ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ
Thursday, December 12th, 2024ಮೂಡುಬಿದಿರೆ : `ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ’ ಎಂದು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಭಾವುಕರಾದರು. ಇಲ್ಲಿನ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಬುಧವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಸ್ವೀಕರಿಸಿದ ಅವರು ಮನದುಂಬಿ ಮಾತನಾಡಿದರು. ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ […]