Blog Archive

ಕೊರೊನಾ ಸೋಂಕು ಜುಲೈ 25 : ದಕ್ಷಿಣ ಕನ್ನಡ ಜಿಲ್ಲೆ 218, ಉಡುಪಿ ಜಿಲ್ಲೆ182, ಕಾಸರಗೋಡು ಜಿಲ್ಲೆ 105

Saturday, July 25th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 218 ಮಂದಿಯಲ್ಲಿ ಕೊರೊನಾ ಸೋಂಕು  ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ. 46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 87 ಐಎಲ್‌ಐ ಪ್ರಕರಣ, 15 ಎಸ್‌ಎಆರ್‌ಐ ಪ್ರಕರಣ ಹಾಗೂ 70 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಶನಿವಾರ  140 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2127 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 2370 ಮಂದಿ […]

ಕೊರೋನ ಪ್ರಕರಣ ಜುಲೈ 22 : ದಕ್ಷಿಣ ಕನ್ನಡ ಜಿಲ್ಲೆ162, ಉಡುಪಿ ಜಿಲ್ಲೆ281, ಕಾಸರಗೋಡು ಜಿಲ್ಲೆ101

Wednesday, July 22nd, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 162 ಹೊಸ ಕೊರೋನ ಪ್ರಕರಣಗಳು ಪತ್ತೆಯಾಗಿದ್ದು ಜಿಲ್ಲೆಯ ಒಟ್ಟು ಕೊರೋನ ಸೋಂಕು ಪೀಡಿತರ ಸಂಖ್ಯೆ 3,996ಕ್ಕೆ ಏರಿದೆ. ಕೋವಿಡ್‌ಗೆ ಮತ್ತೆ ಐವರು ಬಲಿಯಾಗಿದ್ದು, ಸಾವಿನ ಸಂಖ್ಯೆ 92ಕ್ಕೆ ಏರಿದೆ. ಜಿಲ್ಲೆಯಲ್ಲಿ ಬುಧವಾರ  ಪತ್ತೆಯಾದ ಪ್ರಕರಣಗಳಲ್ಲಿ ಶೀತ ಲಕ್ಷಣ ಹೊಂದಿರುವವರ ಸಂಖ್ಯೆಯೇ ಅಧಿಕ ಮಟ್ಟದಲ್ಲಿದೆ. ಶೀತ-70, ಸೋಂಕಿನ ಮೂಲ ಪತ್ತೆಯಾಗದ 60, ತೀವ್ರ ಉಸಿರಾಟ-18, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 13, ವಿದೇಶದಿಂದ ಆಗಮಿಸಿದ್ದ ಓರ್ವನಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲರನ್ನೂ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ […]

ಕೊರೊನಾ ಸೋಂಕು ಜುಲೈ 21 : ದಕ್ಷಿಣ ಕನ್ನಡ ಜಿಲ್ಲೆ 149, ಉಡುಪಿ ಜಿಲ್ಲೆ 84

Wednesday, July 22nd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಜುಲೈ 21ರಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ. ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 87 ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 84 […]

ಕಿನ್ನರಿ ಧಾರಾವಾಹಿಯ ನಟಿ ಭೂಮಿ ಈಗ ಬೈದೂಂರಿನಲ್ಲಿ ಗೊಬ್ಬರ ಹೊರುತ್ತಿದ್ದಾರೆ

Tuesday, July 21st, 2020
bhoomi shetty

ಉಡುಪಿ: ಕಲರ್ಸ್ ಕನ್ನಡದ ಕಿನ್ನರಿಯಲ್ಲಿ ನಾಯಕಿ ನಟಿಯಾಗಿದ್ದ ಬೈಂದೂರಿನ  ಭೂಮಿ ಶೆಟ್ಟಿ ಈಗ ಭತ್ತದ ಗದ್ದೆಗೆ ಗೊಬ್ಬರ ಹೊತ್ತು, ನಾಟಿ ಮಾಡಿ ಬೆಳಗ್ಗಿನಿಂದ ಸಂಜೆವರೆಗೂ ಬೆವರು ಸುರಿಸಿ ದುಡಿಯುತ್ತಿದ್ದಾರೆ. ಕಿರುತೆರೆಯಲ್ಲಿ ಖ್ಯಾತಿಗಳಿಸಿ, ಬಿಗ್ಬಾಸ್‌ ಸೀಸನ್‌ 7ರಲ್ಲಿ ಫೈನಲ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಕರಾವಳಿ ಹುಡುಗಿ ಭೂಮಿ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆ ಬೈದೂಂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯವರು. ವಿದ್ಯಾಭ್ಯಾಸ ನಟನೆ ಅಂತ ಬೆಂಗಳೂರಿನಲ್ಲೇ  ಇದ್ದ ಅವರಿಗೆ ಸಾಧ್ಯ ಈ ಪರಿಸ್ಥಿತಿ ಬಂದಿದೆ.  ಕರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಸಹವಾಸವೇ ಬೇಡ ಎಂದು […]

ಕೊರೋನ ಸೋಂಕು ಗುರುವಾರ : ದಕ್ಷಿಣ ಕನ್ನಡ ಜಿಲ್ಲೆ 238, ಉಡುಪಿ ಜಿಲ್ಲೆ 109, ಕಾಸರಗೋಡು ಜಿಲ್ಲೆ 18

Thursday, July 16th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಾಖಲೆಯ 238 ಕೊರೋನ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,738ಕ್ಕೆ ಏರಿಕೆಯಾಗಿದೆ. ಗುರುವಾರ ಹೊಸದಾಗಿ ಸೋಂಕು ಪತ್ತೆಯಾದ 238 ಮಂದಿಯಲ್ಲಿ ಕೇವಲ 23 ಮಂದಿಗೆ ಮಾತ್ರ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಬಂದಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯ 17 ಪ್ರಕರಣಗಳು ಇವೆ. ವಿದೇಶದಿಂದ ಬಂದ 19 ಮಂದಿಗೆ ಮಾತ್ರ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ […]

ಕೊರೋನಾ ಸೋಂಕಿತರು : ದಕ್ಷಿಣ ಕನ್ನಡ ಜಿಲ್ಲೆ 73, ಉಡುಪಿ ಜಿಲ್ಲೆ 53, ಕಾಸರಗೋಡು ಜಿಲ್ಲೆ 74

Thursday, July 16th, 2020
corona virus

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬುಧವಾರ 73 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  ಜಿಲ್ಲೆಯಲ್ಲಿ 104 ಮಂದಿಯ ಬುಧವಾರದಂದು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2525 ಕ್ಕೆ ಏರಿಕೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 1089 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1379 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ 22740 ಮಂದಿಯ ವರದಿ ನೆಗೆಟಿವ್ ಬಂದಿದೆ. ದಕ್ಷಿಣ ಕನ್ನಡದಲ್ಲಿ  ಬುಧವಾರದಂದು ನಾಲ್ವರು ಸೋಂಕಿನಿಂದಾಗಿ […]

ಉಡುಪಿ ಜಿಲ್ಲೆ14 ದಿನ ಸಂಪೂರ್ಣ ಲಾಕ್ ಡೌನ್, ಗಡಿಗಳು ಬಂದ್, ಬಸ್ಸು ಸಂಚಾರ ಇಲ್ಲ

Wednesday, July 15th, 2020
udupi DC

ಉಡುಪಿ  : ರಾಜ್ಯ ಸರಕಾರ ಕೋವಿಡ್ 19  ನಿಯಂತ್ರಣಕ್ಕಾಗಿ ಲಾಕ್ ಡೌನ್ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿ ರುವ ಹಿನ್ನಲೆ . ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ವಿಧಿಸದಿರುವ ತೀರ್ಮಾನವನ್ನು ಮಂಗಳವಾರ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಜುಲೈ 15ರ ರಾತ್ರಿ 8 ಗಂಟೆಯಿಂದ ಜುಲೈ 29ರವರೆಗೆ ಅಂದರೆ 14 ದಿನಗಳ ಕಾಲ ಜಿಲ್ಲೆಯ ಗಡಿಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡುವ ನಿರ್ಧಾರಕ್ಕೆ ಸಭೆ ಬಂದಿತ್ತು. ಮತ್ತು ಈ 14 […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ 91, ಉಡುಪಿ ಜಿಲ್ಲೆ 72

Wednesday, July 15th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 91 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ. ಮಂಗಳವಾರ 47 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆ ಮೂಲಕ 985 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 1414 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 22677 ಮಂದಿಯ ವರದಿ ನೆಗೆಟಿವ್ ಆಗಿದೆ. ಪ್ರಾಥಮಿಕ ಸಂಪರ್ಕದಿಂದ 20 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 29 ಮಂದಿಯಲ್ಲಿ ಐಎಲ್‌‌ಐ ಪ್ರಕರಣ ಪತ್ತೆಯಾಗಿದೆ. 5 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ […]

ಕೊರೋನಾ ಸೋಂಕು : ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 196, ಉಡುಪಿ ಜಿಲ್ಲೆ 41

Sunday, July 12th, 2020
corona positive

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ  196 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸದ್ಯ ಸೋಂಕಿತರ ಸಂಖ್ಯೆ 2230ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1308 ಸಕ್ರೀಯ ಪ್ರಕರಣಗಳಿವೆ. ಮತ್ತೆ 94 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಆ ಮೂಲಕ 876 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸೋಂಕಿಗೆ 5 ಮಂದಿ ಮೃತಪಟ್ಟಿದ್ದು, ಮೃತರಲ್ಲಿ ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ‌ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ , ಮಂಗಳೂರಿನ […]

ಕೊರೋನ ಪಾಸಿಟಿವ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ186 , ಉಡುಪಿ ಜಿಲ್ಲೆಯಲ್ಲಿ 90

Saturday, July 11th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಮತ್ತೆ ಮೂವರು ಕೊರೋನ ಸೋಂಕಿಗೆ ಬಲಿಯಾಗಿದ್ದು, ಒಂದೇ ದಿನ ಬರೋಬ್ಬರಿ 186 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕೀತರ ಸಂಖ್ಯೆ 2034ಕ್ಕೆ ಏರಿಕೆಯಾಗಿದೆ. ಇದರಲ್ಲಿ 10 ಪ್ರಕರಣಗಳು ಹೊರ ಜಿಲ್ಲೆಯವು. ಸೋಂಕಿತರ ಸಂಪರ್ಕದಲ್ಲಿದ್ದ 37, ಐಎಲ್‌ಐ 64, ಎಸ್‌ಎಆರ್‌ಐ 17, ಕತರ್ ಮತ್ತು ದುಬೈನಿಂದ ಬಂದಿದ್ದ 10 ಮಂದಿ, 56 ಮಂದಿಗೆ ಸೋಂಕು ಯಾರಿಂದ ತಗುಲಿದೆ ಎನ್ನುವುದೇ ತಿಳಿದಿಲ್ಲ. ಇಬ್ಬರು ಬೆಂಗಳೂರಿನಿಂದ […]