ಒಕ್ಕಲಿಗರ ಸರ್ವತೋಮುಖ ಏಳಿಗೆಗೆ ನೆರವಾಗಲು ಅಭಿವೃದ್ಧಿ ನಿಗಮ: ಕಂದಾಯ ಸಚಿವ ಆರ್ ಅಶೋಕ
Wednesday, July 21st, 2021ಬೆಂಗಳೂರು : ಕಂದಾಯ ಸಚಿವ ಆರ್ ಅಶೋಕ ಮತ್ತು ಹೊಸದಾಗಿ ನೇಮಕಗೊಂಡ ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಕೃಷ್ಣಪ್ಪ ಅವರು ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ಒಕ್ಕಲಿಗ ಉಪ ಪಂಗಡಗಳ ಕಲ್ಯಾಣಕ್ಕಾಗಿ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ರಚಿಸುವಂತೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದರು. ಅವರ ಸಲಹೆಯನ್ನು ಪರಿಗಣಿಸಿ ಮುಖ್ಯಮಂತ್ರಿಗಳು ನಿಗಮವನ್ನು […]