ವೇಣೂರು: ಮಹಾಮಸ್ತಕಾಭಿಷೇಕ ಸಮಾಪನ

Saturday, March 2nd, 2024
Dinesh-Gundurao

ಮಂಗಳೂರು : ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ. ಧರ್ಮಪ್ರಭಾವನೆಯೊಂದಿಗೆ ಆರೋಗ್ಯಪೂರ್ಣ ಜೀವನಕ್ಕೆ ನಿರಂತರ ಪ್ರೇರಣೆ, ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಶುಕ್ರವಾರ ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ಭಾರತದಲ್ಲಿ ಜೈನರ ಜೀವನಶೈಲಿ, ವ್ರತ-ನಿಯಮಗಳು, ನಾಯಕತ್ವ ಗುಣ, […]

ಎಸ್ಸೆಸ್ಸೆಲ್ಸಿ ಪರೀಕ್ಷೆ : ಅಚ್ಚುಕಟ್ಟಿನ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

Saturday, July 3rd, 2021
SSlc Exam

ಮಂಗಳೂರು : ಜು. 19 ಹಾಗೂ 22 ರಂದು ನಡೆಯಲಿರುವ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಅವಗಡಗಳು ಎದುರಾಗದಂತೆ ಅಚ್ಚುಕಟ್ಟಿನ ಸಿದ್ಧತೆಗಳನ್ನು ಮಾಡಿಕೊಂಡು ಸುಸೂತ್ರವಾಗಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜು.3ರ ಶನಿವಾರ ಹಮ್ಮಿಕೊಳ್ಳಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ […]

ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ದಿನಸಿ ಕಿಟ್ ನೆರವು

Tuesday, June 15th, 2021
SCDCC-Kit

ಮಂಗಳೂರು : ಕೊರೋನ ಸಂಕಷ್ಟದ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಪತ್ರಕರ್ತರಿಗೆ ದಿನಸಿ ಕಿಟ್ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಮಂಗಳವಾರ ನಗರದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ಪತ್ರಕರ್ತರಿಗೆ ಕಿಟ್ ವಿತರಿಸಿದರು. ಲಾಕ್ ಡೌನ್ ನ್ನು ಶೀಘ್ರ ತೆರವು ಗೊಳಿಸುವ ಆಶಯವನ್ನು ಸರಕಾರ ಹೊಂದಿದೆ ಎಂದರು. ಕೊರೋನ ಸಂಕಷ್ಟದ ಸಂದರ್ಭ ದಲ್ಲಿ ಬ್ಯಾಂಕ್ ತನ್ನ ಗ್ರಾಹಕರು ಅಲ್ಲದೆ ತೊಂದರೆಗೀಡಾದ ಜನರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್  ಹೇಳಿದರು. […]

ಗದಗ ಉಸ್ತುವಾರಿ ಸಚಿವರಿಂದ ನರಗುಂದ ನಗರ ಪ್ರದಕ್ಷಿಣೆ

Monday, May 24th, 2021
CC Pateel

ಗದಗ : ರಾಜ್ಯ ಸಣ್ಣ ಕೈಗಾರಿಕೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಸೋಮವಾರ ನರಗುಂದ ನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಲಾಕ್ ಡೌನ್ ಸಮಯದ ಸ್ಥಿತಿಗತಿಯ ವೀಕ್ಷಣೆ ಮಾಡಿದರು. ಕೊರೋನಾ ಸಮಯದ ಲಾಕ್‌ಡೌನ್ ಕಠಿಣ ಸಂದರ್ಭವಾಗಿದ್ದು, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಜನರ ಜೀವಹಾನಿ ತಪ್ಪಿಸಲು ಲಾಕ್ ಡೌನ್ ಅನಿವಾರ್ಯವಾಗಿದೆ. ಕೋವಿಡ್ ನಿಯಮಾವಳಿಗಳನ್ನು ಸಾರ್ವಜನಿಕರು ಸರಿಯಾಗಿ ಪಾಲಿಸುವ ಮೂಲಕ ಸಹಕರಿಸಿ, ಸುರಕ್ಷಿತವಾಗಿರಿ […]

ಸಲಹೆ, ಸೂಚನೆ ಹಾಗೂ ಚಿಕಿತ್ಸೆಗೆ ಇ-ಸಂಜೀವಿನಿ ಆ್ಯಪ್ ಬಳಸಿ ಜಿಲ್ಲಾ ಉಸ್ತುವಾರಿ ಸಚಿವ – ಕೋಟಾ ಶ್ರೀನಿವಾಸ ಪೂಜಾರಿ

Tuesday, September 29th, 2020
esanjeevini

ಮಂಗಳೂರು :  ಸಾಮಾನ್ಯ ಕೆಮ್ಮು, ನೆಗಡಿ, ಜ್ವರ ಅಲ್ಲದೇ ಇತರ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಕುಳಿತು ಸಾರ್ವಜನಿಕರು ವೈದ್ಯರಿಂದ ಸಲಹೆ ಪಡೆಯಲು ಸರ್ಕಾರ ಇ-ಸಂಜೀವಿನಿ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮಂಗಳೂರು ಜಿಲ್ಲೆಯಲ್ಲಿ 24 ತಜ್ಞ ವೈದ್ಯರು ಈಗಾಗಲೇ ಆ್ಯಪ್ ನಲ್ಲಿ ಸೇವೆ ನೀಡುತ್ತಿದ್ದಾರೆ. ಹೊರೆ ಜಿಲ್ಲೆಯ 100ಕ್ಕೂ ಅಧಿಕ ರೋಗಿಗಳಿಗೆ ವಿಡೀಯೊ ಮೂಲಕ ಸಂಪರ್ಕಿಸಿ ಚಿಕಿತ್ಸೆ ನೀಡಲಾಗಿದೆ. ಈ ಆ್ಯಪ್‍ನಲ್ಲಿ ಕರ್ನಾಟಕದಲ್ಲಿ ಇರುವ ಉತ್ತಮ ವೈದ್ಯ ತಂಡವು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಯಾವುದೇ […]

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕೋವಿಡ್ ಸೋಂಕು ದೃಢ

Tuesday, September 1st, 2020
eswarappa

ಶಿವಮೊಗ್ಗ : ಬಿಜೆಪಿ ಮುಖಂಡ  ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಚಿವರ ಮನೆಯ ಸದಸ್ಯರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವರು ಸೇರಿದಂತೆ ಕುಟುಂಬದ ಸದಸ್ಯರೆಲ್ಲರೂ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಪರೀಕ್ಷಾ ವರದಿಯಲ್ಲಿ ಸಚಿವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಹಿಂದೆ ನಡೆಸಿದ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು ಈ ಬಾರಿ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಸಚಿವರು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ […]

ಕೋವಿಡ್ ರೋಗಿಗಳನ್ನು ವಾಪಾಸ್ ಕಳುಹಿಸುವಂತಿಲ್ಲ: ಖಾಸಗೀ ಆಸ್ಪತ್ರೆಗಳಿಗೆ ಉಸ್ತುವಾರಿ ಸಚಿವರ ನಿರ್ದೇಶನ 

Monday, July 20th, 2020
hospital

ಮಂಗಳೂರು :  ಖಾಸಗೀ ಆಸ್ಪತ್ರೆಗಳು ತಮ್ಮಲ್ಲಿಗೆ ಬಂದ ಕೋರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡದೆ ಯಾವುದೇ ಕಾರಣಕ್ಕೂ ವಾಪಾಸು ಕಳುಹಿಸುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕೋರೋನಾ ರೋಗಿಗಳ ನಿರ್ವಹಣೆ ಕುರಿತು ಸಭೆ ನಡೆಸಿ, ಬಳಿಕ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಹೀಗಿರುವಾಗ, ಕೋವಿಡ್ ಸೋಂಕಿತರು ಅಥವಾ ಇತರೆ ಯಾವುದೇ ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ […]

ಮನೆಯಲ್ಲಿ ಪ್ರತ್ಯೇಕ ಕೊಠಡಿಯೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ ಹೋಂ ಐಸೊಲೇಶನ್‌ಗೆ ಅವಕಾಶ

Friday, July 17th, 2020
Kota Srinivas

ಮಂಗಳೂರು: ಕೋವಿಡ್ 19 ಸೋಂಕಿತರಿಗೆ ದ.ಕ. ಜಿಲ್ಲೆಯ 7 ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಹಾಗೂ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲೂ ಆಯುಷ್ಮಾನ್‌ ಯೋಜನೆಯಡಿ ಉಚಿತ ಚಿಕಿತ್ಸೆ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಪಾಸಿಟಿವ್‌ ಹೊಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದೇ ಇದ್ದವರಿಗೆ ಮನೆಯಲ್ಲೇ ಚಿಕಿತ್ಸೆಗೆ ಸೂಚನೆ ನೀಡಲಾಗಿದೆ. ಆದರೆ, ಮನೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭ ಇತರರಿಗೆ ತೊಂದರೆಯಾಗದಂತೆ ಇರಬೇಕಾಗಿದ್ದು, ಮನೆಯಲ್ಲಿ ಪ್ರತ್ಯೇಕ ಕೊಠಡಿ, ಅದರೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ […]

ನಗರದ ಜನತೆ ಶಾಂತಿ ಕಾಪಾಡುವಂತೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮನವಿ

Friday, December 20th, 2019
Kota-srinivasa-poojary

ಮಂಗಳೂರು : ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನಗರದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಮಹಾನಗರದ ಜನತೆ ಶಾಂತಿಯನ್ನು ಕಾಪಾಡಬೇಕು. ಶಾಂತಿ ಸುವ್ಯವಸ್ಥೆ, ನೆಮ್ಮದಿಯ ಜೀವನಕ್ಕೆ ಅವಕಾಶ ನೀಡಬೇಕು ಎಂದು ಮಹಾನಗರದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಸೌಹಾರ್ದತೆಯಿಂದ ಇದ್ದಂತಹ ಇತಿಹಾಸವಿದೆ. ಆದ್ದರಿಂದ ಶಾಂತಿ ಸುವ್ಯವಸ್ಥೆಯಿಂದ ಜನತೆ ಬಾಳಬೇಕೆಂದರು. ಇನ್ನು ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಹಾಗೂ ಎಚ್ಚರಿಕೆಯ ಹೆಜ್ಜೆ ಇಡುವಂತೆ ಸೂಚನೆ ನೀಡಲಾಗಿದೆ […]

ಆಡಳಿತ ಪಕ್ಷ ಹಾಗೂ ವಿಪಕ್ಷ ಸದಸ್ಯರ ಪರಸ್ಪರ ಪ್ರತಿಭಟನೆ

Tuesday, October 17th, 2017
ivarnadu

ಮಂಗಳೂರು: ಐವರ್ನಾಡು ಗ್ರಾ.ಪಂ. ಪಿಡಿಒ ವರ್ಗಾವಣೆಗೆ ಸೂಚಿಸುವ ಮೂಲಕ ಉಸ್ತುವಾರಿ ಸಚಿವರು ಜಿ.ಪಂ. ಆಡಳಿತದಲ್ಲಿ ಹಸ್ತಕ್ಷೇಪ ನಡೆಸಿದ್ದಾರೆ ಎಂದು ಆಡಳಿತ ಪಕ್ಷ ಬಿಜೆಪಿ ಸದಸ್ಯರು ಹಾಗೂ ಜಿ.ಪಂ. ಅಧ್ಯಕ್ಷರು ಮರಳು ಮಾಫಿಯಾದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಉಲ್ಲೇಖೀಸಿದರು ಎಂದು ಆರೋಪಿಸಿ ವಿಪಕ್ಷ ಕಾಂಗ್ರೆಸ್‌ ಸದಸ್ಯರು ಸದನದ ಬಾವಿಗಿಳಿದು ಪರಸ್ಪರ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ನಡೆದಿದೆ. ಆಡಳಿತ ಪಕ್ಷ ಹಾಗೂ ವಿಪಕ್ಷ ಸದನದಲ್ಲಿ ಏಕಕಾಲದಲ್ಲಿ ಸದನದ ಬಾವಿಗಿಳಿದು ಪರಸ್ಪರ ಪ್ರತಿಭಟನೆ […]