ದೇಶಸೇವೆಯನ್ನೇ ಉಸಿರಾಗಿಸಿಕೊಂಡಿರುವ ಸಂಘಟನೆ ಆರ್ ಎಸ್‍ಎಸ್ : ಕಂದಾಯ ಸಚಿವ ಆರ್ ಅಶೋಕ

Wednesday, October 6th, 2021
R Ashoka

ಬೆಂಗಳೂರು  : “ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆರ್ ಎಸ್ ಎಸ್ ಅನ್ನು ಟೀಕಿಸುವುದು ತಪ್ಪು. ಎಲ್ಲವನ್ನು ತಿಳಿದುಕೊಂಡು ಮಾತನಾಡಬೇಕು”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಆರೆಸ್ಸೆಸ್ ಒಂದು ದೇಶಭಕ್ತ ಸಂಘಟನೆ. ಸೇವೆಯೆ ಅದರ ಮೂಲಮಂತ್ರ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಬಂಧಿತರಾದವರು ಶೇಕಡ 80 ರಷ್ಟು ಜನ ಆರ್‍ಎಸ್‍ಎಸ್ ಗೆ ಸೇರಿದವರು. ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡುವಲ್ಲಿ ಮತ್ತು ಪ್ರಜಾಪ್ರಭುತ್ವವನ್ನು […]

ಎಚ್ ಡಿ ಕುಮಾರಸ್ವಾಮಿ ಅವರ ಮಾದ್ಯಮ ಸಲಹೆಗಾರ ಕೆ.ಸಿ. ಸದಾನಂದ ನಿಧನ

Tuesday, July 6th, 2021
KC Sadananda

ಬೆಂಗಳೂರು  : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮಾದ್ಯಮ ಸಲಹೆಗಾರ ಕೆ.ಸಿ. ಸದಾನಂದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೋಮವಾರ ರಾತ್ರಿ ಹೃದಯಾಘಾತವಾದ ತಕ್ಷಣ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲವಾಗಿದ್ದ ಚನ್ನಪಟ್ಟಣದ ಸದಾನಂದ, ಸಂಜೆವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ಎಚ್.ಡಿ.ಕುಮಾರಸ್ವಾಮಿ ಅವರ ನಂಬಿಕಸ್ಥನಾಗಿದ್ದ ಸದಾನಂದ, ಈಗಲೂ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ […]

ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿರುವುದು ದೇಶ ದ್ರೋಹದ ಕೆಲಸ : ಎಚ್.ಡಿ.ಕುಮಾರಸ್ವಾಮಿ

Friday, February 21st, 2020
HDK

ರಾಮನಗರ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ಸಿಎಎ ವಿರುದ್ಧದ ಹೋರಾಟದ ವೇದಿಕೆಯಲ್ಲಿ ಅಮೂಲ್ಯ ಲಿಯೋನ್ ಎಂಬ ಯುವತಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದರು. ರಾಮನಗರದ ಜಾನಪದ ಲೋಕದ ಬಳಿ ಪುತ್ರ ನಿಖಿಲ್ ಮದುವೆಗೆ ನಿಶ್ಚಯವಾಗಿರುವ ಭೂಮಿ ಪೂಜೆಗೆ ಆಗಮಿಸಿದ್ದ ಅವರು ಸುದ್ದಿಗಾರೊಂದಿಗೆ ಮಾತನಾಡಿದರು. ಇಂತಹ ದೇಶದ್ರೋಹಿಗಳ ಬಗ್ಗೆ ಸಂಘಟಕರು ಎಚ್ಚರದಿಂದ ಇರಬೇಕು ಎಂದರು. ಭಾರತೀಯರಾಗಿ ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಆಕೆ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾಳೋ […]

ಸಿದ್ದರಾಮಯ್ಯ ಮತ್ತು ಎಚ್. ಡಿ.ಕುಮಾರಸ್ವಾಮಿ ಪರಸ್ಪರ ಆರೋಪ ಮಾಡುದನ್ನು ನಿಲ್ಲಿಸಬೇಕು : ಬಸವರಾಜ ಹೊರಟ್ಟಿ

Tuesday, September 24th, 2019
kumarswamy

ಹುಬ್ಬಳ್ಳಿ : ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್. ಡಿ.ಕುಮಾರಸ್ವಾಮಿ ಅವರು ಪರಸ್ಪರ ಆರೋಪ ಮಾಡುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ತಿಂಗಳ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರಾದ ಇಬ್ಬರು ನಾಯಕರು ಇದೀಗ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಆರೋಪಗಳನ್ನು ಮಾಡುತ್ತಿರುವುದು ಎರಡೂ ಪಕ್ಷಗಳಿಗೂ ಒಳ್ಳೆಯದಲ್ಲ ಎಂಬುದನ್ನು […]

ಅಲ್ಪಸಂಖ್ಯಾತರ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ

Wednesday, December 19th, 2018
kumarswamy

ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿಗೆ 500 ಕೋಟಿ ರೂ. ಹೆಚ್ಚುವರಿ ಅನುದಾನ ಈ ಬಾರಿಯ ಬಜೆಟ್‌ನಲ್ಲಿ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುವರ್ಣಸೌಧದ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನದಲ್ಲಿ ಕಡಿತ ಮಾಡಲಾಗಿದೆ ಎಂಬ ಆರೋಪ ನಿರಾಧಾರ. ಹಿಂದಿನ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮ ಜಾರಿಗೊಳಿಸಿದ್ದು ಎಲ್ಲ ಕಾರ್ಯಕ್ರಮವನ್ನು ಮೈತ್ರಿ ಸರ್ಕಾರದಲ್ಲಿ ಮುಂದುವರಿಸಲಾಗಿದೆ ಎಂದು ಹೇಳಿದರು. ಹಿಂದಿನ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರಿಸುವುದರ ಜತೆಗೆ […]

ಹೋಲಿ ರೋಸರಿ ಕೆಥಡ್ರಲ್‌ನ 450ನೇ ವರ್ಷದ ಸಂಭ್ರಮಾಚರಣೆ ಉದ್ಘಾಟಿಸಲಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

Tuesday, November 13th, 2018
Rosario

ಮಂಗಳೂರು : ದಿ ಹೋಲಿ ರೋಸರಿ ಕೆಥಡ್ರಲ್, ಬೋಳಾರ ಇದರ 450ನೇ ವರ್ಷದ ಸಂಭ್ರಮಾಚರಣೆಯನ್ನು ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ, ನವೆಂಬರ್ 18, ರವಿವಾರದಂದು ಉದ್ಘಾಟಿಸಲಿದ್ದಾರೆ. ಈ ಸಮಾರಂಭ ನಗರದ ರೊಸಾರಿಯೋ ಕೆಥಡ್ರಲ್ ಗ್ರೌಂಡ್‌ನಲ್ಲಿ ಸಂಜೆ 6.30ಕ್ಕೆ ನಡೆಯಲಿದೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ವಂದನೀಯ ರೆ. ಡಾ. ಪೀಟರ್ ಪೌಲ್ ಸಲ್ದಾನ ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಬಿಷಪ್ ಅತಿ ವಂದನೀಯ ರೆ. ಡಾ. ಅಲೋಶಿಯಸ್ ಪೌಲ್ ಡಿ’ಸೋಜ, […]

ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ 2 ರೂಪಾಯಿ ಕಡಿತ: ಕುಮಾರಸ್ವಾಮಿ

Monday, September 17th, 2018
kumarswamy

ಕಲಬುರಗಿ: ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್ಗೆ ಎರಡು ರೂಪಾಯಿ ಕಡಿತಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕಲಬುರಗಿಯಲ್ಲಿ ಏರ್ಪಡಿಸಲಾಗಿದ್ದ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ ಸೆಸ್ ಕಡಿತದ ನಿರ್ಧಾರ ಪ್ರಕಟಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನ ಮುಖಿಯಾಗಿರುವುದರಿಂದ ಜನತೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ಜನರ ಒಂದಷ್ಟು ಭಾರವನ್ನಾದರೂ ಇಳಿಸಬೇಕೆಂಬ ಉದ್ದೇಶದಿಂದ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ಕನಿಷ್ಟ 2 ರೂಪಾಯಿ ಸೆನ್ ತೆರಿಗೆ ಕಡಿತಗೊಳಿಸಲಾಗುವುದು […]

26 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ

Tuesday, July 31st, 2018
Incharge

ಬೆಂಗಳೂರು :  ಕಾಂಗ್ರೆಸ್ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳ ನಂತರ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಖಾತೆ ಹಂಚಿಕೆ ಬಳಿಕ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಮತ್ತು ಸಚಿವ ಸ್ಥಾನ ಪಡೆದುಕೊಂಡ ಸಚಿವರಲ್ಲೂ ಹಲವರು ಗೊಂದಲ ಹೊಂದಿದ್ದರಿಂದ ಸಿಎಂ ಕುಮಾರಸ್ವಾಮಿ ಅವರು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನು ಮುಂದೂಡುತ್ತಾ ಬಂದಿದ್ದರು. ಇಂದು ಸಂಜೆ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ, ಪಟ್ಟಿ […]

ಪ್ರತಿ ರೈತ ಕುಟುಂಬದ 2 ಲಕ್ಷ ರೂ. ವರೆಗಿನ ಸಾಲಮನ್ನಾ: ಎಚ್ ಡಿ ಕುಮಾರಸ್ವಾಮಿ

Thursday, July 5th, 2018
karnataka-budget

ಬೆಂಗಳೂರು: ಸಮ್ಮಿಶ್ರ ಸರಕಾರದ ಚೊಚ್ಚಲ ಬಜೆಟ್ ನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಇಂದು ಮಂಡಿಸಿದರು. * 2ಲಕ್ಷದ 13 ಸಾವಿರದ 734 ಕೋಟಿ ರೂ. ಬಜೆಟ್ *ಇಸ್ರೇಲ್ ಮಾದರಿ ಕೃಷಿಗೆ 150 ಕೋಟಿ ರೂ. ವಿನಿಯೋಗ. *ಪ್ರತಿ ರೈತ ಕುಟುಂಬದ 2 ಲಕ್ಷ ರೂ. ವರೆಗಿನ ಸಾಲ ಮನ್ನಾ. * ಸಾಲ ಮನ್ನಾ ಮಾಡಲು 34 ಸಾವಿರ ಕೋಟಿ ರೂ. ಮೀಸಲು * ಪೆಟ್ರೋಲ್ ಬೆಲೆ ಲೀಟರ್ ಗೆ 1.14 ರೂ., ಡೀಸೆಲ್ ಬೆಲೆ 1.12 ರೂ. ಹೆಚ್ಚಳ *ವಿದ್ಯುತ್ […]

ಬಿಬಿಎಂಪಿ ವಿಭಜನೆ ಬಗ್ಗೆ ಶೀಘ್ರವೇ ನಿರ್ಧಾರ: ಎಚ್ ಡಿ ಕುಮಾರಸ್ವಾಮಿ

Friday, June 29th, 2018
kumarswamy

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಹಾಗೂ ಆಡಳಿತ ವಿಕೇಂದ್ರಿಕರಣ ಕುರಿತಂತೆ ಬಿಬಿಎಂಪಿ ಪುನರ್ ವಿಂಗಡಣಾ ಸಮಿತಿಯು ತನ್ನ ಅಂತಿಮ‌ ವರದಿ ಸಲ್ಲಿಸಿದೆ. ಈ ವರದಿ ಪರಿಶೀಲಿಸಿ, ಅಧ್ಯಯನ ನಡೆಸಿದ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಬಿಎಂಪಿಯನ್ನು ಐದು ಕಾರ್ಪೋರೇಷನ್ಗಳಾಗಿ ವಿಭಜಿಸಬೇಕೆಂಬ ಕುರಿತು ಬಿ.ಎಸ್. ಪಾಟೀಲ್ ನೇತೃತ್ವದ ತಜ್ಞರ ಸಮಿತಿ ಶಿಫಾರಸು ಅಂತಿಮ ವರದಿ ಸಲ್ಲಿಸಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್ ಪಾಟೀಲ್ […]