ತುಳುನಾಡಿಗೆ ಮಾರಕವಾದ ಅವೈಜ್ಙಾನಿಕ ಬಜೆಟ್‌

Friday, March 4th, 2022
shailesh RJ

ಬೆಳ್ತಂಗಡಿ : ತುಳುನಾಡಿನ ಜೀವನಾಡಿಗೆ ಮಾರಕವಾದ ಅವೈಜ್ಙಾನಿಕ ಎತ್ತಿನಹೊಳೆ ಯೋಜನೆಗೆ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ 3000 ಕೋಟಿ ರೂಪಾಯಿ ಮೀಸಲಿರಿಸಿದ್ದು ಖಂಡನೀಯ. ಈ ಮೂಲಕ ತುಳುನಾಡನ್ನು ಬರಡು ಭೂಮಿಯಾಗಿಸುವ ವ್ಯವಸ್ಥಿತ ಷಡ್ಯಂತ್ರವನ್ನು ಮುಂದುವರಿಸಿದ್ದು ತುಳುವರಿಗೆ ಎಚ್ಚರಿಕೆ ಗಂಟೆಯಾಗಿದೆ. ತುಳುವರ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದಲ್ಲಿ ನುಸುಳಿ ನಾಟಕವಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಮತ್ತು ಶಾಸಕರು ಈ ಕೂಡಲೇ ತಮ್ಮ ಶಾಸಕ/ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ಬದ್ಧತೆಯನ್ನು ನಾಡಿನ ಜನಕ್ಕೆ ತೋರಿಸಬೇಕು. ನಿರಂತರವಾಗಿ ತುಳುನಾಡಿನ ನೆಲ, […]

ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆ ಪ್ರಗತಿ ಪರಿಶೀಲನೆ

Tuesday, June 29th, 2021
Badre Meldande

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ […]

ಕರಾವಳಿಯಲ್ಲಿ ಎತ್ತಿನಹೊಳೆ ನೀರಾವರಿ ಯೋಜನೆ : ಸುಪ್ರೀಂ ಕೋರ್ಟ್‌ಗೆ ಮನವಿ

Thursday, September 5th, 2019
yethina-hole

ಮಂಗಳೂರು : ಕರಾವಳಿಯ ಜೀವನಾಡಿ ನೇತ್ರಾವತಿಗೆ ಆತಂಕ ತರಿಸುವ ಎತ್ತಿನಹೊಳೆ ನೀರಾವರಿ ಯೋಜನೆಯ ವಿರುದ್ಧ ಕಾನೂನು ಹೋರಾಟ ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಗುರುವಾರ ವಿಚಾರಣೆ ಆರಂಭವಾಗಲಿದೆ. ಎತ್ತಿನಹೊಳೆ ಯೋಜನೆಯ ವಿರುದ್ಧ ಪರಿಸರವಾದಿಗಳು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಹಸಿರು ನ್ಯಾಯ ಪೀಠ (ಎನ್‌ಜಿಟಿ)ವು ಮೇಯಲ್ಲಿ ವಜಾಗೊಳಿಸಿ ತೀರ್ಪು ನೀಡಿತ್ತು. ಎನ್‌ಜಿಟಿ ಪೀಠದ ತೀರ್ಪು ಪ್ರಶ್ನಿಸಿ ಪರಿಸರ ಹೋರಾಟಗಾರ ಕೆ.ಎನ್‌. ಸೋಮಶೇಖರ್‌ ಒಂದು ತಿಂಗಳ ಹಿಂದೆಯಷ್ಟೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ […]

ಅವೈಜ್ಞಾನಿಕವಾಗಿರುವ ಎತ್ತಿನಹೊಳೆಯಂತಹ ಅಸಂಬದ್ಧ ಯೋಜನೆಗಳನ್ನು ಕೈಬಿಡಿ: ಟಿ.ವಿ.ರಾಮಚಂದ್ರ

Friday, December 30th, 2016
Lobo

ಮಂಗಳೂರು: ಅವೈಜ್ಞಾನಿಕವಾಗಿರುವ ಎತ್ತಿನಹೊಳೆಯಂತಹ ಅಸಂಬದ್ಧ ಯೋಜನೆಗಳನ್ನು ಕೈಬಿಡಿ. ಇಂತಹ ಅಸಂಬದ್ಧ ಯೋಜನೆಗೆ ಸಮರ್ಪಕ ಉತ್ತರ ಸಿಗುವವರೆಗೂ ಪ್ರಶ್ನಿಸುತ್ತಲೇ ಇರುತ್ತೇನೆ. ಉತ್ತರ ನೀಡದಿದ್ದರೆ ಬೀದಿಗಿಳಿದು ಹೋರಾಡಲೂ ಸಿದ್ಧ ಎಂದು ಪರಿಸರ ವಿಜ್ಞಾನಿ, ಅಂತಾರಾಷ್ಟ್ರೀಯ ದ್ವೈವಾರ್ಷಿಕ ಲೇಕ್- ಸಮ್ಮೇಳನ ಅಧ್ಯಕ್ಷ ಡಾ. ಟಿ.ವಿ.ರಾಮಚಂದ್ರ ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಆಳ್ವಾಸ್ ಕಾಲೇಜಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ದ್ವೈವಾರ್ಷಿಕ ಲೇಕ್- ಸಮ್ಮೇಳನ- 2016 ರ ಯುವ ಲೇಕ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಾರ್ವಜನಿಕರೆಲ್ಲರಿಗೂ ಪ್ರಶ್ನಿಸುವ ಅಧಿಕಾರ ಇದೆ. ಸಾರ್ವಜನಿಕರ ಹಣವನ್ನು ಸಂಬಳವಾಗಿ ಪಡೆಯುತ್ತಿರುವ […]

ಎತ್ತಿನಹೊಳೆ ವಿರೋಧಿಗಳ ಪರ ಬ್ಯಾಟಿಂಗ್!

Saturday, March 8th, 2014
U.T.-Kadar

ಮಂಗಳೂರು: ಎತ್ತಿನಹೊಳೆ ಯೋಜನೆ ಪರವಾಗಿ ಮಾತನಾಡಿಲ್ಲ. ನೆಲ, ಜಲ ಉಳಿವಿಗಾಗಿ ಹೋರಾಟ ನಡೆಸಿದ ದಕ್ಷಿಣ ಕನ್ನಡದ ಜನರನ್ನು ಸಂಘಟನೆಗಳನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ‘ಎತ್ತಿನಹೊಳೆ ಯೋಜನೆ ಪರವಾಗಿದ್ದಾರೆ’ ಎಂಬ ಆರೋಪಗಳನ್ನು ಅಲ್ಲಗಳೆದ ಯು.ಟಿ.ಖಾದರ್ ದಕ್ಷಿಣ ಕನ್ನಡ ಜಿಲ್ಲೆ ಎತ್ತಿನಹೊಳೆ  ಹೋರಾಟ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕೋಲಾರದಲ್ಲಿ ಈ ಕುರಿತು ತಾವು ಯಾವುದೇ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಅಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಹತ್ತು ನಿಮಿಷಗಳ ವೀಡಿಯೋ […]

ಸಮಗ್ರ ಅಧ್ಯಯನ ನಡೆಸದೆ ‘ಎತ್ತಿನಹೊಳೆ’ ಅನುಷ್ಠಾನ ಸರಿಯಲ್ಲ: ಯಡಿಯೂರಪ್ಪ

Wednesday, March 5th, 2014
Yeddyurappa

ಪುತ್ತೂರು: ಎತ್ತಿನಹೊಳೆ ಯೋಜನೆ ಸಾಧಕ- ಬಾಧಕಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸದೆ ಯೋಜನೆ ಅನುಷ್ಠಾನಗೊಳಿಸುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಎತ್ತಿನಹೊಳೆ ಯೋಜನೆಯನ್ನು ಸಮಗ್ರ ರಾಜ್ಯವನ್ನು ಕಣ್ಮುಂದೆ ಇಟ್ಟುಕೊಂಡು ರೂಪಿಸಬೇಕಾಗಿದೆ. ಅನುಷ್ಠಾನದ ಬಗ್ಗೆ ಕರಾವಳಿ ಹಾಗೂ ಬಯಲುಸೀಮೆ ಜಿಲ್ಲೆಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಚಿಂತನೆ ನಡೆಸುವುದು ಅಗತ್ಯವಾಗಿದೆ ಎಂದ ಅವರು ಬೆಂಗಳೂರು, ಚಿಕ್ಕಬಳ್ಳಾಪುರ, […]

ರೈತರಿಂದ ಮುತ್ತಿಗೆ : ಸಚಿವ ಯುಟಿ ಖಾದರ್

Tuesday, March 4th, 2014
U.T.-Khadar

ಕೋಲಾರ: ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್‌ ಎತ್ತಿನ ಹೊಳೆ ಯೋಜನೆ ವಿರುದ್ಧ ಮಾತನಾಡಿದ ಅವರಿಗೆ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು  ಮುತ್ತಿಗೆ ಹಾಕಿದ ಘಟನೆ ಮಂಗಳವಾರ ನಡೆದಿದೆ. ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾ  ಪಂಚಾಯತ್‌ ಕಛೇರಿಗೆ ಆಗಮಿಸುತ್ತಿದ್ದ ಸಚಿವರ ವಿರುದ್ಧ  ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು  ಕಪ್ಪು ಬಾವುಟ  ಪ್ರದರ್ಶಿಸಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಖಾದರ್‌ ಅವರು ಎತ್ತಿನಹೊಳೆ ಯೋಜನೆಜಾರಿಗೆ ನನ್ನ ಸಹಮತವಿದೆ,ಯೋಜನೆ […]

ವಿವಾದದ ನಡುವೆ ಬಿತ್ತು ಎತ್ತಿನಹೊಳೆಗೆ ಅಡಿಗಲ್ಲು

Tuesday, March 4th, 2014
Yettinaholege

ಮಂಗಳೂರು: ಬಂದ್ ಹಾಗೂ ಪ್ರತಿಭಟನೆ ನಡುವೆಯೇ ವಿವಾದಿತ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಎತ್ತಿನಹೊಳೆ ಯೋಜನೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಬಂದ್ ಆಚರಿಸಿದರೆ, ಚಿಕ್ಕಬಳ್ಳಾಪುರದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕಪ್ಪು ಪಟ್ಟಿ ಹಾಗೂ ಖಾಲಿ ಪೈಪುಗಳನ್ನು ಪ್ರದರ್ಶಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಬಿ.ಬಿ. ರಸ್ತೆಯಲ್ಲಿರುವ (ಆದಿಚುಂಚನಗಿರಿ ಶಾಖಾ […]