ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಎ. ಸುರೇಶ್ ರೈ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Thursday, November 23rd, 2023
suresh-rai

ಮಂಗಳೂರು: ಸೌಹಾರ್ದ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಎ. ಸುರೇಶ್ ರೈ ಅವರಿಗೆ “ಸಹಕಾರ ರತ್ನ” ಪ್ರಶಸ್ತಿಯನ್ನು ವಿಜಯಪುರದಲ್ಲಿ ಪ್ರದಾನ ಮಾಡಲಾಯಿತು. 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರಂಭದಲ್ಲಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರು ಶ್ರೀ ಎ.ಸುರೇಶ್ ರೈಯವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಸಂಕಲ್ಪದAತೆ ಗ್ರಾಮವಿಕಾಸದಿಂದ ರಾಷ್ಟçವಿಕಾಸ ಎಂಬ ಪರಿಕಲ್ಪನೆಯಿಂದ ಸಂಸ್ಕಾರ-ಸಹಕಾರ-ಸಂಘಟನೆ-ಸಮೃದ್ಧಿ […]

ಗ್ರಾನೈಟ್ ತುಂಬಿದ ಲಾರಿ ಪಲ್ಟಿಯಾಗಿ, ಐವರು ಗಂಭೀರ

Wednesday, October 4th, 2023
granite-truck

ವಿಟ್ಲ : ಗ್ರಾನೈಟ್ ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು ಐವರು ಗಂಭೀರ ಗಾಯಗೊಂಡ ಘಟನೆ ಕರೋಪಾಡಿ ಗ್ರಾಮದ ಒಡಿಯೂರಿನಲ್ಲಿ ನಡೆದಿದೆ. ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಲಾರಿಯಲ್ಲಿದ್ದ ಉತ್ತರ ಭಾರತದ ಮೂಲದ ಐವರು ಕಾರ್ಮಿಕರ ಕೈಕಾಲು ಛಿದ್ರಗೊಂಡಿದೆ. ಇನ್ನು ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ, ಶ್ರೀ ದತ್ತ ಜಯಂತಿ ಮಹೋತ್ಸವ

Saturday, December 11th, 2021
Datta jayanthi

ಒಡಿಯೂರಿನಲ್ಲಿ ‘ಮನೆಗೊಂದು ಶ್ರೀಗಂಧದ ಗಿಡ ಶ್ರೀಗಂಧ ಬೆಳೆಯೋಣ’ ಯೋಜನೆಯ ಆರಂಭೋತ್ಸವ

Thursday, July 8th, 2021
odiyuru

ವಿಟ್ಲ: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ – 2021ರ ಪ್ರಯುಕ್ತ ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ‌ನಡೆದ ‘ಮನೆಗೊಂದು ಶ್ರೀಗಂಧದ ಗಿಡ ಶ್ರೀಗಂಧ ಬೆಳೆಯೋಣ’ ಯೋಜನೆಯ ಆರಂಭೋತ್ಸವವನ್ನು ದೀಪ ಬೆಳಗಿಸುವ ಮೂಲಕ ಜು.8 ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿ ಆಶೀರ್ವಚನ ನೀಡಿದರು. ಬಳಿಕ ಮಾತನಾಡಿದ ಅವರು ಹಣ್ಣು ಹಂಪಲಿನ ಗಿಡಗಳನ್ನು‌ ನೆಟ್ಟು ಪ್ರಾಣಿ ಪಕ್ಷಿಗಳಿಗೆ ಆಹಾರ ಒದಗಿಸಲು ಸಹಕರಿಸುವುದರೊಂದಿಗೆ ಔಷದೀಯ ಗಿಡಗಳನ್ನು ಬೆಳೆಸುವ ಯೋಚನೆ ಇದೆ. ಪ್ರಕೃತಿಯನ್ನು ಗುರುವಾಗಿ ಕಂಡದ್ದು ಭಗವಾನ್ ದತ್ತಾತ್ರೇಯ. ನಿಮ್ಮ […]

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾವೂರು ಶಾಖೆಯ ಉದ್ಘಾಟನೆ

Friday, June 29th, 2018
odiyuru bank

ಮಂಗಳೂರು : ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ನೂತನ ಕಾವೂರು ಶಾಖೆಯನ್ನು ಜೂನ್ 29, ಶುಕ್ರವಾರದಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನಗೈದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರದ ಶಾಸಕರಾದ ಡಾ| ವೈ ಭರತ್ ಶೆಟ್ಟಿ, ಮೂಡಬಿದ್ರಿ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ದೀಪಕ್ ಪೂಜಾರಿ, ಮಾಜಿ ಮೇಯರ್ ಶ್ರೀಮತಿ ಹಿಲ್ಡಾ ಆಳ್ವ ಮತ್ತಿತರರು ಉಪಸ್ಥಿತರಿದ್ದರು. ಒಡಿಯೂರು ಶ್ರೀ […]

ಒಡಿಯೂರು ಗ್ರಾಮ ವಿಕಾಶ ಯೋಜನೆಯ ವಾರ್ಷಿಕೊತ್ಸವ

Monday, June 29th, 2015
Odiyuru

ಬಂಟ್ವಾಳ: ಆಧುನಿಕತೆಯ ಬದುಕಿನಲ್ಲಿ ಹೆಜ್ಜೆ ಇಡುವಾಗ ಸಂಸ್ಕಾರವನ್ನು ಮೈಗೂಡಿಸಿಕೊಂಡಲ್ಲಿ ಧರ್ಮಕ್ಕೆ ಚ್ಯುತಿ ಬರುವುದಿಲ್ಲ, ಧರ್ಮದ ಉಳಿವು ಆದರೆ ಮಾತ್ರ ರಾಷ್ಟ್ರದ ಗೆಲುವು ಸಾಧ್ಯ ಎಂದು ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಶ್ರೀ ಗುರುದೇವನಂದ ಸ್ವಾಮೀಜಿ ಹೇಳಿದರು. ಅವರು ಶ್ರೀ ಶಾರದ ಭಜನಾ ಮಂದಿರ ನಗ್ರಿ ಇಲ್ಲಿ ನಡೆದ ಒಡಿಯೂರು ಗ್ರಾಮ ವಿಕಾಶ ಯೋಜನೆಯ ವಾರ್ಷಿಕೊತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬದುಕಿಗೆ ಸಂಸ್ಕಾರ ಸಿಕ್ಕಾಗ ಸಂಘಟನ್ಮಾತಕವಾಗಿ ಬೆಳೆಯಲು ಸಾಧ್ಯ , ಅ ನಿಟ್ಟಿನಲ್ಲಿ ಒಡಿಯೂರು ಗ್ರಾಮ ವಿಕಾಶ […]

ಜನವರಿ 5ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ‘ತುಳುನಾಡ್ದ ಜಾತ್ರೆ’

Tuesday, December 31st, 2013
odiyoor Tulunadu Jatre

ಮಂಗಳೂರು : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಫೆಬ್ರವರಿ 7ರಿಂದ ನಡೆಯಲಿರುವ ‘ತುಳುನಾಡ್ದ ಜಾತ್ರೆ’ ಬಲೇ ತೇರ್ ಒಯಿಪುಗ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 5ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿದೆ. ಜನವರಿ 5ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರಿನ ಜ್ಯೋತಿ ಸರ್ಕಲ್‌ನಿಂದ ‘ತುಳುನಾಡ್ದ ಜಾತ್ರೆ’ ಮೆರವಣಿಗೆ ಆರಂಭಗೊಳ್ಳಲಿದೆ. ಮೆರವಣಿಗೆಯನ್ನು ಕಲ್ಲಡ್ಕ ಶ್ರೀ ರಾಮ ವಿದ್ಯಾಸಂಸ್ಥೆಯ ಸಂಚಾಲಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಉದ್ಘಾಟಿಸಲಿದ್ದಾರೆ. ನೆಹರೂ ಮೈದಾನದಲ್ಲಿ ಸಂಜೆ 3.30ಕ್ಕೆ ತುಳುನಾಡ ಜಾತ್ರೆ ಕಾರ್ಯಕ್ರಮವನ್ನು ಉಡುಪಿಯ ಪೇಜಾವರ […]