ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ

Sunday, July 21st, 2024
Mataamrutanandamai

ಮಂಗಳೂರು : ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಹೇಳಿದರು. ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಜುಲೈ21 ರಂದು ಭಾನುವಾರ ಗುರು ಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಮಠದ ಮುಖ್ಯಸ್ಥರಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಆಶೀರ್ವಚನವಿತ್ತು ಇಂದು […]

ಉರ್ವ ಶ್ರೀ ಮಾರಿಯಮ್ಮ ದೇವರ ಪುನರ್ ಪ್ರತಿಷ್ಟೆ ಸಂಭ್ರಮ, ಸೊಬಗು – ವಿಡಿಯೋ

Tuesday, February 13th, 2024
Urwa-Mariyamma

ಮಂಗಳೂರು : ಸುಮಾರು 600 ವರ್ಷಗಳ ಇತಿಹಾಸವಿರುವ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶದ ಸಂಭ್ರಮ ಆರಂಭಗೊಂಡಿದೆ. ಫೆಬ್ರವರಿ 13ರ ಮಂಗಳವಾರ ಬಾಲಾಲಯದಲ್ಲಿದ್ದ ಶ್ರೀ ಮಾರಿಯಮ್ಮ ದೇವರನ್ನು ಗರ್ಭಗುಡಿಗೆ ವಾದ್ಯಘೋಷಗಳೊಂದಿಗೆ ತಂದು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭ ಪ್ರತಿಷ್ಠಾಕಲಶ, ಪಂಚಬ್ರಹ್ಮ ಮಹಾಮಂತ್ರ ಹೋಮ ನಡೆಯಿತು. ಬ್ರಹ್ಮಕಲಶದ ವಿಧಿ ವಿಧಾನಗಳು ಫೆಬ್ರವರಿ 11 ರಿಂದ 15 ರ ವರೆಗೆ ನಡೆದು ಫೆಬ್ರವರಿ 15 ರಂದು ಬೆಳಗ್ಗೆ 8.12 ರ ಸುಮೂಹೂರ್ತದಲ್ಲಿ ಶ್ರೀ ಮಾರಿಯಮ್ಮ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. […]

ಫೆ.11-15: ಉರ್ವ ಶ್ರೀ ಮಾರಿಯಮ್ಮ ನ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ 

Tuesday, January 16th, 2024
Mariyamma-Temple

ಮಂಗಳೂರು: “ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಕೂಡಾ ಪ್ರಾಮುಖ್ಯತೆ ಪಡೆದಿರುತ್ತದೆ. ದ.ಕ. ಜಿಲ್ಲೆ ಮಾತ್ರವಲ್ಲದೇ ನಾಡಿನ ಸಮಸ್ತ ವರ್ಗದ ಭಕ್ತಾಭಿಮಾನಿಗಳು ಉರ್ವ ಶ್ರೀ ಮಾರಿಯಮ್ಮ ದೇವಿಯ ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಮತ್ತು ನಂಬಿಕೆಯನ್ನಿಟ್ಟು, ಶ್ರದ್ಧೆಯಿಂದ ಆರಾಧಿಸಿಕೊಂಡು ಬಂದಿದ್ದಾರೆ. ಇಂತಹ ದಿವ್ಯ ಮಾತೆಯ ಕ್ಷೇತ್ರದಲ್ಲಿ ಫೆ.11ರಿಂದ 15ರವರೆಗೆ ಬ್ರಹ್ಮಕಲಶೋತ್ಸವವು ನಡೆಯಲಿದ್ದು ಈ ಸಂದರ್ಭದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಪ್ರಚಾರ ರಥದ ಸಂಚಾರ, ಹೊರೆಕಾಣಿಕೆ ಮೆರವಣಿಗೆ, ಬೃಹತ್ ನೂತನ ಸಭಾಂಗಣ ಉದ್ಘಾಟನೆ ನಡೆಯಲಿದೆ” […]