ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿ ಮೃತ್ಯು

Sunday, January 10th, 2021
Ruthik

ಕಾಸರಗೋಡು : ಮನೆಯಲ್ಲಿ ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿದ ಪರಿಣಾಮ ಮೃತಪಟ್ಟ ದಾರುಣ ಘಟನೆ ಉದುಮದಲ್ಲಿ ನಡೆದಿದೆ. ಉದುಮ ಏರೋಲ್‌ನ ದಾಸ್ ಮತ್ತು ರೇಣುಕಾ ದಂಪತಿ ಪುತ್ರ ಋತಿಕ್ ಮೃತಪಟ್ಟ ಮಗು. ಬಾಟಲಿಯಲ್ಲಿದ್ದ ಸೀಮೆಎಣ್ಣೆಯನ್ನು ಸೇವಿಸಿದ್ದು , ಮಗು ಅಸ್ವಸ್ಥವಾಗಿ ಬಿದ್ದಿದ್ದು ಸಮೀಪ ಸೀಮೆ ಎಣ್ಣೆ ತುಂಬಿದ್ದ ಬಾಟಲಿ ಪತ್ತೆಯಾಗಿತ್ತು. ತಕ್ಷಣ ಮಗುವನ್ನು ಉದುಮದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ಜಿಲ್ಲೆಯಲ್ಲಿ ನಾಲ್ವರು ಹಾಲಿ ಶಾಸಕರ ಜಯಭೇರಿ

Thursday, May 19th, 2016
Kerala Count

ಕಾಸರಗೋಡು: ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಎಲ್‌ಡಿಎಫ್ ಮತ್ತು ಎರಡು ಕ್ಷೇತ್ರಗಳಲ್ಲಿ ಯುಡಿಎಫ್ ಗೆಲುವು ಸಾಧಿಸಿದೆ. ಗೆಲುವು ಸಾಧಿಸಿದ ನಾಲ್ವರು ಹಾಲಿ ಶಾಸಕರಾಗಿದ್ದಾರೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಪಿ.ಬಿ.ಅಬ್ದುಲ್ ರಝಾಕ್, ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಎನ್.ಎ.ನೆಲ್ಲಿಕುನ್ನು, ಉದುಮ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಕೆ.ಕುಂಞಿರಾಮನ್, ಕಾಂಞಂಗಾಡ್ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಇ.ಚಂದ್ರಶೇಖರನ್, ತೃಕ್ಕರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಎಂ.ರಾಜಗೋಪಾಲನ್ ಗೆಲುವು ಸಾಧಿಸಿದ್ದಾರೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ […]

‘ಕಲಾ ಕೊಂಕಣಿ’ ಚಿತ್ರಕಲಾ ಶಿಬಿರ ಸಮಾರೋಪ

Thursday, October 15th, 2015
Kala konkani

ಮಂಗಳೂರು : ಕೊಂಕಣಿ ಅಕಾಡೆಮಿ ಭಾಷೆಗಾಗಿ ಕೆಲಸ ಮಾಡುವಾಗ ಚಿತ್ರಕಲೆ ಕೂಡಾ ಭಾಷಾ ಬೆಳವಣಿಗೆಯ ಅಂಗ ಎಂದು ಭಾವಿಸಿ ಇಂಥ ಒಂದು ಶಿಬಿರವನ್ನು ಆಯೋಜಿಸಿದ್ದಾರೆ. ಕೊಂಕಣಿ ಕಲೆಯ ವಿವಿಧ ಚಿತ್ರಗಳನ್ನು ಕ್ಯಾಲೆಂಡರ್ ಮೂಲಕ ಮನೆಮನೆಗೆ ತಲುಪಿಸುವ, ಈ ಮೂಲಕ ಚಿತ್ರಕಲೆಯನ್ನು ಪ್ರಚುರಪಡಿಸುವ ಈ ಕೆಲಸ ಸ್ತುತ್ಯರ್ಹ ಎಂದು ಹಿರಿಯ ಕಲಾವಿದ ಗಣೇಶ ಸೋಮಯಾಜಿ ಅಬಿಪ್ರಾಯಪಟ್ಟರು. ಅವರು ಶಕ್ತಿನಗರದ ಕಲಾಂಗಣದಲ್ಲಿ ಬುಧವಾರ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ‘ಕಲಾ ಕೊಂಕಣಿ’ ಎಂಬ ಚಿತ್ರಕಲಾ ಶಿಬಿರದ ಸಮಾರೋಪ […]