ಎತ್ತಿನಹೊಳೆ ಯೋಜನೆ : ರೈತರಿಗೆ ಶೀಘ್ರದಲ್ಲೇ ಭೂ ಪರಿಹಾರ; ರಮೇಶ್‌ ಜಾರಕಿಹೊಳಿ ಭರವಸೆ

Saturday, March 14th, 2020
ramesh

ಬೆಂಗಳೂರು : ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕಾಗಿ ಭೂ ಸ್ವಾಧೀನ ಮಾಡಿಕೊಂಡಿರುವ ರೈತರಿಗೆ ಶೀಘ್ರದಲ್ಲೇ ಭೂ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಭರವಸೆ ನೀಡಿದರು. ಅರಸೀಕೆರೆಯ ಜೆಡಿಎಸ್‌ ಶಾಸಕ ಕೆ.ಎನ್‌.ಶಿವಲಿಂಗೇಗೌಡ ಅವರು ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿಉತ್ತರ ನೀಡಿದ ಸಚಿವರು ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕಾಗಿ ರೈತರಿಂದ ಭೂ ಸ್ವಾಧೀನಪಡಿಸಿಕೊಂಡಿದ್ದು ಅವರಿಗೆ ಪರಿಹಾರ ನೀಡುವುದು ಬಾಕಿ ಇದೆ. ಈ ಸಂಬಂಧ ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು. […]

ಎತ್ತಿನಹೊಳೆ ಯೋಜನೆ ಮೊದಲ ಹಂತ ಪ್ರಾರಂಭಿಸಲು ಅನುಮತಿ: ಎನ್ ಜಿಟಿ

Saturday, October 7th, 2017
NGT

ಮಂಗಳೂರು: ರಾಜ್ಯದ ಮಹತ್ವದ ಕುಡಿಯುವ ನೀರಿನ ಯೋಜನೆ, ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ) ಷರತ್ತುಬದ್ದ ಅನುಮತಿ ನೀಡಿದೆ. ಎತ್ತಿನಹೊಳೆ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಕೆಎನ್ ಸೋಮಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಎನ್ ಜಿಟಿ ತಿರಸ್ಕರಿಸಿದೆ. 3 ಅರ್ಜಿಗಳಲ್ಲಿ ಒಂದು ಅರ್ಜಿ ವಿಚಾರಣೆ ನಡೆಸಿದ ಎನ್ ಜಿಟಿ ಒಂದು ಅರ್ಜಿಯ ಕುರಿತ ತೀರ್ಪನ್ನು ಮಾತ್ರವೇ ಪ್ರಕಟಿಸಿದೆ. ಷರತ್ತುಗಳನ್ನು ಇನ್ನೂ 2 ಅರ್ಜಿ ವಿಚಾರಣೆ ಬಾಕಿ ಇದ್ದು ಅಂತಿಮ […]

ಜೆಡಿಎಸ್ ಅಧಿಕಾರಕ್ಕೆ ಬಂದರೆ ಎತ್ತಿನಹೊಳೆ ಯೋಜನೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು: ಎಚ್.ಡಿ.ಕೆ

Monday, February 13th, 2017
Kumaraswamy

ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಸದಾನಂದಗೌಡರೇ ಜಾರಿ ಮಾಡಿದ್ದರು. ಆಗ ವಿರೋಧಿಸದ ನಳೀನ್‌ ಕುಮಾರ್‌ ಇಂದು ವಿರೋಧಿಸುತ್ತಿದ್ದಾರೆ. ಅವರಿಗೆ ನೈತಿಕತೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಬಗ್ಗೆ ಕಲಾಪದಲ್ಲಿ ಈಗಾಗಲೇ ಮಾತನಾಡಿದ್ದೇನೆ. ಯೋಜನೆಗೆ ಸಾಕಾಗುವಷ್ಟು ನೀರಿಲ್ಲ ಎಂದೂ ತಿಳಿಸಿದ್ದೇನೆ. ಆದರೆ ಎತ್ತಿನಹೊಳೆ ಯೋಜನೆಗೆ ಅಡ್ಡಗಾಲು ಹಾಕಿದ್ದೇನೆ ಎಂದು ನನ್ನ ಮೇಲೆಯೇ ಗೂಬೆ ಕೂರಿಸುತ್ತಿದ್ದಾರೆ ಎಂದರು. ದ.ಕ. ಜಿಲ್ಲೆಯಲ್ಲಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ನೈತಿಕತೆಯಿಲ್ಲ. ಬಿಜೆಪಿ […]

ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದವರನ್ನು ಬಂಧಿಸಿದ ಪೊಲೀಸರು

Friday, February 10th, 2017
netravati protest

ಮಂಗಳೂರು: ಎತ್ತಿನಹೊಳೆ ಯೋಜನೆ ವಿರೋಧಿಸಿ ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿಯ ನೇತೃತ್ವದಲ್ಲಿ  ಜಿಲ್ಲಾಧಿಕಾರಿ ಕಚೇರಿ ಎದುರು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ವಬೆಳಗ್ಗೆ ಆರಂಭವಾಗಿ ಮಧ್ಯಾಹ್ನ ಮುಗಿಯಿತು. ಸರ್ವಧರ್ಮದ ಧರ್ಮಗುರುಗಳ ನೇತೃತ್ವದಲ್ಲಿ ಪುರಭವನದ ಮುಂಭಾಗದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು, ಮೆರವಣಿಗೆ ಮೂಲಕ ಬಂದು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡರು. ಮಧ್ಯಾಹ್ನವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಳಿತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, […]

ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಜನವರಿ 26ರಿಂದ ತೀವ್ರ ಹೋರಾಟದ ಎಚ್ಚರಿಕೆ

Thursday, January 19th, 2017
NRSS

ಮಂಗಳೂರು: ಎತ್ತಿನಹೊಳೆ ಯೋಜನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆ ನಡೆಸಿದ ಮಾತುಕತೆ ಯಾವುದೇ ರೀತಿ ಫಲಪ್ರದವಾಗಿಲ್ಲ. ಈ ನಿಟ್ಟಿನಲ್ಲಿ ಜನವರಿ 26ರಿಂದ ತೀವ್ರ ಹೋರಾಟ ನಡೆಸುವುದಾಗಿ ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ಬಿಗಡಾಯಿಸಲು ರಾಜಕಾರಣಿಗಳು ಹಾಗೂ ಅಧಿಕಾರಿಗಳೇ ಕಾರಣ. ಜಿಲ್ಲಾ ಉಸ್ತುವಾರಿ ಸಚಿವರು ಮನಸ್ಸು ಮಾಡಿದರೆ ಒಂದು ದಿನದಲ್ಲಿ ಸಮಸ್ಯೆ ಬಗೆಹರಿಸಬಹುದು. ಆದರೆ, ಅವರು ಮುತುವರ್ಜಿ ವಹಿಸುತ್ತಿಲ್ಲ ಎಂದು ದೂರಿದರು. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ […]

ಎತ್ತಿನಹೊಳೆ ಯೋಜನೆ ಕೆಲವರ ಜೇಬು ತುಂಬಿಸಲು ರೂಪಿಸಿರುವ ಯೋಜನೆ: ಸಿ.ಟಿ.ರವಿ

Thursday, January 19th, 2017
C T Ravi

ಮಂಗಳೂರು: ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಒಂದು ಹನಿ ನೀರು ಕೂಡಾ ಸಿಗುವುದಿಲ್ಲ. ಬಿಳಿ ಆನೆ ಆಗಿರುವ ಎತ್ತಿನಹೊಳೆ ಕೆಲವರ ಜೇಬು ತುಂಬಿಸಲು ರೂಪಿಸಿರುವ ಯೋಜನೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ. ಆರೋಪಿಸಿದರು. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಯೋಜನೆಗೆ 2,300 ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆಗೆ ಪರಿಸರ ಇಲಾಖೆ ಅನುಮತಿ ಇಲ್ಲ. ಸಮರ್ಪಕ ಯೋಜನಾ ವರದಿ ಇಲ್ಲ. ಒಟ್ಟು ಯೋಜನೆಯಲ್ಲಿಯೇ ಗೊಂದಲ ಇದೆ. ಈ ಹಿನ್ನೆಲೆಯಲ್ಲಿ ಎತ್ತಿನಹೊಳೆ […]

ಬೇಜವಾಬ್ದಾರಿ ಹೇಳಿಕೆ ನೀಡುವವರು ಮೊದಲು ಅಧಿಕಾರ ಬಿಟ್ಟು ಹೋಗಲಿ: ಸಿಎಂಗೆ ಪೂಜಾರಿ ತರಾಟೆ

Friday, January 6th, 2017
janardhana-poojary

ಮಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಇತ್ತೀಚೆಗೆ ನಿಧನರಾದ ಸಚಿವ ಮಹಾದೇವ ಪ್ರಸಾದ್ ಅವರ ಪತ್ನಿ ಅಥವಾ ಮಗನಿಗೆ ಟಿಕೆಟ್ ನೀಡಬೇಕು. ಅನುಕಂಪದ ಮತವಾದರೂ ಬರುತ್ತವೆ. ಅದನ್ನು ಬಿಟ್ಟು ಅವರ ಕ್ಷೇತ್ರದಲ್ಲಿ ಬೇರೆ ಯಾರನ್ನಾದರೂ ನಿಲ್ಲಿಸಿದರೆ ಕಾಂಗ್ರೆಸ್‌ಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರತಿಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತೂ ಬೆಲೆ ಕೊಡುವುದಿಲ್ಲ. ಆದರೆ, ಈ ಮಾತಿನ ವಿರುದ್ಧ ಸಿಎಂ ನಡೆದರೆ […]

ರೈ ಅವರಿಂದ ಏಕವಚನದಲ್ಲಿ ನಿಂದಿಸುವಷ್ಟು ಕೀಳುಮಟ್ಟದ ರಾಜಕಾರಣ ನಡೆಯುತ್ತಿದೆ: ವಿಜಯಕುಮಾರ್ ಶೆಟ್ಟಿ

Thursday, December 29th, 2016
Yettinahole horata sdamithi

ಮಂಗಳೂರು: ದ.ಕ. ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಅವರು ಬಾಲ ಬಿಚ್ಚಿದರೆ ಅವರ ಅನೇಕ ಸಂಗತಿಗಳನ್ನು ಬಯಲು ಮಾಡುತ್ತೇನೆ ಎಂದು ಮಾಜಿ ಶಾಸಕ, ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದ ಮುಖಂಡ ವಿಜಯಕುಮಾರ್ ಶೆಟ್ಟಿ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈ ಅವರಿಂದ ಏಕವಚನದಲ್ಲಿ ನಿಂದಿಸುವಷ್ಟು ಕೀಳುಮಟ್ಟದ ರಾಜಕಾರಣ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆ ಬಗ್ಗೆ ಸಿಎಂ ಸಮ್ಮಖದಲ್ಲಿ ನಡೆದ ಸಭೆಯು ಇಸ್ಪೀಟು ಕ್ಲಬ್ ನಡೆಸುವ ರೀತಿಯಲ್ಲಿ ನಡೆಸಲಾಗಿದೆ. ಮುಖ್ಯಮಂತ್ರಿಗಳು ನಮ್ಮನ್ನು ಮಂಕು ಮಾಡುವ ರೀತಿಯಲ್ಲಿ ವ್ಯವಸ್ಥಿತವಾಗಿ […]

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೇಂದ್ರ ಪರಿಸರ ಸಚಿವಾಲಯಕ್ಕೆ ಆದೇಶ ನೀಡಿದ ಪ್ರಧಾನ ಹಸಿರು ಪೀಠ,

Saturday, December 17th, 2016
National green tribunal

ಮಂಗಳೂರು: ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿ ಕಾಮಗಾರಿ ಪ್ರದೇಶದ ಸಾಕ್ಷಾತ್ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ದೆಹಲಿಯ ಪ್ರಧಾನ ಹಸಿರು ಪೀಠ, ಕೇಂದ್ರ ಪರಿಸರ ಸಚಿವಾಲಯಕ್ಕೆ ಆದೇಶ ನೀಡಿದೆ. ಎತ್ತಿನಹೊಳೆ ಯೋಜನೆ ಕಾಮಗಾರಿ ವಿರುದ್ಧ ಬೆಂಗಳೂರಿನ ಕೆ.ಎನ್.ಸೋಮಶೇಖರ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹಸಿರು ಪೀಠ, ಮರಗಳನ್ನು ಕಡಿದ ಬಗ್ಗೆ ಅರ್ಜಿದಾರರ ಜೊತೆಗೆ ಜಂಟಿ ಸಮೀಕ್ಷೆಗೆ ತಾಕೀತು ಮಾಡಿದೆ. ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ಅವರ ಪೀಠ ಹೊರಡಿಸಿದ ಆದೇಶದಲ್ಲಿ, 2017 ರ ಜ.2 ಮತ್ತು 3ರಂದು ಎತ್ತಿನಹೊಳೆ […]

ಸಿಎಂಗೆ ನೈತಿಕತೆ ಎಂಬುದು ಇದ್ದಲ್ಲಿ ಅಬಕಾರಿ ಸಚಿವ ಹೆಚ್.ವೈ.ಮೇಟಿ ವಿರುದ್ಧ ತಕ್ಷಣ ರಾಜೀನಾಮೆ ಪಡೆಯಬೇಕು: ಜನಾರ್ದನ ಪೂಜಾರಿ

Tuesday, December 13th, 2016
Janardana poojay

ಮಂಗಳೂರು: ಅಬಕಾರಿ ಸಚಿವ ಹೆಚ್.ವೈ.ಮೇಟಿ ವಿರುದ್ಧದ ರಾಸಲೀಲೆ ಆರೋಪದಿಂದ ಕಾಂಗ್ರೆಸ್ ಪಕ್ಷಕ್ಕೆ ಕಳಂಕವಾಗಿದೆ. ಸಿಎಂಗೆ ನೈತಿಕತೆ ಎಂಬುದು ಇದ್ದಲ್ಲಿ ತಕ್ಷಣ ಅವರಿಂದ ರಾಜೀನಾಮೆ ಪಡೆಯಬೇಕು. ರಾಜೀನಾಮೆ ನೀಡಲು ಒಪ್ಪದಿದ್ದಲ್ಲಿ ಪಕ್ಷದಿಂದಲೇ ಕಿತ್ತುಹಾಕಬೇಕೆಂದು ಕಾಂಗ್ರೆಸ್‌‌ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ ಕಳಂಕ ತರುವವರನ್ನು ಪಕ್ಷದಿಂದ ಉಚ್ಛಾಟಿಸಲಿಕ್ಕಾಗದಿದ್ದಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿರಲು ಅನರ್ಹರು ಎಂದು ವ್ಯಂಗ್ಯವಾಡಿದ್ದಾರೆ. ಅಧಿಕಾರಿ ಭೀಮಾನಾಯ್ಕ್‌‌ ಮೇಲೆ ಕ್ರಮ ಕೈಗೊಳ್ಳದ ಸಿಎಂ, ಈಗಾಗಲೇ ತಮ್ಮ ಜ್ಞಾನವನ್ನು ಅಡವಿಟ್ಟಿದ್ದಾರೆ ಎಂದ ಅವರು, ಮಂತ್ರಿಗಳ […]