ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನೆಪದಲ್ಲಿ ಅಕ್ರಮ ಮರಳು ದಾಸ್ತಾನು ವಶ
Wednesday, April 25th, 2018ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನೆಪದಲ್ಲಿ ಅಕ್ರಮ ಮರಳು ದಾಸ್ತಾನು ಮಾಡಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಅಕ್ರಮ ಮರಳನ್ನು ವಶಪಡಿಸಿಕೊಂಡಿದ್ದಾರೆ. ಬಿ.ಸಿ.ರೋಡ್ ಬಳಿಯ ಎಲ್ ಎನ್ ಟಿ ಪ್ಲಾಂಟ್‌ನಲ್ಲಿ ಅಪಾರ ಮರಳು ಸಂಗ್ರಹ ಮಾಡಲಾಗಿತ್ತು. ಪರವಾನಿಗೆ ಇಲ್ಲದೆ ದಾಸ್ತಾನು ಮಾಡಿದ್ದರಿಂದ 1,100 ಲೋಡ್ ಮರಳು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮರಳು ವಶಪಡಿಸಿಕೊಂಡಿದ್ದಾರೆ. 33 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ದಾಸ್ತಾನು ಜಪ್ತಿ ಮಾಡಲಾಗಿದೆ.