ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

Tuesday, August 24th, 2021
Vaccination

ಬೆಂಗಳೂರು : ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ರಾಜಭವನದಲ್ಲಿ ಚಾಲನೆ ನೀಡಿದರು. ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿಗಳು, ಸಾರ್ವಜನಿಕರು ಮೈ ಮರೆಯಬಾರದು, ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು. ವ್ಯಾಕ್ಸಿನ್ ಹಾಕಿಸಿಕೊಳ್ಳುವುದು […]

ನ.2 ರಂದು ಉಪರಾಷ್ಟ್ರಪತಿ ಮಂಗಳೂರಿಗೆ ಆಗಮನ : ಕೂಳೂರು-ಸುರತ್ಕಲ್ ಹೆದ್ದಾರಿ ತಕ್ಷಣ ದುರಸ್ತಿಗೆ ಜಿಲ್ಲಾಧಿಕಾರಿ ಸೂಚನೆ

Thursday, October 31st, 2019
Sindhu

ಮಂಗಳೂರು : ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ನವೆಂಬರ್ 2ರಂದು ಮಂಗಳೂರಿಗೆ ಆಗಮಿಸುವ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೂಳೂರಿನಿಂದ ಸುರತ್ಕಲ್ ಎನ್‍ಐಟಿಕೆವರೆಗೆ ದುರಸ್ತಿ ಕಾಮಗಾರಿಯನ್ನು ತಕ್ಷಣವೇ ನಡೆಸಲು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಾಕೀತು ಮಾಡಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಪರಾಷ್ಟ್ರಪತಿಗಳ ಆಗಮನ ಪ್ರಯುಕ್ತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ನಿರಂತರ ಮಳೆಯಿಂದ ದುರಸ್ತಿ ಕಾಮಗಾರಿಗೆ ಅಡ್ಡಿಯಾಗಿದೆ. ಆದರೂ, ಉಪರಾಷ್ಟ್ರಪತಿಗಳ ಆಗಮನ […]

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಅವರ ಪುತ್ರ ಧರ್ಮಸ್ಥಳಕ್ಕೆ ಭೇಟಿ

Wednesday, August 7th, 2019
harshavardhana

ಧರ್ಮಸ್ಥಳ : ಭಾರತದ ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡುಅವರ ಮಗ ಹರ್ಷವರ್ಧನ್‌ ಇಂದು (ಮಂಗಳವಾರ) ಧರ್ಮಸ್ಥಳಕ್ಕೆ ಭೇಟಿ ನೀಡಿಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಶ್ರೀ ಮಂಜುನಾಥ ಸ್ವಾಮಿಯದರ್ಶನ ಪಡೆದು ಸುಬ್ರಹ್ಮಣ್ಯಕ್ಕೆಪ್ರಯಾಣ ಬೆಳೆಸಿದರು.

ಎ.29ರಂದು ಉಪರಾಷ್ಟ್ರಪತಿ ಮಂಗಳೂರಿಗೆ

Thursday, April 26th, 2018
vice-president

ಮಂಗಳೂರು: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಎ.29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 9:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಉಪರಾಷ್ಟ್ರಪತಿ, ಬಳಿಕ ಹೆಲಿಕಾಪ್ಟರ್‌ನಲ್ಲಿ ಕಾಸರಗೋಡಿಗೆ ತೆರಳಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಹಿಂದಿರುಗುವ ಅವರು ಅಂದು ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುವರು ಎ.30ರಂದು ಮಧ್ಯಾಹ್ನ 12:20ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿನ್‌ಗೆ ತೆರಳಲಿದ್ದಾರೆ. ಉಪರಾಷ್ಟ್ರಪತಿಯವರ ಪ್ರವಾಸ ನಿಮಿತ್ತ ಬುಧವಾರ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರಿಗಳ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.