ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಡಿ. 10 ರಿಂದ ರಥಯಾತ್ರೆ

Monday, December 5th, 2016
Belthangady

ಬೆಳ್ತಂಗಡಿ: ರಾಜ್ಯ ಸರ್ಕಾರದ (ಎತ್ತಿನ ಹೊಳೆ)ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಡಿ. 10 ರಿಂದ ನಡೆಯುವ ರಥಯಾತ್ರೆಯು ಮೊದಲ ಹಂತವಾಗಿದೆ. ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ಹಂತವಾಗಿ ಕ್ರಾಂತಿಕಾರಕ ಹೆಜ್ಜೆಯನ್ನು ಇಡಲಿದ್ದೇವೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಂಸದ, ರಥಯಾತ್ರೆಯ ಗೌರವಾಧ್ಯಕ್ಷ ನಳೀನ್ ಕುಮಾರ್ ಕಟೀಲು ಎಚ್ಚರಿಕೆ ನೀಡಿದ್ದಾರೆ. ಅವರು ನಿನ್ನೆ ಬೆಳ್ತಂಗಡಿ ಸನಿಹ ಲಾಯಿಲ ಗ್ರಾ.ಪಂ. ಸಭಾಭವನದಲ್ಲಿ ಬೆಳ್ತಂಗಡಿಯಲ್ಲಿ ರಥಯಾತ್ರೆ ಹಾದುಹೋಗುವ ಬಗ್ಗೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಭಾವನಾತ್ಮಕ ಜನಜಾಗೃತಿಗಾಗಿ […]

ನೇತ್ರಾವತಿ ರಕ್ಷಣೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್

Thursday, May 19th, 2016
Bundh

ಮಂಗಳೂರು: ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಎತ್ತಿನ ಹೊಳೆ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಮೇ 19ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೆದಿದ್ದ ಸ್ವಯಂ ಘೋಷಿತ ಬಂದ್‌ ಯಶಸ್ವೀಯಾಗಿದೆ. ಬಂದ್‌ ಶಾಂತಿಯುತವಾಗಿದ್ದು ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು, ಸರ್ಕಾರಿ ಬಸ್‌ಗಳು ಸಂಚರಿಸಿಲ್ಲ. ಕೆಲವೆಡೆ ಹೊರರಾಜ್ಯದಿಂದ ಬಂದ ಪ್ರಯಾಣಿಕರು ಪರದಾಡಬೇಕಾಗಿ ಬಂತು . ಮೆಡಿಕಲ್‌ ಶಾಪ್‌ ಮಾತ್ರ ಬೆಳಗ್ಗಿನಿಂದಲೇ ತೆರೆದಿತ್ತು. ಅಂಬುಲೆನ್ಸ್‌ಗಳು ಹೊರತು ಪಡಿಸಿ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿದ್ದು ಹೆದ್ದಾರಿ ಸಹಿತ ಮುಖ್ಯ ರಸ್ತೆಗಳು ಬಿಕೋ ಎನ್ನುತ್ತಿತ್ತು. ಜಿಲ್ಲೆಯ […]

ಪ್ರಶಾಂತ್ ಕೊಲೆ ಆರೋಪಿಗಳ ಬಂಧನಕ್ಕೆ ಮುನೀರ್ ಕಾಟಿಪಳ್ಳ ಆಗ್ರಹ

Thursday, October 15th, 2015
prashanth Murder

ಮಂಗಳೂರು : ಭಜರಂಗದಳದ ಕಾರ್ಯಕರ್ತ, ಮೂಡಬಿದ್ರೆಯ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ. ನಡುಬೀದಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಕೊಲೆಯಾದ ವಾರದ ನಂತರವೂ ಪತ್ತೆ ಹಚ್ಚಲು ಸಾಧ್ಯವಾಗದಿರುವುದು ನಾಗರಿಕ ವಲಯದಲ್ಲಿ ಭೀತಿಯ ವಾತಾವರಣವನ್ನು ಉಂಟು ಮಾಡಿದೆ. ಈ ಹಿಂದೆಯೂ ಕೋಮುದ್ವೇಷದಿಂದ ಎನ್ನಲಾದ ಸರಣಿ ಪ್ರತೀಕಾರದ ಕೊಲೆಗಳು ನಡೆದಿತ್ತು. ಆಗೆಲ್ಲ ಪ್ರಕರಣದ ಆಳಕ್ಕಿಳಿದು ಸೂತ್ರಧಾರಿಗಳನ್ನು ಕಂಡುಹಿಡಿಯುವಲ್ಲಿ ಪೊಲೀಸ್ ಇಲಾಖೆ ವಿಫಲವಾದುದರಿಂದ ಜಿಲ್ಲೆಯ ಜನತೆ ಅಪಾರವಾದ […]