ನೂರು ರೂಪಾಯಿಗೆ ಗಂಡ ಹೆಂಡತಿ ಜಗಳ, ಗಂಡನನ್ನು ಕೊಲೆ ಮಾಡಿದ ಬಾವ

Thursday, February 24th, 2022
Keshava Poojary

ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ (47) ಮೃತಪಟ್ಟವರು. ಅವರ ಬಾವ ಮಣಿನಾಲ್ಕೂರು ಗ್ರಾಮದ ಅಶೋಕ್ ಯಾನೆ ಚಂದಪ್ಪ (45) ಪೂಜಾರಿ ಬಂಧಿತ ಆರೋಪಿ. ಕೇಶವ ಪೂಜಾರಿ ಮಂಗಳೂರಿನಲ್ಲಿ ಕೆಲಸಕ್ಕಿದ್ದು, ಜ.31ರಂದು ಮನೆಗೆ ಬಂದ ಅವರು, ಸಂಬಳದ ಹಣವನ್ನು ಪತ್ನಿ ಪ್ರೇಮಾ ಅವರಲ್ಲಿ ನೀಡಿದ್ದಾರೆ. ಬಳಿಕ ನೂರು ರೂಪಾಯಿ ಕೇಳಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಪ್ರೇಮಾ ಈ ವಿಚಾರವನ್ನು ತನ್ನ ಅಣ್ಣ ಅಶೋಕ್ ಪೂಜಾರಿಗೆ ತಿಳಿಸಿದ್ದಾರೆ. ಮನೆಗೆ ಬಂದ […]

 ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ನಿಧನ

Tuesday, July 13th, 2021
Sunil Heggaravalli

ಚಿಕ್ಕಮಗಳೂರು  :  ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ತಮ್ಮ ವೃತ್ತಿಜೀವನವನ್ನುಆರಂಭಿಸಿದ ಸುನೀಲ್ ಹೆಗ್ಗರವಳ್ಳಿ, ತಮ್ಮ ಸ್ವಂತ ಜಿಲ್ಲೆಯಾದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಸುನೀಲ್ ಯವರನ್ನು ಮಧ್ಯಾಹ್ನ ಎದೆನೋವು ಕಾಣಿಸಿಕೊಂಡಬಳಿಕ ಗೋಣಿಬೀಡು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು,  ಆದರೆ ಆಸ್ಪತ್ರೆಯಲ್ಲಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ರವಿ‌‌ ಬೆಳಗೆರೆ ಅವರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು. […]

ಶೂಟಿಂಗ್‌ ವೇಳೆ ಹಂಸಲೇಖಗೆ ಎದೆನೋವು… ಆಸ್ಪತ್ರೆಗೆ ದಾಖಲು

Tuesday, April 10th, 2018
hamsalekha

ಬೆಂಗಳೂರು: ಸರಿಗಮಪ ಕಾರ್ಯಕ್ರಮದ ಶೂಟಿಂಗ್ ವೇಳೆ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖಗೆ ತೀವ್ರ ಎದೆನೋವು ಕಾಣಿಸಿಕೊಂಡ ಪರಿಣಾಮ ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಹಂಸಲೇಖ ಅವರನ್ನು ದಾಖಲಿಸಲಾಗಿದೆ. ಈ ಹಿಂದೆಯೂ ಒಮ್ಮೆ ಹೃದಯ ಸಂಬಂಧಿ ಕಾಯಿಲೆಗೆ ಹಂಸಲೇಖ ಚಿಕಿತ್ಸೆ ಪಡೆದಿದ್ದರು. ಮತ್ತೆ ಈಗ ಎದೆನೋವು ಕಾಣಿಸಿಕೊಂಡಿರುವುದರಿಂದ ಕುಟುಂಬಸ್ಥರು ಆತಂಕಗೊಂಡಿದ್ದಾರೆ.