ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಸದಸ್ಯ ಪ್ರೇಮಾನಂದ ಶೆಟ್ಟಿ ಹಾಗೂ ಬಿಜೆಪಿ ಸದಸ್ಯೆ ಸುಮಂಗಲಾ ರಾವ್ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 22ನೇ ಅವಧಿಯ ಮೇಯರ್/ಉಪ ಮೇಯರ್ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆ ನಡೆದಿದ್ದು, ಚುನಾವಣಾ ಅಧಿಕಾರಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ಎಂ ಜೆ ರೂಪಾ ಮತ್ತು ಎಂಸಿಸಿ ಉಪ ಆಯುಕ್ತ ಸಂತೋಷ್ ಅವರು ಚುನಾವಣೆ ನಡೆಸಿದರು. ಪ್ರೇಮಾನಂದ ಶೆಟ್ಟಿ ಹಾಗೂ ಸುಮಂಗಲಾ ರಾವ್ ಅವರು ಇಬ್ಬರು ಶಾಸಕರ ಮತ ಸೇರಿ ತಲಾ 46 […]
ಬೆಂಗಳೂರು: ಬಿಬಿಎಂಪಿ ಉಪ ಮಹಾಪೌರರಾದ ರಮಿಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಪ ಮಹಾಪೌರರಾದ ಕೇವಲ ಒಂದೇ ವಾರದಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾರಂಭಿಸಿದ್ದರು. ಈ ದಿನ ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ, ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು […]
ಬೆಂಗಳೂರು: ಬಿಬಿಎಂಪಿಯ ನೂತನ ಮೇಯರ್ ಆಗಿ ಬಸವನಗುಡಿ ವಾರ್ಡ್ ಸದಸ್ಯ ಕಟ್ಟೆ ಸತ್ಯನಾರಾಯಣ, ಉಪಮೇಯರ್ ಆಗಿ ಬ್ಯಾಟರಾಯನಪುರ ವಾರ್ಡ್ ನ ಎನ್. ಇಂದಿರಾ ಅವಿರೋಧವಾಗಿ ಬುಧವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಹಂಚಿಕೊಂಡವು. ಬಿಬಿಎಂಪಿಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಬಸವನಗುಡಿ ವಾರ್ಡ್ ಸದಸ್ಯ ಕಟ್ಟೆ ಸತ್ಯನಾರಾಯಣ್ ಅವರ ಹೆಸರನ್ನು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಘೋಷಿಸಿದರು. ಬೇರೆ ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ ಅವರು ಮೇಯರ್ […]
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 46ನೇ ಮೇಯರ್ ಆಗಿ ಬಿಜೆಪಿಯ ಡಿ. ವೆಂಕಟೇಶಮೂರ್ತಿ ಹಾಗೂ 47ನೇ ಉಪ ಮೇಯರ್ ಆಗಿ ಎಲ್. ಶ್ರೀನಿವಾಸ್ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಾಲಿಕೆಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಔಪಚಾರಿಕವಾಗಿ ನಡೆದ ಚುನಾವಣೆಯಲ್ಲಿ ಮೇಯರ್, ಉಪ ಮೇಯರ್ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪ್ರಾದೇಶಿಕ ಆಯುಕ್ತ ಶಂಭು ದಯಾಳ್ ಮೀನಾ ಪ್ರಕಟಿಸಿದರು. ಮೇಯರ್ ಸ್ಥಾನಕ್ಕೆ ಪೈಪೋಟಿ ಇದ್ದರೂ ಡಿ. ವೆಂಕಟೇಶಮೂರ್ತಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಉಪ ಮೇಯರ್ ಸ್ಥಾನಕ್ಕೆ […]