ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ ವರದಿ: ನಾಳೆ ತಜ್ಞರೊಂದಿಗೆ ಸಭೆ; ಹೊಸ ಮಾರ್ಗಸೂಚಿ ಜಾರಿಗೆ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Thursday, December 2nd, 2021
ನವದೆಹಲಿ : ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಾಳೆ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಪರಿಣತರೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ರಾಜ್ಯದಿಂದ ಎನ್ ಸಿ ಬಿ ಎಸ್ ಗೆ ಕಳುಹಿಸಿದ್ದ ಮಾದರಿಯಲ್ಲಿ ಕೇಂದ್ರ ಸರ್ಕಾರವು ಇಂದು ಎರಡು ಒಮಿಕ್ರಾನ್ ಪ್ರಕರಣಗಳನ್ನು ದೃಢ ಪಡಿಸಿದೆ. ಆದರೆ ವಿವರವಾದ ಪರೀಕ್ಷಾ ವರದಿ ಬಂದಿಲ್ಲ. […]