ಎಪಿಎಂಸಿ ಅಧ್ಯಕ್ಷರಾಗಿ ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ರಜನಿ ದುಗ್ಗಣ್ಣ ಆಯ್ಕೆ

Wednesday, July 15th, 2020
APMc

ಮಂಗಳೂರು : ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಹಿರಿಯ ಸದಸ್ಯ ಮೂಡಬಿದ್ರೆಯ ಕೃಷ್ಣರಾಜ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾರ್ಕಳ ತಾಲೂಕು ಪಂಚಾಯತ್‌ ಸದಸ್ಯರಾಗಿ,ಮಂಡಲ ಪ್ರಧಾನರಾಗಿ, ಮೂಡಬಿದ್ರೆ ಪುರಸಭೆಯ ಸದಸ್ಯರಾಗಿ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ, ಕೆಎಸ್‌ಆರ್‌ಟಿಸಿ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷರಾಗಿ ಮಾಜಿ ಮೇಯರ್‌ ರಜನಿ ದುಗ್ಗಣ್ಣ ಆಯ್ಕೆಯಾಗಿದ್ದು, ಅವರು  ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಆಗಿ ಕರ್ತವ್ಯ ನಿರ್ವಹಿಸಿದ್ದರು.

ನಮ್ಮ ಸರಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ…ಇದು ಸರಕಾರದ ದೊಡ್ಡ ಸಾಧನೆ: ಸಿದ್ದರಾಮಯ್ಯ

Friday, April 27th, 2018
siddaramaih

ಮಂಗಳೂರು: ನಮ್ಮ ಸರಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ.ಇದು ಸರಕಾರದ ದೊಡ್ಡ ಸಾಧನೆಯಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಟಿಎಂಎ ಪೈ ಹಾಲ್ ನಲ್ಲಿ ನಡೆದ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಕಳೆದ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿದ್ದ ಭರವಸೆಗಳ ಪೈಕಿ ಶೇ 90ರಷ್ಟನ್ನು ಈಡೇರಿಸಿದ್ದೇವೆ ಎನ್ನುವುದಕ್ಕೆ ಸಂತಸವಾಗುತ್ತದೆ ಎಂದರು. ಎಪಿಎಂಸಿಯಲ್ಲಿ ಆನ್ ಲೈನ್ ಮಾರುಕಟ್ಟೆ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದು ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಸರಕಾರ […]

ಕೃಷಿಕರು ಬಿಜೆಪಿ ಪರ ಸಂಸದ ನಳಿನ್ ಹರ್ಷ

Thursday, April 27th, 2017
Nalin Kumar

ಮಂಗಳೂರು : ಸುಳ್ಯ ಮತ್ತು ಪುತ್ತೂರು ಎಪಿಎಂಸಿಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದ್ದು, ಕೃಷಿಕರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಮತ್ತೆ ಸಾಬೀತು ಪಡಿಸಿದ್ದಾರೆ. ಕೃಷಿಕರ ವಿಶ್ವಾಸಕ್ಕೆ ಪೂರಕವಾಗಿ ಪಾರದರ್ಶಕ ಆಡಳಿತ ನೀಡಲು ಬಿಜೆಪಿ ಸದಾ ಬದ್ಧವಾಗಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಜನ ವಿರೋಧಿ ನೀತಿಯಿಂದ ಜನತೆ ರೋಸಿ ಹೋಗಿದ್ದಾರೆ. ನರೇಂದ್ರ ಮೋದಿ ಅವರ ನೇತ್ರತ್ವದಲ್ಲಿ ಕೇಂದ್ರ ಸರ್ಕಾರದ ಅಭಿವೃದ್ಧಿ ಪರ ಹಾಗೂ ಪಾರದರ್ಶಕ ಆಡಳಿತಕ್ಕೆ ಇಡೀ ದೇಶದಲ್ಲಿ ಜನ […]