ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

Monday, March 28th, 2022
Anushree

ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ. ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅನುಶ್ರೀ ತಾಲೂಕಿನ ವಿದ್ಯೋದಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆ : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಪೊಲೀಸ್ ಕಾವಲು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳು ಗೈರು

Monday, March 28th, 2022
sslc Exam

ಮಂಗಳೂರು : ವಿವಾದದ ಕೇಂದ್ರವಾಗಿರುವ ಹಿಜಾಬ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೇಂದ್ರಗಳ ಆವರಣದವರೆಗೂ ಹಿಜಾಬ್ ಧರಿಸಿ ಆಗಮಿಸುತ್ತಿರುವ ವಿದ್ಯಾರ್ಥಿನಿಯರು ಬಳಿಕ ಹಿಜಾಬ್ ತೆಗೆದಿರಿಸಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಇದೇ ವೇಳೆ ಖಾಸಗಿ ಶಾಲೆಗಳ, ಸಮವಸ್ತ್ರ ಜತೆಗೆ ಹಿಜಾಬ್ ಭಾಗವಾಗಿರುವ ಶಾಲೆಗಳ ವಿದ್ಯಾರ್ಥಿನಿಯರು ತಮ್ಮ ಶಾಲೆಯ ಮುಖ್ಯಸ್ಥರ ಅನುಮತಿ ಮೇರೆಗೆ ಹಿಜಾಬ್ ನೊಂದಿಗೆ ಪರೀಕ್ಷೆ ಬರೆದಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭಆರಂಭ ಗೊಂಡಿದ್ದು ,ಇಂದು ಪ್ರಥಮ ಭಾಷಾ ಪರೀಕ್ಷೆ  ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29,712 ವಿದ್ಯಾರ್ಥಿಗಳು […]

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಮೃತ ಅಪ್ಪನ ಕೊನೆಯ ಆಸೆ ನೆರವೇರಿಸಿದ ಮಗಳು

Friday, July 3rd, 2020
anusha bajantri

ಗದಗ :  ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಅಪ್ಪ ಮಗಳ ಓದಿನ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಆದರೆ ಮಗಳು ಎಸ್‌ಎಸ್‌ಎಲ್‌ಸಿ ಕೊನೆಯ ಪರೀಕ್ಷೆ ಬರೆಯುವ ದಿನವೇ ಮೃತಪಟ್ಟಿದ್ದಾರೆ. ಅಪ್ಪನ ಆತ್ಮಕ್ಕೆ ನೋವು ಮಾಡಬಾರದು ಎನ್ನುವ ಕಾರಣಕ್ಕೆ ಮಗಳು  ಇಂದು ನಡೆದ ಎಸ್‌ಎಸ್‌ಎಲ್‌ಸಿ ಕೊನೆಯ ಪರೀಕ್ಷೆ ಬರೆದು ಬಂದಿದ್ದಾಳೆ. ಗದಗದ ಬಿಇಒ ಕೆಳದಿಮಠ ಸಮೀಪದ  ಅನುಷಾ ಭಜಂತ್ರಿ ಎಂಬ ವಿದ್ಯಾರ್ಥಿನಿ. ತಂದೆ ಸುರೇಶ್‌ ಎನ್ನುವವರು ಮೂತ್ರಪಿಂಡದ ಸಮಸ್ಯೆಯಿಂದ ಬೆಳಗ್ಗೆ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಮನೆಯಲ್ಲಿ ಎಲ್ಲ ರೀತಿಯ ಸಿದ್ಧತೆಯೂ ನಡೆದಿತ್ತು. ಆದರೆ ಸದಾ ತನ್ನ ಶಿಕ್ಷಣದ ಬಗ್ಗೆ […]

ಕೋವಿಡ್ ಸಿದ್ದತೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

Thursday, June 25th, 2020
sslc exam

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 95 ಪರೀಕ್ಷಾ ಕೇಂದ್ರಗಳಲ್ಲಿ 30835 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಇದಕ್ಕಾಗಿ 1585 ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಬಂಟ್ವಾಳ – 5300, ಬೆಳ್ತಂಗಡಿ – 3849, ಮಂಗಳೂರು ಉತ್ತರ – 6584, ಮಂಗಳೂರು ದಕ್ಷಿಣ – 5968, ಮೂಡಬಿದ್ರೆ – 2107, ಪುತ್ತೂರು – 5007, ಸುಳ್ಯ – 2020 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಪಾಡಿ […]

ನಾಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು ಗಮನಿಸಿ

Wednesday, June 24th, 2020
sslc exam

ಬೆಂಗಳೂರು :  ಕೊರೊನಾ ಸೋಂಕಿನ ಭೀತಿ ನಡುವೆಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸರ್ಕಾರ  ತೀರ್ಮಾನ ಕೈಗೊಂಡಿರುವ  ಹಿನ್ನಲೆಯಲ್ಲಿ  ರಾಜ್ಯಾದ್ಯಂತ  8,48,203 ವಿದ್ಯಾರ್ಥಿಗಳು ಗುರುವಾರ  ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಇರುವ 3209 ಪರೀಕ್ಷಾ ಕೇಂದ್ರಗಳಲ್ಲಿ 4,48,560 ಬಾಲಕರು ಮತ್ತು 3,99,643 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದು, ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 7115 ಥರ್ಮಲ್ ಸ್ಕ್ಯಾನರ್, 34 ಜಿಲ್ಲಾ ಕೇಂದ್ರದ ಹೆಲ್ಪ್‍ಡೆಸ್ಕ್, 204 ತಾಲ್ಲೂಕು ಕೇಂದ್ರದ ಹೆಲ್ಪ್‍ಡೆಸ್ಕ್, 3209 ಕೇಂದ್ರಗಳಲ್ಲಿ 5755 ಆರೋಗ್ಯ ತಪಾಸಣೆ ಕೇಂದ್ರಗಳನ್ನು ತೆರೆಯಲಾಗಿದೆ. […]

ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಪೋಷಕರು ,ಶಿಕ್ಷಕರು ಸಹಕರಿಸಬೇಕು-ಎ.ಬಿ.ಇಬ್ರಾಹಿಂ

Thursday, February 6th, 2014
dc Ibrahim

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆ ಅತ್ಯಂತ ಹೆಚ್ಚು ಸುಶಿಕ್ಷಿತರನ್ನು ಹೊಂದಿರುವ ಜಿಲ್ಲೆಯಾಗಿದ್ದರೂ ಸಹ 2-3 ವರ್ಷಗಳಿಂದ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಮಾಣ ಅತ್ಯಂತ ಕಳವಳಕಾರಿಯಾಗಿದ್ದು ಫಲಿತಾಂಶ ಪ್ರಮಾಣ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಪೋಷಕರು/ಶಿಕ್ಷಕರು ಸಹಕರಿಸುವಂತೆ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆ ಸಾಕ್ಷರತೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.ನೈರ್ಮಲ್ಯದಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಹಾಗೂ ರಾಷ್ಟ್ರ ಮಟ್ಟದಲ್ಲಿ […]

ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ 691ಅಭ್ಯರ್ಥಿಗಗಳ ಗೈರುಹಾಜರಿ

Friday, April 1st, 2011
ಎಸ್ಎಸ್ಎಲ್ಸಿ ಪರೀಕ್ಷೆ

ಮಂಗಳೂರು  : ಇಂದಿನಿಂದ ದಿನಾಂಕ 1-4-11 ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಗೆ 691 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ ಚಾಮೇಗೌಡ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 32742 ವಿದ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದರು. ಅತೀ ಹೆಚ್ಚು ಗೈರು ಹಾಜರಾದ 388 ವಿದ್ಯಾರ್ಥಿಗಳು ಮಂಗಳೂರು ನಗರ ಪ್ರದೇಶದಲ್ಲಾದರೆ ಮೂಡಬಿದ್ರೆಯಲ್ಲಿ ಕನಿಷ್ಠ 17 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಉಳಿದಂತೆ ಮಂಗಳೂರು ತಾಲೂಕಿನಲ್ಲಿ 92, ಬಂಟ್ವಾಳದಲ್ಲಿ 71, ಪುತ್ತೂರಿನಲ್ಲಿ […]