ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ
Friday, April 21st, 2023
ಬೆಂಗಳೂರು : ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಶಗಳು ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟ […]