ಸ್ಕೂಟಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೆ ಯುವಕನೋರ್ವ ಪರಾರಿ..!

Monday, November 5th, 2018
petrol

ಚಿಕ್ಕಮಗಳೂರು: ಸ್ಕೂಟಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೆ ಯುವಕನೋರ್ವ ಪರಾರಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಈ ಘಟನೆ ನಡೆದಿದ್ದು, ಬಾಳೆಹೊನ್ನೂರಿನ ಶ್ರೀರಂಭಾಪುರಿ ಸವಿ೯ಸ್ ಸ್ಟೇಷನ್ಗೆ ಸ್ಕೂಟಿಯಲ್ಲಿ ಬಂದ ಯುವಕ 300 ರೂ. ಪೆಟ್ರೋಲ್ ಹಾಕಿಸಿ ಹಣ ಪಾವತಿಸದೆ ಪರಾರಿಯಾಗಿದ್ದಾನೆ. ಹಣ ನೀಡದೆ ಯುವಕ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೊದಲಿಗೆ ಎಟಿಎಂ ಕಾರ್ಡ್ ಕೊಟ್ಟಿದ್ದಾನೆ. ಆದರೆ ಅದರಲ್ಲಿ ಹಣ ಇಲ್ಲದ ಕಾರಣ ಪೆಟ್ರೋಲ್ ಬಂಕ್ನವರು ಯುವಕನ ಬಳಿ ಹಣ ಕೇಳಿದ್ದಾರೆ. […]

ಜಿಲ್ಲೆಯಲ್ಲಿ ಭೂ ಕುಸಿತ..ಸಂಪರ್ಕ ಕಳೆದುಕೊಂಡ ಗ್ರಾಮಗಳು!

Thursday, August 16th, 2018
chikmagaluru

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಆರ್ಭಟಕ್ಕೆ ಕೆಲವೆಡೆ ಭೂ ಕುಸಿತವಾಗಿದ್ದು, ಕಳಸ-ಹೊರನಾಡು, ಕೊಪ್ಪ, ಎನ್.ಆರ್.ಪುರ, ಮೇಲ್ಪಾಲ್, ಹೊದಸಾಳು, ಕೆರೆಹಕ್ಲು ಸೇರಿದಂತೆ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ನಗರದ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಿದ್ದು 45 ದಿನದಲ್ಲಿ 15 ನೇ ಬಾರಿ ಮುಳುಗಿದೆ. ಹೆಬ್ಬಾಳೆ ಸೇತುವೆ ಕುದುರೆಮುಖ, ಕಳಸದ ಭಾಗದಲ್ಲಿ ಮಳೆ ಆಗುತ್ತಲೇ ಇರುವುದರಿಂದ ಭದ್ರೆಗೆ‌ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕಳಸ-ಹೊರನಾಡು ಸಂಪರ್ಕ ಸೇತುವೆಯನ್ನು ಸಂಪೂರ್ಣ ಮುಳುಗುವಂತೆ ಮಾಡಿದೆ. ಇನ್ನೂ ಮಳೆಯಿಂದ ಮೂರು ದಿನದಲ್ಲಿ ನಾಲ್ಕೈದು ಕಡೆ […]

ಕಳೆದ 9 ದಿನಗಳಿಂದ ವರುಣನ ಅಬ್ಬರ..ಮಲೆನಾಡು ತತ್ತರ!

Saturday, July 14th, 2018
chik-magaluru

ಚಿಕ್ಕಮಗಳೂರು: ಸರಿ ಸುಮಾರು ಒಂದು ತಿಂಗಳು, ಅದ್ರಲ್ಲೂ ಕಳೆದ 9 ದಿನಗಳಿಂದ ಮಲೆನಾಡಲ್ಲಿ ಸೂರ್ಯನ ಕಿರಣಗಳು ನೆಲಕ್ಕೆ ಬೀಳದಂತೆ ಮೋಡಗಟ್ಟಿ ಸುರಿಯುತ್ತಿರುವ ವರುಣನ ಅಬ್ಬರಕ್ಕೆ ಅಕ್ಷರಶಃ ಮಲೆನಾಡು ತತ್ತರಿಸಿ ಹೋಗಿದೆ. ತನ್ನ ಅಸ್ತಿತ್ವವನ್ನೇ ಕಳೆದುಕೊಂಡು ಮಕ್ಕಳ ಆಟದ ಮೈದಾನವಾಗಿದ್ದ ಕೆರೆ, ಹಳ್ಳ-ಕೊಳ್ಳ, ನದಿಗಳೆಲ್ಲಾ ಮೈದುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಹೌದು, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿಯಲ್ಲಿ ಸುರಿಯುತ್ತಿರೋ ಮಹಾಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇತ್ತ ಮಲೆನಾಡಿನಾದ್ಯಂತ ಅಸಂಖ್ಯಾತ ಕೃತಕ ಫಾಲ್ಸ್ಗಳು ಜನ್ಮತಾಳಿವೆ. ಗುಡ್ಡದಿಂದ ಹರಿಯೋ ನೀರು ಒಂದೆಡೆ […]

ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ… ರೈತರ ಮೊಗದಲ್ಲಿ ಮಂದಹಾಸ

Monday, June 4th, 2018
heavy-rain

ಬೆಂಗಳೂರು: ಭಾನುವಾರವೂ ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿತ್ತು. ಧಾರವಾಡ, ಚಿಕ್ಕಮಗಳೂರು, ಹಾವೇರಿ, ತುಮಕೂರು ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ, ಲಕಮಾಪುರ, ಯಾದವಾಡ ಸೇರಿದಂತೆ ಅನೇಕ ಕಡೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಕೆಲವೆಡೆ ನೆರೆ ಕೂಡ ಬಂದಿದೆ. ತಾಲೂಕಿನ ಉಪ್ಪಿನ ಬೆಟಗೇರಿಯಿಂದ ಹನುಮನಹಾಳಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ನೀರು ತುಂಬಿ ಬಂದಿದ್ದು, ಆ ಮಾರ್ಗ ಸಂಪೂರ್ಣ ಬಂದ್ ಆಗಿತ್ತು. ಚಿಕ್ಕ ಹಳ್ಳ ಇದಾಗಿದ್ದು, ಸೇತುವೆ ಜಲಾವೃತಗೊಂಡಿತ್ತು. ಬೈಕ್ ಸವಾರರು ಧೈರ್ಯ […]