ಯಾರನ್ನು ಬೇಕಾದರೂ ಸೋಲಿಸುವ ಶಕ್ತಿ ನನಗಿದೆ : ಎಚ್.ಡಿ.ದೇವೇಗೌಡರಿಗೆ ಕೆ.ಎನ್.ರಾಜಣ್ಣ ಟಾಂಗ್

Thursday, November 14th, 2019
Rajanna

ತುಮಕೂರು : ಯಾರನ್ನು ಬೇಕಾದರೂ ಸೋಲಿಸಬಹುದು ಎಂಬುದನ್ನು ನಾವು ತೋರಿಸಿಕೊಟ್ಟಿದ್ದೇವೆ ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸೋಲನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಪ್ರಸ್ತಾಪಿಸಿ ಟಾಂಗ್ ನೀಡಿದ್ದಾರೆ. ನಗರದಲ್ಲಿ ನಡೆದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಸುಪರ್ ಸೀಡ್ ಆದ ಸಂದರ್ಭದಲ್ಲಿ ನನ್ನ ಪರವಾಗಿ ನಿಂತು, ಸಾಕಷ್ಟು ಜನ ಪ್ರತಿಭಟಿಸಿದ್ದೀರಿ. ಆಗಲೇ ನನಗೆ ಧೈರ್ಯ ಬಂತು ಜಿಲ್ಲೆಯಾದ್ಯಂತ ನನ್ನೊಂದಿಗೆ ಜನ ಇದ್ದಾರೆ ಎಂದು ತಿಳಿಯಿತು. ಯಾರನ್ನು ಬೇಕಾದರೂ ಸೋಲಿಸುವ ಶಕ್ತಿ ನನಗಿದೆ […]

ಎಚ್.ಡಿ.ದೇವೇಗೌಡ-ಬಿಎಸ್‌ವೈ ಮಾತುಕತೆ ಗೊತ್ತಿಲ್ಲ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Wednesday, November 6th, 2019
siddaramaiahh

ಉಡುಪಿ : ಎಚ್.ಡಿ.ದೇವೇಗೌಡ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವೆ ನಡೆದಿದೆ ಎನ್ನಲಾದ ಫೋನ್ ಸಂಭಾಷಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಮೈತ್ರಿ ಸರ್ಕಾರ ಪತನಕ್ಕೆ ಯಾರು ಕಾರಣರು ಎಂಬುದಕ್ಕೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಬುಧವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳವಾರ ಆಗಮಿಸಿದ ಅವರು ಕಾಪು ಸಾಯಿರಾಧಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಉಪಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಳ್ಳುತ್ತದೆಯೇ ಎಂಬುದು ನನಗೆ ಗೊತ್ತಿಲ್ಲ. ಇವರ […]

ಮೈಸೂರು : ಐಟಿ ದಾಳಿ ವಿರುದ್ಧ ಎಚ್ ಡಿ ದೇವೇಗೌಡ ಗರಂ

Friday, October 11th, 2019
HD-Devegowda

ಮೈಸೂರು : ಬಿಜೆಪಿ ಪಕ್ಷದಲ್ಲಿ ಇರುವವರೆಲ್ಲರೂ ಪ್ರಾಮಾಣಿಕರಾ, ಬಿಜೆಪಿಯಲ್ಲಿ ಇರುವವರೆಲ್ಲಾ ಸತ್ಯವಂತರಾ, ಅವರಲ್ಲಿ ತಪ್ಪು ಮಾಡಿದವರೇ ಇಲ್ವಾ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರಶ್ನಿಸಿದರು. ನಗರದಲ್ಲಿ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಮನೆ ಮೇಲೆ ಐಟಿ ದಾಳಿ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆದಾಯ ತೆರಿಗೆ ಇಲಾಖೆ(ಐಟಿ), ಜಾರಿ ನಿರ್ದೇಶನಾಲಯ(ಇಡಿ), ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಎಲ್ಲಾ ತನಿಖಾ ಸಂಸ್ಥೆಗಳನ್ನು ಮೋದಿ ತಮ್ಮ ಹಿತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಎದುರಾಳಿಗಳ ಅಣಿಯಲ್ಲೂ ತನಿಖಾ ಸಂಸ್ಥೆಗಳ ಬಳಕೆ […]

ಸ್ನೇಹಿತ ಎಂ.ಸಂಜೀವರ ಜೀವನ ಕಥನ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Saturday, November 17th, 2018
h-d-devegouda

ಮಂಗಳೂರು: ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆತ್ಮೀಯ ಅವಿಭಜಿತ ಜನತಾದಳ ಮುಖಂಡರಾಗಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕದ್ರಿ ಎಂ.ಸಂಜೀವ ಅವರ ಜೀವನ ಕಥನವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ರಾತ್ರಿ ಯುನಿಟಿ ಆಸ್ಪತ್ರೆಯ ವಾರ್ಡಿನಲ್ಲಿ ಬಿಡುಗಡೆ ಮಾಡಿದರು. ಮಂಗಳೂರಿಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿದೇವೇಗೌಡ ಅವರು ಆಸ್ಪತ್ರೆಗೆ ದಾಖಲಾಗಿದ್ದ ತಮ್ಮ ರಾಜಕೀಯ ಸ್ನೇಹಿತ ಎಂ.ಸಂಜೀವ ಅವರ ಯೋಗ ಕ್ಷೇಮ ವಿಚಾರಿಸಲು ಆಗಮಿಸಿದರು. […]

ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಹಾಸನ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ: ಎಚ್. ಡಿ. ದೇವೇಗೌಡ

Monday, August 13th, 2018
prajwal-revanna

ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಹಾಸನ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ವಿಚಾರ ತಿಳಿಸಿದರು. ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ನಾನೇ ನಾಲ್ಕೈದು ದಿನ ಹಾಸನದಲ್ಲಿದ್ದು ಕಾರ್ಯಕರ್ತರ ಸಭೆ ಮಾಡುತ್ತೇನೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿ ಇಲ್ಲ. ಕಾಂಗ್ರೆಸ್ನೊಂದಿಗೆ ಮೈತ್ರಿಗೆ ಅಪಾಯವಾಗದಂತೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸುತ್ತೇವೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಾಗದ ರೀತಿ ಸ್ಥಳೀಯ ಸಂಸ್ಥೆ ಚುನಾವಣೆ […]

ಬಿಜೆಪಿ, ಕಾಂಗ್ರೆಸ್‌ಗೆ ಪರ್ಯಾಯ ರಂಗ ಸ್ಥಾಪನೆ, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಇಲ್ಲ

Wednesday, February 26th, 2014
ಬಿಜೆಪಿ, ಕಾಂಗ್ರೆಸ್‌ಗೆ ಪರ್ಯಾಯ ರಂಗ ಸ್ಥಾಪನೆ, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಇಲ್ಲ

ನವದೆಹಲಿ: ಕಾಂಗ್ರೆಸ್-ಬಿಜೆಪಿಯೇತರ,  ಜೆಡಿಎಸ್ ಸೇರಿದಂತೆ ಪ್ರಮುಖ ಹನ್ನೊಂದು ಪಕ್ಷಗಳನ್ನೊಳಗೊಂಡ ತೃತೀಯ ರಂಗ ಮಂಗಳವಾರ ಅಸ್ವಿತ್ವಕ್ಕೆ ಬಂದಿದೆ. ಭ್ರಷ್ಟ ಕಾಂಗ್ರೆಸ್ ಹಾಗೂ ಕೋಮುವಾದಿ ಬಿಜೆಪಿಯನ್ನು ಕೇಂದ್ರದಿಂದ ದೂರ ಇಡಲು ತೃತೀಯ ರಂಗ ರಚಿಸಿರುವುದಾಗಿ ಘೋಷಿಸಿರುವ ನಾಯಕರು, ಒಗ್ಗೂಡಿ ಚುನಾವಣೆ ಎದುರಿಸಲಿದ್ದಾರೆ. ಆದರೆ, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡದಿರಲು ಮಂಗಳವಾರ ತ್ರಿಪುರ ಭವನದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಹುತೇಕ ಪಕ್ಷಗಳು ಬೇರೆ ಬೇರೆ ರಾಜ್ಯಗಳನ್ನು ಪ್ರತಿನಿಧಿಸುವುದರಿಂದ ಆಯಾ ಪ್ರದೇಶದಲ್ಲಿ ಸೀಟು ಹಂಚಿಕೆ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. […]

ಮಗನಿಗೆ ಬಾಯಿಮುಚ್ಚಿ ಕುಳಿತು ಕೊಳ್ಳಲು ಆದೇಶ ನೀಡಿದ : ದೇವೇಗೌಡ

Friday, September 2nd, 2011
Devegowda/ಎಚ್.ಡಿ.ದೇವೇಗೌಡ

ಬೆಂಗಳೂರು : ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಅವರನ್ನು ಟೀಕಿಸುವ ಮೂಲಕ ಸಾರ್ವಜನಿಕವಾಗಿ ಮುಜುಗರಕ್ಕೆ ಗುರಿಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಇನ್ನು ಮುಂದಾದರೂ ಬಾಯಿ ಬಿಡದಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಪಕ್ಷದ ನಾಯಕರು ತಾಕೀತು ಮಾಡಿದ್ದಾರೆ. ಲೋಕಾಯುಕ್ತ ವರದಿಯ ಕುರಿತು ನ್ಯಾಯಾಲಯದಲ್ಲಿಯೇ ಹೋರಾಟ ಮಾಡಬೇಕಾದ ಸಂದರ್ಭದಲ್ಲಿ ಆ ವರದಿಯನ್ನೇ ಸಂಶಯ ಪಡುವ ರೀತಿಯಲ್ಲಿ ಹೆಗ್ಡೆ ಅವರ ಬಗ್ಗೆ ಹೇಳಿಕೆ ನೀಡಬಾರದಿತ್ತು. ಒಮ್ಮೆ ದೇವೇಗೌಡರು ಕ್ಷಮೆಯಾಚಿಸಿದ ನಂತರ ಮತ್ತೊಮ್ಮೆ ಟೀಕೆ ಮಾಡುವಂತಹ ಅಗತ್ಯವಿರಲಿಲ್ಲ ಎಂದು ಸ್ವತಃ ದೇವೇಗೌಡ, […]