Blog Archive

ಅದ್ದೂರಿ ಮದುವೆ ಬಗ್ಗೆ ಟೀಕಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಈ ದುಂದು ವೆಚ್ಚ ಮಾಡಿದ್ದು ಸರಿಯೇ: ಎಚ್.ಡಿ.ಕುಮಾರಸ್ವಾಮಿ

Wednesday, November 23rd, 2016
siddaramaiah

ಬೆಳಗಾವಿ: ಅದ್ದೂರಿ ಮದುವೆ ಎಂಬ ಕಾರಣಕ್ಕೆ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರಿ ಬ್ರಹ್ಮಿಣಿ ಮದುವೆಯಿಂದ ದೂರ ಉಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅದೇ ಕಾರಣಕ್ಕೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿ ರಮೇಶ್ ಜಾರಕಿಹೊಳಿ ಅವರ ಪುತ್ರನ ಮದುವೆ ಸಂಭ್ರಮದಿಂದ ದೂರ ಉಳಿದಿದ್ದರು. ಆದರೆ ಇದೀಗ ಅದ್ದೂರಿ ಮದುವೆ ಹೋಗಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಜಾರಕಿಹೊಳಿ ಮಗನ ಮದುವೆಗೆ ಶುಭಾಶಯ ಹೇಳಲು ಖಾಸಗಿ ಹೆಲಿಕಾಪ್ಟರ್ ಬಳಸುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಸಿಎಂ ಅವರು […]

ನನ್ನ ಹೇಳಿಕೆಯನ್ನು ತಿರುಚಿದ್ದು ಮಾಧ್ಯಮಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

Thursday, April 3rd, 2014
ನನ್ನ ಹೇಳಿಕೆಯನ್ನು ತಿರುಚಿದ್ದು ಮಾಧ್ಯಮಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರೈತ ವಿಠಲ್ ಅರಬಾವಿ ಅವರು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಉಲ್ಟಾ ಹೊಡೆದಿದ್ದಾರೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ, ಇದನ್ನು ಮಾಧ್ಯಮಗಳು ತಿರುಚಿವೆ ಎಂದು ಹೇಳಿದ್ದಾರೆ. ರೈತ ವಿಠಲ್ ಅರಬಾವಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾನು ಎಲ್ಲೂ ಹೇಳಿಲ್ಲ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ. ಸದ್ಯ ವಿಠಲ್ ಅರಬಾವಿ ಆತ್ಮಹತ್ಯೆ […]

ಈ ಬಾರಿ ತೃತೀಯ ರಂಗ ಸರ್ಕಾರ ಅಸ್ತಿತ್ವಕ್ಕೆ: ಅಜೀಂ

Thursday, February 6th, 2014
HD-Deve-Gowda

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ತೃತೀಯ ರಂಗದ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಸರ್ಕಾರ ರಚನೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಹೇಳಿದರು. ತೃತೀಯ ರಂಗ ರಚನೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈ ತಿಂಗಳ ಮೂರನೇ ವಾರ ಬೆಂಗಳೂರಿನಲ್ಲಿ 14 ಪ್ರಾದೇಶಿಕ ಪಕ್ಷಗಳ ಸಭೆ ಕರೆದಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ದೇವೇಗೌಡರು ವಹಿಸುವರು. ತೃತೀಯ ರಂಗಕ್ಕೆ ಈಬಾರಿ ಚುನಾವಣೆಯಲ್ಲಿ 240 […]

ಉದ್ಯಮಿ ಎ.ಸದಾನಂದ ಶೆಟ್ಟಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ

Tuesday, October 30th, 2012
JDS Townhall

ಮಂಗಳೂರು: ಸೋಮವಾರ ಮಂಗಳೂರು ಪುರಭವನದಲ್ಲಿ ನಡೆದ ಜೆಡಿಎಸ್ ನ ಸಮಾನ ಮನಸ್ಕರ ಸಮಾವೇಶದಲ್ಲಿ ಭಾಗವಹಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದರು. ಜೆಡಿಎಸ್ ಕರಾವಳಿ ಜಿಲ್ಲೆಗಳಲ್ಲಿ ತನ್ನ ಖಾತೆ ತೆರೆಯಲು ಶ್ರಮಿಸುತಿದ್ದು ಇತ್ತೀಚೆಗಷ್ಟೇ ಬಿಜೆಪಿ ಪಕ್ಷದಲ್ಲಿದ್ದ ನಾಗರಾಜ ಶೆಟ್ಟಿಯವರು ಪಕ್ಷವನ್ನು ತೊರೆದು ಜೆ.ಡಿ.ಎಸ್ ಸೇರಿದ್ದರು. ಇವರ ನೇತೃತ್ವದಲ್ಲಿ ಕರಾವಳಿಯ ಇನ್ನಷ್ಟು ನಾಯಕರು ಈ ಸಮಾರಂಭದಲ್ಲಿ ಜೆ.ಡಿ.ಎಸ್ […]

ರಾಜ್ಯದ ಶ್ರೀಮಂತ ಮಹಿಳೆ ಅನಿತಾ ಕುಮಾರಸ್ವಾಮಿ

Tuesday, October 4th, 2011
Anita Kumaraswamy

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿಯವರು 2010-11ನೇ ಸಾಲಿಗೆ ಆಸ್ತಿ ವಿವರಗಳ ಅಫಡವಿಟ್ ಸಲ್ಲಿಸಿರುವ ಪ್ರಕಾರ ಒಟ್ಟು ಅಧಿಕೃತ ಆಸ್ತಿ ಮೊತ್ತ 160 ಕೋಟಿ ರುಪಾಯಿ. ಶಾಸಕಿಯಾಗಿ ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರ ದಾಖಲೆಗಳನ್ನು ಪರಿಶೀಲಿಸಿದಾಗ ಈ ಅಂಶ ದೃಢಪಟ್ಟಿದೆ. ಇಲ್ಲಿ ಒಂದು ಅಂಶ ಸ್ಪಷ್ಟಪಡಿಸುವುದಾದರೆ ಬಳ್ಳಾರಿಯ ಜನಾರ್ಧನ ರೆಡ್ಡಿ ಅಧಿಕೃತ ಆಸ್ತಿ ಲೋಕಾಯಯುಕ್ತ ದಾಖಲೆಗಳ ಪ್ರಕಾರ ಕೇವಲ 144 ಕೋಟಿ ರು. 2009-10ರಲ್ಲಿ ಶಾಸಕಿ ಅನಿತಾರ ಆಸ್ತಿ ಮೊತ್ತ 51.22 ಕೋಟಿ […]

ಮಗನಿಗೆ ಬಾಯಿಮುಚ್ಚಿ ಕುಳಿತು ಕೊಳ್ಳಲು ಆದೇಶ ನೀಡಿದ : ದೇವೇಗೌಡ

Friday, September 2nd, 2011
Devegowda/ಎಚ್.ಡಿ.ದೇವೇಗೌಡ

ಬೆಂಗಳೂರು : ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಅವರನ್ನು ಟೀಕಿಸುವ ಮೂಲಕ ಸಾರ್ವಜನಿಕವಾಗಿ ಮುಜುಗರಕ್ಕೆ ಗುರಿಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಇನ್ನು ಮುಂದಾದರೂ ಬಾಯಿ ಬಿಡದಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಪಕ್ಷದ ನಾಯಕರು ತಾಕೀತು ಮಾಡಿದ್ದಾರೆ. ಲೋಕಾಯುಕ್ತ ವರದಿಯ ಕುರಿತು ನ್ಯಾಯಾಲಯದಲ್ಲಿಯೇ ಹೋರಾಟ ಮಾಡಬೇಕಾದ ಸಂದರ್ಭದಲ್ಲಿ ಆ ವರದಿಯನ್ನೇ ಸಂಶಯ ಪಡುವ ರೀತಿಯಲ್ಲಿ ಹೆಗ್ಡೆ ಅವರ ಬಗ್ಗೆ ಹೇಳಿಕೆ ನೀಡಬಾರದಿತ್ತು. ಒಮ್ಮೆ ದೇವೇಗೌಡರು ಕ್ಷಮೆಯಾಚಿಸಿದ ನಂತರ ಮತ್ತೊಮ್ಮೆ ಟೀಕೆ ಮಾಡುವಂತಹ ಅಗತ್ಯವಿರಲಿಲ್ಲ ಎಂದು ಸ್ವತಃ ದೇವೇಗೌಡ, […]