ಮಂಗಳೂರು ವಿ.ವಿ: ಉದ್ಯೋಗಮೇಳ ಮುಂದೂಡಿಕೆ

Monday, November 15th, 2021
job fair

ಮಂಗಳೂರು ವಿಶ್ವವಿದ್ಯಾನಿಲಯದ, ವಿಶ್ವವಿದ್ಯಾನಿಲಯ ತರಬೇತಿ ಮತ್ತು ಉದ್ಯೋಗ ಕೋಶ, ಹಾಗೂ ಉದ್ಯೋಗ ಮಾಹಿತಿ ಮಾರ್ಗದರ್ಶನ ಕೇಂದ್ರದ ವತಿಯಿಂದ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನವೆಂಬರ್‌ 16  ಮತ್ತು 17 (ಮಂಗಳವಾರ ಮತ್ತು ಬುಧವಾರ) ನಡೆಯಲಿದ್ದ ಉದ್ಯೋಗಮೇಳವನ್ನು ಚುನಾವಣಾ ನೀತಿಸಂಹಿತೆಯಿಂದಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು, ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆಳ್ವಾಸ್ ಪ್ರಗತಿ ವರದಾನವಾಗಿದೆ : ಸಂಸದ ನಳಿನ್

Friday, July 6th, 2018
Alvas pragathi

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್‍ನಲ್ಲಿ ಎರಡು ದಿನಗಳು ನಡೆಯುವ 10ನೇ ಆವೃತ್ತಿಯ ಅಳ್ವಾಸ್ ಪ್ರಗತಿ- ಬೃಹತ್ ಉದ್ಯೋಗ ಮೇಳಕ್ಕೆ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಆಳ್ವಾಸ್ ಪ್ರಗತಿಗೆ ಚಾಲನೆ ನೀಡಿ ಮಾತನಾಡಿ, ತಮ್ಮ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆಯಲು ನಾಡಿನ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆಳ್ವಾಸ್ ಪ್ರಗತಿ ವರದಾನವಾಗಿದೆ. ಪಾರದರ್ಶಕವಾಗಿ ನಡೆಯುವ ಉದ್ಯೋಗಮೇಳದಿಂದಾಗಿ ಯುವಜನರು ಉದ್ಯೋಗ ಪಡೆಯಲು ಬೇಕಾದ ಆತ್ಮವಿಶ್ವಾಸವನ್ನು […]

ನಾಳೆಯಿಂದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗಮೇಳ

Thursday, July 5th, 2018
ನಾಳೆಯಿಂದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗಮೇಳ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಜುಲೈ 6 ಹಾಗೂ 7ರಂದು `ಆಳ್ವಾಸ್ ಪ್ರಗತಿ 2018′-10ನೇ ವರ್ಷದ ಬೃಹತ್ ಉದ್ಯೋಗ ಮೇಳವು ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆಯಲಿದೆ. 600 ಹೆಸರಾಂತ ಕಂಪೆನಿಗಳು ಭಾಗವಹಿಸಲಿದ್ದು, 2 ಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ. ಉಚಿತ ನೋಂದಾವಣೆ, ಅತ್ಯಂತ ಪಾರದರ್ಶಕತೆ, ವ್ಯವಸ್ಥಿತ ರೀತಿಯಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 12 ಸಾವಿರ ಅಭ್ಯರ್ಥಿಗಳು ಪ್ರಗತಿಯಲ್ಲಿ ಭಾಗಹಿಸುವ ನಿರೀಕ್ಷೆಯಿದೆ ಎಂದು ಆಳ್ವಾಸ್ ಶಿಕ್ಷಣ […]