Blog Archive

ಶಾಲಾ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆಯನ್ನು ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ.

Thursday, December 21st, 2017
ABVP-strike

ಮಂಗಳೂರು: ವಿಜಯಪುರ ನಗರದಲ್ಲಿ ದಿನಾಂಕ 19-12-2017 ರಂದು ಮಧ್ಯಾಹ್ನ ಬಾಲಕಿ ದಾನೇಶ್ವರಿ ಮೇಲೆನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತೀವ್ರವಾಗಿ ಖಂಡಿಸುತ್ತದೆ. ಅತ್ಯಾಚಾರ ಹಾಗೂ ಕೊಲೆ- ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರ ಮತ್ತು ಗೃಹಇಲಾಖೆಯನ್ನು ಆಗ್ರಹಿಸುತ್ತದೆ. ಘಟನೆಯ ಕುರಿತು ಪೋಲಿಸರಿಗೆ ದೂರು ನೀಡಲು ತೆರಳಿದಾಗ ಅಲ್ಲಿರುವ ಪೋಲಿಸರುಪ್ರಕರಣವನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ನಂತರ ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಮೃತ ಬಾಲಕಿಯ ಶವವನ್ನು […]

ವಿದ್ಯಾರ್ಥಿಗಳಿಗೆ ವಂಚನೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

Saturday, December 16th, 2017
ABVP-mangaluru

ಮಂಗಳೂರು: ನಗರದ ಕೊಲಾಸೋ ಪ್ಯಾರಾಮೆಡಿಕಲ್ ಕಾಲೇಜಿನ ಸುಮಾರು 150 ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ಯಾರಾಮೆಡಿಕಲ್ ಸೀಟು, ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನ ಕೊಡಿಸುವುದಾಗಿ ನಂಬಿಸಿ 7,000ಕ್ಕೂ ಹೆಚ್ಚು ಹಣ ಪಡೆದು ವಂಚನೆ ಮಾಡಿರುವ ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು. ಆರೋಪಿ ಮನೋಜ್ ಪೌಲ್ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ಆತ ತಲೆ ಮರೆಸಿಕೊಂಡಿದ್ದಾನೆ. ಪೊಲೀಸ್ ಇಲಾಖೆ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆಗೊಳಪಡಿಸಬೇಕು. ಅಲ್ಲದೆ ಬಡ-ಗ್ರಾಮೀಣ ವಿದ್ಯಾರ್ಥಿಗಳಿಂದ ವಂಚಿಸಿ ವಸೂಲಿ ಮಾಡಿರುವ ಹಣವನ್ನು […]

ರವಿಚಂದ್ರ ಪಿ.ಎಂ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ

Monday, July 4th, 2016
BJP Ravichandra

ಮಂಗಳೂರು : ಶ್ರೀ ರವಿಚಂದ್ರ ಪಿ.ಎಂ ಮಂಗಳೂರಿನಲ್ಲಿ ವಕೀಲರಾಗಿದ್ದು ವಿದ್ಯಾರ್ಥಿ ದೆಸೆಯಿಂದಲೂ ಎಬಿವಿಪಿ ಮುಖಂಡರಾಗಿ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಎಬಿವಿಪಿಯ ವಿವಿಧ ಜವಾಬ್ದಾರಿಗಳನ್ನು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಿ ರಾಜ್ಯಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ, ಅಧಿವಕ್ತ ಪರಿಷತ್ತಿನ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ, ಇದೀಗ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುತ್ತಾರೆ.

ಪ್ರಾಮಾಣಿಕ ಅಧಿಕಾರಿ ಡಿ.ಕೆ.ರವಿವರ ಸಾವಿನ ಪ್ರಕರಣವನ್ನು ಉನ್ನತ ತನಿಖೆಗೆ ವಹಿಸಿ

Tuesday, March 17th, 2015
ABvp protest

ಮಂಗಳೂರು : ರಾಜ್ಯದ ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿಯವರ ಸಾವಿನ ಕುರಿತಂತೆ ಉನ್ನತ ತನಿಖೆಯನ್ನು ನಡೆಸಬೇಕು ಮತ್ತು ರಾಜ್ಯದ ಪ್ರಾಮಾನಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕೆಂದು ಎಬಿವಿಪಿ ಆಗ್ರಹಿಸಿ ಮಂಗಳವಾರ ಎಬಿವಿಪಿ ನಗರದಲ್ಲಿ ಪ್ರತಿಭಟನೆಯನ್ನು ನಡೆಸಿತು. ಶಾರದ ಕಾಲೇಜಿನಿಂದ ಹೊರಟ ನೂರಾರು ಎಬಿವಿಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯ ಮೂಲಕ ಬಂದು ಬೆಸೆಂಟ್ ಕಾಲೇಜು ವೃತ್ತದ ಬಳಿ ಸೇರಿದರು. ಅಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎಬಿವಿಪಿ ನಗರ ಕಾರ್ಯದರ್ಶಿ ಜಯೇಶ್ ಮಾತನಾಡಿ, ಐಎಎಸ್ ಅಧಿಕಾರಿ ಡಿ. ಕೆ. ರವಿಯವರು ರಾಜ್ಯದ […]

ಐ.ಎ.ಎಸ್. ಅಧಿಕಾರಿ ರಶ್ಮೀ ಮಹೇಶ್ ಹಲ್ಲೆಗೆ ಎಬಿವಿಪಿ ಖಂಡನೆ

Saturday, October 18th, 2014
abvp

ಮಂಗಳೂರು : ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ ದಕ್ಷ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಹಲ್ಲೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಭ್ರಷ್ಟಾಚಾರವನ್ನು ನಿಯಂತ್ರಣದಲ್ಲಿ ಇಡಬೇಕಾದ ಸರ್ಕಾರವೇ ಭ್ರಷ್ಟಾಚಾರದ ಪರನಿಂತು ದಕ್ಷ ಅಧಿಕಾರಿಗೆ ಹಲ್ಲೆಯಾದಾಗ ಪೋಲೀಸ್ ಅಧಿಕಾರಿಗಳು ಇದ್ದರೂ ತಡೆಯಲಾಗದಿರುವುದು ವಿಷಾದನೀಯ. ಈ ವ್ಯವಸ್ಥೆಯನ್ನು ಸಾಮಾನ್ಯ ಜನರು ಸಹ ತಲೆ ತಗ್ಗಿಸುವಂತೆ ಮಾಡಿದೆ. ಈ ಘಟನೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರವು ಗಂಭೀರವಾಗಿ ತೆಗೆದುಕೊಂಡು ಹಲ್ಲೆ ನಡೆಸಿದ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಿ, ಮುಂದೆಂದೂ […]

ಪಿ.ಯು. ವಿದ್ಯಾರ್ಥಿಗಳಿಗೆ ತಕ್ಷಣವೇ ಪಠ್ಯ-ಪುಸ್ತಕ ವಿತರಿಸಲು ಎಬಿವಿಪಿ ಆಗ್ರಹ.

Tuesday, June 24th, 2014
ABVP

ಮಂಗಳೂರು : ಶೈಕ್ಷಣಿಕ ವರ್ಷ ಈಗಾಗಲೇ ಪ್ರಥಮ ಹಾಗೂ ದ್ವೀತಿಯ ವರ್ಷದ ತರಗತಿಗಳು ಆರಂಭವಾಗಿದೆ. ಆದರೂ ಇದುವರೆಗೂ ಪಠ್ಯ ಪುಸ್ತಕಗಳು ದೊರಕದೆ ವಿದ್ಯಾರ್ಥಿಗಳು, ಅಧ್ಯಾಪಕರು ಗೊಂದಲಿದಾರೆ ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ಪಠ್ಯಪುಸ್ತಕ ವಿತರಿಸುವಲ್ಲಿ ಗಮನ ಹರಿಸಿ, ಸಮಸ್ಯೆಯನ್ನು ಬಗೆಹರಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರವನ್ನು ಆಗ್ರಹಿಸಿ ಮಂಗಳವಾರ ಜೂನ್ 24 ರಂದು ಪಿವಿಎಸ್ ವೃತ್ತದ ಬಳಿ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಿತು. ಕರ್ನಾಟಕ ರಾಜ್ಯದಲ್ಲಿ 9 ಲಕ್ಷಕ್ಕೂ ಹೆಚ್ಚು ಪದವಿ ಪೂರ್ವದಲ್ಲಿ ವ್ಯಾಸಾಂಗ […]

ನಗರದ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ಸಾವು, ಎಬಿವಿಪಿ ವತಿಯಿಂದ ಪ್ರತಿಭಟನೆ

Saturday, September 28th, 2013
protest

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿನಿಯರ ನಾಪತ್ತೆ, ದೌರ್ಜನ್ಯ ಪ್ರಕರಣ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿತು. ನಗರ ಸಂಘಟನಾ ಕಾರ್ಯದರ್ಶಿ ಮಹಿಪಾಲ್, ಪ್ರತಿಭಟನೆಯನ್ನುದ್ದೇಶಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿನಿಯರ ನಾಪತ್ತೆ, ದೌರ್ಜನ್ಯ, ಅತ್ಯಾಚಾರದಂತಹ ಹೇಯ ಕೃತ್ಯಗಳು ಹೆಚ್ಚಾಗುತ್ತಿರುವುದು ಮಾನವ ಸಮಾಜ ತಲೆತಗ್ಗಿಸುವಂತಾಗಿದೆ. ಬುದ್ದಿವಂತರ ಜಿಲ್ಲೆ, ಶಿಕ್ಷಣದ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಇಂದು ಅತ್ಯಾಚಾರ, ದೌರ್ಜನ್ಯದಂತಹ ಹೇಯ ಕೃತ್ಯಗಳಿಗೆ ಹೆಸರಾಗುತ್ತಿರುವುದು ಅತ್ಯಂತ ಕಳವಳಕರಿಯಾಗಿದೆ […]

ಎಬಿವಿಪಿ ವಿದ್ಯಾರ್ಥಿಗಳಿಂದ ಕಾರ್ಗಿಲ್ ಹುತಾತ್ಮ ಯೋಧರಿಗೆ ಗೌರವ ನಮನ

Friday, July 26th, 2013
Abvp pay tribute to Kargil Martyr

ಮಂಗಳೂರು : ಕದ್ರಿ ವಾರ್ ಮೆಮೋರಿಯಲ್ ಸ್ಮಾರಕದ ಎದುರಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ ವತಿಯಿಂದ ಇಂದು ಜುಲೈ26ರಂದು ಕಾರ್ಗಿಲ್ ವಿಜಯೋತ್ಸವ ದಿವಸವನ್ನು ಆಚರಿಸಲಾಯಿತು. ಮತ್ತು ಹುತಾತ್ಮ ಯೋಧರಿಗೆ ಗೌರವವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಯೋಧರಾದ ಮಾಸ್ಕರೇನಸ್ ಮತ್ತು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪಗುಚ್ಚ ಇರಿಸಿದರು, ಮತ್ತು ಭಾಗವಹಿಸಿದ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡಿದರು. ಎ.ಬಿ.ವಿ.ಪಿ. ರಾಜ್ಯ ಕಾರ್ಯದರ್ಶಿ ಬಿ.ರಮೇಶ್ ಉಪಸ್ಥಿತರಿದ್ದರು. ಬಳಿಕ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಜ್ಯೋತಿ ಸರ್ಕಲ್ […]

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಸಂದೇಶ್.ಕೆ.ಎಲ್. ಆಯ್ಕೆ

Friday, July 19th, 2013
University College Students’ Union

ಮಂಗಳೂರು : ನಗರದ ಪ್ರತಿಷ್ಠಿತ ಸರ್ಕಾರಿ ಕಾಲೇಜಾದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿ ಚುನಾವಣೆಯಲ್ಲಿ. ಎಬಿವಿಪಿ ಒಟ್ಟು 31 ಸೀಟ್ ನಲ್ಲಿ 26 ಸೀಟುಗಳನ್ನು ಜಯಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸಂದೇಶ್.ಕೆ.ಎಲ್. ಮೂರನೇ ಬಿಎಸ್ಸಿ, ಕಾರ್ಯದರ್ಶಿ ಯಾಗಿ ಮಹೇಶ್ ರಾಜ್ ಮೂರನೇ ಬಿಎ, ಲಲಿತಕಲಾ ಕಾರ್ಯದರ್ಶಿ ಯಾಗಿ ಅವಿನಾಶ್ ಮೂರನೇ ಬಿಎ, ಜೊತೆ ಕಾರ್ಯದಶರ್ಿಯಾಗಿ ಶ್ವೇತಾ ಮೂರನೇ ಬಿಬಿಎಂ, ಜೊತೆ ಲಲಿತಕಲಾ ಕಾರ್ಯದರ್ಶಿ ಯಾಗಿ ಪವಿತ್ರಾ ಮೂರನೇ ಬಿಕಾಂ ಆಯ್ಕೆಯಾಗಿದ್ದಾರೆ. ಚುನಾವಣೆಯ ನಂತರ ವಿದ್ಯಾರ್ಥಿ […]

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೂಡಲೇ ಉಪನ್ಯಾಸಕರ ನೇಮಕಾತಿ ಮಾಡುವಂತೆ ಆಗ್ರಹಿಸಿ ಎಬಿವಿಪಿಯಿಂದ ನಗರ ಜ್ಯೋತಿವೃತ್ತದಲ್ಲಿ ಮಾನವ ಸರಪಳಿ

Tuesday, June 25th, 2013
abvp protest

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಶಾಖೆಯ ವತಿಯಿಂದ ಸರ್ಕಾರಿ ಪದವಿ ಕಾಲೇಜುಗಳಿಗೆ ಉಪನ್ಯಾಸಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ನಗರದ ಜ್ಯೋತಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಪ್ರತಿಭಟಿಸಲಾಯಿತು. ನಂತರ ಜ್ಯೋತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಲ್ಮಠ ಸರ್ಕಾರಿ ಕಾಲೇಜಿನ ಅಧ್ಯಕ್ಷೆ ಕು. ರಕ್ಷಿತಾ, ಕು. ದಿವ್ಯಾ, ಕು. ವಿನುತಾ ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯವು ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ […]