ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಎಂಇಪಿ ಅಭ್ಯರ್ಥಿ!
Wednesday, April 25th, 2018ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಮಂಗಳವಾರ ಉಮೇದುವಾರಿಕೆ ಸಲ್ಲಿಸಬೇಕಿದ್ದ ಅಭ್ಯರ್ಥಿಯೋರ್ವರು ಜೈಲುಪಾಲಾದ ಹಿನ್ನೆಲೆಯಲ್ಲಿ ಜೈಲಿನಲ್ಲಿದ್ದುಕೊಂಡೇ ನಾಮಪತ್ರ ಸಲ್ಲಿಸಿದ ಘಟನೆ ನಡೆದಿದೆ. ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಜೈಲು ಸೇರಿದ ಎಂಇಪಿ (ಮಹಿಳಾ ಎಂಪವರ್ ಪಾರ್ಟಿ) ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿ ನಿವಾಸಿ ಶಮೀರ್ ಯಾನೆ ಜೈಲಿನಲ್ಲಿದ್ದುಕೊಂಡೆ ನಾಮಪತ್ರ ಸಲ್ಲಿಸಿದ್ದಾರೆ. ಶಮೀರ್ 2014ರಲ್ಲಿ ನಡೆದ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಧ್ವಂಸ ಆರೋಪದ ಪ್ರಕರಣ ಹಾಗೂ ಆಸ್ಪತ್ರೆಯಿಂದ ಪರಾರಿಯಾದ ಆರೋಪದ ಪ್ರಕರಣವೊಂದರ ಆರೋಪಿಯಾಗಿದ್ದರು. […]