ಸಚಿವರಿಂದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ: ಖುದ್ದು ಸಿದ್ಧತೆ ಪರಿಶೀಲನೆ

Saturday, July 17th, 2021
SureshKumar

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಈಗಾಗಲೇ ಮಕ್ಕಳು ತಮ್ಮ ಶಾಲೆಗಳಿಂದ ಪರೀಕ್ಷಾ ಪ್ರವೇಶಪತ್ರಗಳನ್ನು ಪಡೆದುಕೊಂಡಿದ್ದು, ಪರೀಕ್ಷೆಗೆ ಹಾಜರಾಗಲು ಉತ್ಸುಕರಾಗಿದ್ದಾರೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರದಿಂದ ಆರಂಭವಾಗಲಿರುವ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ಧತೆಗಳನ್ನು ಮತ್ತು ಅಣಕು ಪರೀಕ್ಷೆಗಳನ್ನು ಪರಿಶೀಲಿಸಲು ಶನಿವಾರ ಬೆಂಗಳೂರು ನಗರದ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಈ ಬಾರಿಯ […]

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆ: ಸಚಿವ ಸುರೇಶ್ ಕುಮಾರ್

Wednesday, July 7th, 2021
Suresh Kumar

ಬೆಂಗಳೂರು: ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಲಸಿಕೆ ಪಡೆಯುವುದರೊಂದಿಗೆ ಪರೀಕ್ಷೆ ಸುರಕ್ಷಿತ ವಾತಾವರಣದಲ್ಲಿ ಅಚ್ಚುಕಟ್ಟಾಗಿ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಕುರಿತಂತೆ ಮಕ್ಕಳು ಮತ್ತು ಪೋಷಕರಲ್ಲಿ ಆತ್ಮ ವಿಶ್ವಾಸ ಮೂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ಮತ್ತು ಬಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಮಾರ್ಗದರ್ಶನ […]

ಎಸ್ಸೆಸ್ಸೆಲ್ಸಿ ಪರೀಕ್ಷೆ : ಅಚ್ಚುಕಟ್ಟಿನ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

Saturday, July 3rd, 2021
SSlc Exam

ಮಂಗಳೂರು : ಜು. 19 ಹಾಗೂ 22 ರಂದು ನಡೆಯಲಿರುವ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಅವಗಡಗಳು ಎದುರಾಗದಂತೆ ಅಚ್ಚುಕಟ್ಟಿನ ಸಿದ್ಧತೆಗಳನ್ನು ಮಾಡಿಕೊಂಡು ಸುಸೂತ್ರವಾಗಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜು.3ರ ಶನಿವಾರ ಹಮ್ಮಿಕೊಳ್ಳಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ […]

ಎಸ್ಸೆಸ್ಸೆಲ್ಸಿ ಪರೀಕ್ಷೆ ಏಕೆ ರದ್ದುಗೊಳಿಸಬೇಕು ? ಇಲ್ಲಿವೆ ಉತ್ತರಗಳು

Tuesday, May 26th, 2020
sslc exam

ಹುಬ್ಬಳ್ಳಿ: ಒಂದೆಡೆ ಕೊರೋನಾ ಭೀತಿಯಿಂದ ಇಡೀ ರಾಜ್ಯವೇ ಲಾಕ್‌ ಡೌನ್‌ ನಲ್ಲಿಯೇ ಎರಡು ತಿಂಗಳು ಕಾಲ ಕಳೆದಿದೆ. ಈಗ ವಿದ್ಯಾರ್ಥಿಗಳ ಭವಿಷ್ಯದ ಮುಂದಿನ ಭದ್ರ ಬುನಾದಿಯಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಒಂದು ಬಾರಿ ಮುಂದೂಡಲಾಗಿತ್ತು. ನಂತರ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಮತೆಯೇ ಸವಾಲಾಗಿತ್ತು. ಕೂಡಲೇ ಎಚ್ಚೆತ್ತ ಸರಕಾರ ರೆಡಿಯೋ ಹಾಗೂ ಟಿವಿ ಮಾಧ್ಯಮಗಳಲ್ಲಿ ಹಲವಾರು ಪರೀಕ್ಷಾ ಪೂರ್ವ ಪದ್ಧತಿ ಹಾಗೂ ವಿದ್ಯಾಭ್ಯಾಸದ ಮನನ ಮಾಡಲಾರಂಭಿಸಿದೆ. ಅದರಂತೆ ಕೆಲವು ಶಾಲೆಗಳು ಹಾಗೂ ಟ್ಯಟೋರೀಯಲ್‌ ಗಳು ಆನಲೈನ್‌ ತರಬೇತಿ ನೀಡುತ್ತಿವೆ. ಆದರೆ ಎಳೆ […]

ಕೋವಿಡ್-19 ಸೋಂಕು : ಐಸಿಎಸ್ಇ ದ್ವಿತೀಯ ಪಿಯು ಪರೀಕ್ಷೆ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ

Thursday, March 19th, 2020
parikshe

ನವದೆಹಲಿ : ಕೋವಿಡ್-19 ಸೋಂಕು ರೋಗ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಐಸಿಎಸ್ ಇ ಬೋರ್ಡ್ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಗುರುವಾರ ಮುಂದೂಡಿದೆ. ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡಲಾಗಿದೆ ಎಂದು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ ಸಿಇ) ಚೀಫ್ ಎಕ್ಸಿಕ್ಯೂಟಿವ್ ಗೇರೈ ಅರ್ಥೂನ್ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಈಗಾಗಲೇ ಸಿಬಿಎಸ್ ಇ ವೇಳಾಪಟ್ಟಿ ಘೋಷಿಸಿತ್ತು. ಆದರೆ ಕೋವಿಡ್-19 ವೈರಸ್ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಪರೀಕ್ಷೆ ಮುಂದೂಡಲಾಗಿದೆ. […]