ಜಿಲ್ಲೆಯಲ್ಲಿ ಒಂದೇ ದಿನ 183 ಕೊರೋನ ಪಾಸಿಟಿವ್ ಪ್ರಕರಣಗಳು, ಉಡುಪಿಯಲ್ಲಿ 31

Wednesday, July 8th, 2020
DK Udupi Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಒಂದೇ ದಿನ 183 ಕೊರೋನ ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ. ಸೋಂಕಿತರ ಮೂಲ ಪತ್ತೆಯಾಗದವರ ಸಂಖ್ಯೆ ಯೇ ಗಣನೀಯವಾಗಿ ಏರಿಕೆಯಾಗುತ್ತಿರುವುದು ಜನರನ್ನು ಆತಂಕ ಗೊಳಿಸಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅತಿಹೆಚ್ಚು ಕೇಸ್‌ಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1542ಕ್ಕೆ ಏರಿಕೆಯಾಗಿದೆ. ಇದರಲ್ಲಿ 10 ಮಂದಿ ಹೊರಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಜೊತೆಗೆ ಕೊರೋನಕ್ಕೆ ಬಲಿಯಾಗುವವರ ಸಂಖ್ಯೆಯೂ ಏರುಗತಿಯಲ್ಲಿದೆ. ಮೂಲ ಪತ್ತೆಯಾಗದಿರುವ ಪ್ರಕರಣಗಳು ಹೆಚ್ಚುತ್ತಿರುವುದು ಇನ್ನಷ್ಟು […]

ದ.ಕ. ಜಿಲ್ಲೆಯಲ್ಲಿ 84 ಮಂದಿಯಲ್ಲಿ ಕೊರೊನಾ ಸೋಂಕು, ಉಡುಪಿಯಲ್ಲಿ 22

Wednesday, July 1st, 2020
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬುಧವಾರ 84 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಬ್ಬರು ಗುಣಮುಖರಾಗಿ ಆಸ್ಪತೆಯಿಂದ ಬಿಡುಗಡೆಗೊಂಡಿದ್ದು, ಸೋಂಕಿತರ ಸಂಖ್ಯೆ 823ಕ್ಕೆ ಏರಿಕೆಯಾಗಿದೆ. ಆ ಮೂಲಕ ಗುಣಮುಖರಾದವರ ಸಂಖ್ಯೆ 444ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 372 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಪೈಕಿ ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 38 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಶಾರ್ಜಾದಿಂದ ಮರಳಿರುವ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಂತರ್‌ರಾಜ್ಯ ಪ್ರಯಾಣದ ಮೂಲಕ ಬಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಮಂದಿಗೆ ಕೊರೊನಾ ಸೋಂಕು ದೃಢ, ಉಡುಪಿಯಲ್ಲಿ11

Tuesday, June 23rd, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಂಟು ಮಂದಿಗೆ ಕೊರೊನಾ ದೃಢಪಟ್ಟಿದ್ದು, ಆರು ಮಂದಿ ಗುಣಮುಖರಾಗಿದ್ದಾರೆ. 8 ಜನ ಸೋಂಕಿತರ ಪೈಕಿ ನಾಲ್ಕು ಮಂದಿ ರೋಗಿ-8318 ಪ್ರಾಥಮಿಕ ಸಂಪರ್ಕವುಳ್ಳವರಾಗಿದ್ದು, ಇಬ್ಬರು ತೀವ್ರ ಉಸಿರಾಟದ ತೊಂದರೆ, ಒಬ್ಬರು ಐಎಲ್ಐ ಮತ್ತು ಒಬ್ಬರು ಕುವೈತ್‌ನಿಂದ ಬಂದವರಾಗಿದ್ದಾರೆ. ಎಂಟು ಮಂದಿಯಲ್ಲಿ ನಾಲ್ಕು ಮಹಿಳೆಯರು ನಾಲ್ಕು ಪುರುಷರಿದ್ದಾರೆ. ಹೆರಿಗೆಯಾದ ಮಹಿಳೆಯೂ ಸೇರಿ 6 ಜನ ಗುಣಮುಖರಾಗಿದ್ದಾರೆ. 28 ವರ್ಷದ ಗರ್ಭಿಣಿಗೆ ಇತ್ತೀಚೆಗೆ ಸಿಸೇರಿಯನ್ ಮೂಲಕ ಹೆರಿಗೆಯಾಗಿತ್ತು. ಬಳಿಕ ಬಂದ ಗಂಟಲು ದ್ರವದ […]

ಕೊರೊನಾ ಪಾಸಿಟಿವ್ ಸೋಂಕು ಜೂನ್ 14 : ದಕ್ಷಿಣ ಕನ್ನಡ -5, ಉಡುಪಿ -21, ಕರ್ನಾಟಕ – 176

Sunday, June 14th, 2020
corona-virus

ಮಂಗಳೂರು  :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಜೂನ್ 14 ರಂದು ಐವರಲ್ಲಿ ಕೊರೊನಾ ಪಾಸಿಟಿವ್ ಸೋಂಕು ಪತ್ತೆಯಾಗಿದೆ. ಈ ಪೈಕಿ ಮೂವರು ದುಬೈನಿಂದ ಮರಳಿದವರಾಗಿದ್ದು, ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ಹನ್ನೊಂದು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯಲ್ಲಿ ರವಿವಾರ ಮತ್ತೆ 21 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತರ ಪೈಕಿ ಹದಿನೆಂಟು ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಉಳಿದಂತೆ ಉತ್ತರ ಪ್ರದೇಶ ಹಾಗೂ ತಮಿಳುನಾಡಿನಿಂದ ಮರಳಿದ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ೫೩ ವರ್ಷದ ವ್ಯಕ್ತಿಯಲ್ಲಿ ಸೋಂಕು […]

ಭಾನುವಾರ ಕೋವಿಡ್-19 ಸೋಂಕಿತರ ಸಂಖ್ಯೆ : ದಕ್ಷಿಣ ಕನ್ನಡ – 17, ಉಡುಪಿ-13

Sunday, June 7th, 2020
corona-virus

ಮಂಗಳೂರು: ರಾಜ್ಯ ಆರೋಗ್ಯ ಬುಲೆಟಿನ್ ಮಾಹಿತಿ ಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 17 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 192ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ 17 ಮಂದಿ ಸೋಂಕಿತರಲ್ಲಿ 16 ಮಂದಿ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಾಗಿದ್ದು ಒಬ್ಬರು ಗೋವಾದಿಂದ ಬಂದವರಾಗಿದ್ದಾರೆ. ಇಂದಿನ ಸೋಂಕಿತರಲ್ಲಿ 15 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರಾಗಿದ್ದಾರೆ. ಇವರೆಲ್ಲರಿಗೂ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 192 ಜನರಿಗೆ ಸೋಂಕು ಧೃಢವಾಗಿದ್ದು, […]

ಕೊರೊನಾ ಪಾಸಿಟಿವ್‌‌ ಪ್ರಕರಣ : ದ.ಕ ಜಿಲ್ಲೆ24, ಉಡುಪಿ ಜಿಲ್ಲೆ 121

Saturday, June 6th, 2020
corona virus

ಮಂಗಳೂರು, : ದ.ಕ ಜಿಲ್ಲೆಯಲ್ಲಿ ಜೂನ್ 6ರಂದು ಶನಿವಾರ 24 ಕೊರೊನಾ ಪ್ರಕರಣ ಪತ್ತೆಯಾಗಿದ್ದರೆ, ಉಡುಪಿಯಲ್ಲಿ 121 ಕೊರೊನಾ ಪಾಸಿಟಿವ್‌‌ ಪ್ರಕರಣ ವರದಿಯಾಗಿದೆ. ದಕ್ಷಿಣ ಕನ್ನಡದಲ್ಲಿ ಶನಿವಾರ ಹದಿನೈದು ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ 65 ಸಕ್ರಿಯ ಪ್ರಕರಣಗಳಿದ್ದು, 103 ಜನರು ಚೇತರಿಸಿಕೊಂಡಿದ್ದಾರೆ ಮತ್ತು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಏಳು ಸಾವುಗಳು ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 121 ಪಾಸಿಟಿವ್ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. 16 ಮಕ್ಕಳು ಸೇರಿದಂತೆ ಎಪ್ಪತ್ತೆಂಟು ಪುರುಷರು ಮತ್ತು […]

ಸರಕಾರಿ ಸಾಲಮನ್ನಾದ ಹೆಚ್ಚಿನ ಲಾಭ ಪಡೆದವರು ದಕ್ಷಿಣ ಕನ್ನಡ, ಉಡುಪಿ ಮೀನುಗಾರರು

Sunday, May 31st, 2020
fishing

ಭಟ್ಕಳ : ರಾಜ್ಯ ಸರಕಾರ ಘೋಷಣೆ ಮಾಡಿದ್ದ ಮೀನುಗಾರರ ಸಾಲಮನ್ನಾದ ಲಾಭವನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯ ಮೀನುಗಾರರೇ ಹೆಚ್ಚಿನ ಪ್ರಮಾಣದಲ್ಲಿ ಪಡೆದಿದ್ದಾರೆ ಎಂದು ಇಲ್ಲಿಯ ಮೀನುಗಾರರ ಮುಖಂಡ ವಸಂತ ಖಾರ್ವಿ ಹೇಳಿದ್ದಾರೆ. ಅವರು ನಗರದ ಮಾವಿನಕುರ್ವೆ ಬಂದರಿನ ಬೋಟ್‌ ಯೂನಿಯನ್‌ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕೋವಿಡ್‌ ಹಿನ್ನೆಲೆಯಲ್ಲಿ ಸರಕಾರ ಎಲ್ಲ ಸಮುದಾಯದವರಿಗೂ ನೆರವು ನೀಡುತ್ತಿದೆ. ಆದರೆ ಮೀನುಗಾರರನ್ನು ಕಡೆಗಣಿಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ. ಮೀನು ಕ್ಷಾಮ ಕಳೆದೆರಡು ವರ್ಷಗಳಿಂದ ಮೀನುಗಾರರನ್ನು […]

ಮಹಾರಾಷ್ಟ್ರದಿಂದ ಹಿಂತಿರುಗಿದ ಉಡುಪಿಯ ಮೂವರಲ್ಲಿ ಕೊರೋನಾ ದೃಢ

Tuesday, May 26th, 2020
corona-virus19

ಉಡುಪಿ : ಮಹಾರಾಷ್ಟ್ರದಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ಮೂರು ಮಂದಿಗೆ ಕೊರೊನಾ ದೃಢಪಟ್ಟಿದ್ದು ಇವರಲ್ಲಿ 9 ವರ್ಷದ ಹೆಣ್ಣು ಮಗು, 30 ವರ್ಷದ ಮಹಿಳೆ ಹಾಗೂ 27 ವರ್ಷದ ಯುವಕ ಒಳಗೊಂಡಿದ್ದರೆ, ಚಿಕಿತ್ಸೆಗಾಗಿ ಇವರನ್ನು ನಿಗದಿತ ಕೊವೀಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಧ್ಯಾಹ್ನದ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 111 ಸೋಂಕು ಪ್ರಕರಣ ಪತ್ತೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆ ಆಯಾ ದಿನದ ಸೋಂಕು ಪೀಡಿತರ ವಿವರಗಳನ್ನು ದಿನಕ್ಕೆ  ಎರಡು ಆವೃತ್ತಿಯಲ್ಲಿ ಬಿಡುಗಡೆ ಮಾಡುತ್ತಿದ್ದು, […]

ಉಡುಪಿಯಲ್ಲಿ ಮೂವರು ಮಕ್ಕಳು ಸೇರಿ 18 ಮಂದಿಗೆ ಕೊರೊನಾ ಸೋಂಕು

Sunday, May 24th, 2020
Udupi-Corona

ಉಡುಪಿ : ಜಿಲ್ಲೆಯಲ್ಲಿ ಮೂವರು ಮಕ್ಕಳು ಸೇರಿ ಮತ್ತೆ 18 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದ್ದು ಈ ಪೈಕಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಈ 18 ಕೊರೊನಾ ಪ್ರಕರಣಗಳ ಪೈಕಿ 7 ಮಂದಿ ಮಹಿಳೆಯರಾಗಿದ್ದು ಮೂವರು ಮಕ್ಕಳಾಗಿದ್ದಾರೆ. ಇಬ್ಬರಿಗೆ ಕಂಟೈನ್‌ಮೆಂಟ್‌ ಝೋನ್‌ ಸಂಪರ್ಕದಿಂದ ಕೊರೊನಾ ದೃಢಪಟ್ಟಿದ್ದು ಮತ್ತಿಬ್ಬರಿಗೆ ಕೊರೊನಾ ಹರಡಿದ ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ. ಇನ್ನುಳಿದ 14 ಮಂದಿಯೂ ಕೂಡಾ ಮಹಾರಾಷ್ಟ್ರದಿಂದ ವಾಪಾಸ್‌ ಆದವರಾಗಿದ್ದಾರೆ.